Homeಕರ್ನಾಟಕಬಿಜೆಪಿಯಿಂದ ಜನಬರ್ಬಾದ್‌ ಯಾತ್ರೆ: ಸಿದ್ದರಾಮಯ್ಯ

ಬಿಜೆಪಿಯಿಂದ ಜನಬರ್ಬಾದ್‌ ಯಾತ್ರೆ: ಸಿದ್ದರಾಮಯ್ಯ

- Advertisement -
- Advertisement -

ಅರ್ಧ ರಾಜ್ಯ ಅಕಾಲಿಕ ಮಳೆಯಿಂದ ತತ್ತರಿಸಿಹೋಗಿದೆ. ಕೈಗೆ ಬಂದ ಬೆಳೆ, ಬಾಯಿಗೆ ಬರದೆ ಗದ್ದೆಯಲ್ಲಿ ಕೊಳೆಯುತ್ತಿದೆ. ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜನಸ್ವರಾಜ್ ಎಂಬ ನಾಟಕ ಪ್ರದರ್ಶನ ಮಾಡಿಕೊಂಡು ಹೊರಟಿದೆ. ಜನಸ್ವರಾಜ್ ಅಲ್ಲ, ಇದು ಜನಬರ್ಬಾದ್ ಯಾತ್ರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಮುಖ್ಯಮಂತ್ರಿ ಬೊಮ್ಮಾಯಿಯವರೇ, ನಿಮ್ಮ ಹನಿಮೂನ್ ಕಾಲ ಮುಗಿದಿದೆ. ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ. ಅವರನ್ನು ಮಳೆಪೀಡಿತ ಜಿಲ್ಲೆಗಳಿಗೆ ಓಡಿಸಿ. ಕಣ್ಣೀರಿಟ್ಟು ಗೋಳಾಡುತ್ತಿರುವ ಜನರ ಕಷ್ಟಗಳನ್ನು ಆಲಿಸಿ ಪರಿಹಾರ ಕಾರ್ಯ ಕೈಗೊಳ್ಳಲು ಹೇಳಿ ಎಂದು ಒತ್ತಾಯಿಸಿರುವ ಅವರು, ಜನ ಬರ್ಬಾದ್ ಯಾತ್ರೆ ಹ್ಯಾಷ್‌ಟ್ಯಾಗ್‌ನಲ್ಲಿ ಸರಣಿ ಟ್ವೀಟ್‌ ಮಾಡಿದ್ದಾರೆ.

ಸಾವಿರಾರು ಎಕರೆ ಭೂಮಿಯಲ್ಲಿ ಭತ್ತ, ರಾಗಿ, ಜೋಳ, ತರಕಾರಿ, ಬಾಳೆ, ತೆಂಗು ಎಲ್ಲವೂ ನಾಶವಾಗಿದೆ. ರೈತರು ಕಣ್ಣೀರಿನಿಂದ ಕೈತೊಳೆದುಕೊಳ್ಳುತ್ತಿದ್ದಾನೆ. ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ. ಜನ ಬೀದಿಪಾಲಾಗಿದ್ದಾರೆ. ಇಲ್ಲೊಂದು ಸರ್ಕಾರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಮೊದಲು ಅಧಿಕಾರಿಗಳ ತಂಡ ಕಟ್ಟಿಕೊಂಡು ಮಳೆಪೀಡಿತ ಪ್ರದೇಶಗಳಿಗೆ ಸಚಿವರು ಹೋಗಿ ಮಳೆ ನಷ್ಟದ ಅಂದಾಜು ನಡೆಸಿ ತಾತ್ಕಾಲಿಕ ಪರಿಹಾರ ನೀಡಲು ಸೂಚನೆ ನೀಡಿ. ಗಂಜಿ ಕೇಂದ್ರಗಳನ್ನುತೆರೆಯಲು ಹೇಳಿ. ನಷ್ಟದ ಸಮೀಕ್ಷೆ ನಡೆಸಿ ಹೆಚ್ಚಿನ ಪರಿಹಾರ ನೀಡಲು ಕೇಂದ್ರಕ್ಕೆ ಮನವಿ ಮಾಡಿ ಎಂದು ಒತ್ತಾಯಿಸಿದ್ದಾರೆ.

ಮಳೆ-ನೆರೆಗೆ ಸಿಕ್ಕಿ 20ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ, ಹತ್ತು ಸಾವಿರ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಾಶವಾಗಿದೆ, ಮನೆ ಬಿದ್ದು ಜನ ಬೀದಿಪಾಲಾಗಿದ್ದಾರೆ. ಇವರ ನೆರವಿಗೆ ಧಾವಿಸಬೇಕಾದ ಬಿಜೆಪಿ ಸರ್ಕಾರ ಜನಸ್ವರಾಜ್ ಎಂಬ ನಾಟಕ ಮಾಡುತ್ತಾ ತಿರುಗಾಡುತ್ತಿದೆ ಎಂದು ಟೀಕಿಸಿದ್ದಾರೆ.


ಇದನ್ನೂ ಓದಿರಿ: ರಾಜಸ್ಥಾನ ಸಚಿವ ಸಂಪುಟ ಪುನಾರಚನೆ: ಸಚಿನ್‌ ಪೈಲಟ್‌ ಬಣದ ಐವರು ಸೇರ್ಪಡೆ, 12 ಹೊಸ ಮುಖಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ಬಿಜೆಪಿ ಯಿಂದ ಮಾಡುತ್ತಿರುವ ಈ ಯಾತ್ರೆ ಯಿಂದ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಭರ್ಬದ್ ಆಗಬಹುದು ಎನ್ನುವ ಭಯ ಸಿದ್ದರಾಮುಲ್ಲಾ ಖಾನ್ ಗೆ .

  2. ಈ ಬಿಜೆಪಿ ಯವರಿಗೆ ಯಾತ್ರೆ ಜಾತ್ರೆ ಯಲ್ಲದೆ ಬೇರೆ ಏನಾದರೂ ಗೊತ್ತಾ,ಶವದಲ್ಲೂ ರಾಜಕೀಯ ಮಾಡುವ ಟೀಂ ಅವರದ್ದು

LEAVE A REPLY

Please enter your comment!
Please enter your name here

- Advertisment -

Must Read

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌ | Naanu Gauri

ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ: ಯೋಗೇಂದ್ರ ಯಾದವ್‌

0
ದೇಶದ ತುಂಬ ಹರಡಿರುವ ದ್ವೇಷ ರಾಜಕಾರಣವನ್ನು ಹಿಮ್ಮೆಟ್ಟಿಸುವ ಕೆಲಸ ಕರ್ನಾಟಕದಿಂದ ಆರಂಭವಾಗಬೇಕಿದೆ ಎಂದು ಸ್ವರಾಜ್ ಪಕ್ಷದ ಮುಖ್ಯಸ್ಥ, ರೈತ ಹೋರಾಟಗಾರ ಯೋಗೇಂದ್ರ ಯಾದವ್‌ ಬುಧವಾರ ಬೆಂಗಳೂರಿನಲ್ಲಿ ಹೇಳಿದ್ದಾರೆ. ಅವರು ‘ಕರ್ನಾಟಕದ ಜನ ಯಾಕೆ...