Homeಕರ್ನಾಟಕ‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’: ಬೊಮ್ಮಾಯಿ ಭಾಷಣಕ್ಕೆ ಸಿದ್ದರಾಮಯ್ಯ ಕುಹಕ

‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’: ಬೊಮ್ಮಾಯಿ ಭಾಷಣಕ್ಕೆ ಸಿದ್ದರಾಮಯ್ಯ ಕುಹಕ

ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ: ಸಿದ್ದರಾಮಯ್ಯ ಟೀಕೆ

- Advertisement -
- Advertisement -

‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವೀರಾವೇಶದ ಭಾಷಣ ಕೇಳಿ ಖುಷಿಯಾಯಿತು. ಸಂಘ ಪರಿವಾರ ಇಂತಹ ಜೋರು ಮಾತುಗಳನ್ನು ಸಹಿಸವುದಿಲ್ಲ, ಇದೇ ರೀತಿ ಮಾತನಾಡಿಯೇ ಪಾಪ ಬಿ.ಎಸ್ ಯಡಿಯೂರಪ್ಪ ಜೈಲು ಸೇರಿದ್ದು ಎನ್ನುವುದು ನೆನಪಿರಲಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಶನಿವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾಡಿರುವ ಭಾಷಣಕ್ಕೆ ಸಾಮಾಜಿಕ ಮಾಧ್ಯಮದ ಮೂಲಕ ತಿರುಗೇಟು ನೀಡಿರುವ ಅವರು, “ಧಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ ಎಂದು ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ ‘ಜಾತ್ರೆ’ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ?” ಎಂದು ಕುಟುಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಖ್ಯಮಂತ್ರಿ ಬೊಮ್ಮಾಯಿ ಅವರೇ ನಮಗೆ ಸವಾಲು ಹಾಕುವ ಧಮ್ ನಿಮಗಿಲ್ಲ ಎನ್ನುವುದು ಸ್ವತಃ ನಿಮಗೂ ಗೊತ್ತು, ನಿಮಗೆ ಧಮ್ ಇದ್ದರೆ ಮೊದಲು ನಿಮ್ಮ ಸಂಪುಟದಲ್ಲಿರುವ ಖಾಲಿ ಸ್ಥಾನಗಳನ್ನು ತುಂಬಿ ಬಿಡಿ. ಕನಿಷ್ಠ ಬಸವನಗೌಡ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಿ. ಆ ಮೇಲೆ ನಿಮ್ಮ ಧಮ್ ನೋಡೋಣ” ಎಂದು ಸವಾಲು ಹಾಕಿದ್ದಾರೆ.

“ನನ್ನ ಆಡಳಿತದ ಕಾಲದ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಕೆಲವು ದಿನಗಳಿಂದ ಬಿಜೆಪಿ ನಾಯಕರು ಹೇಳುತ್ತಲೇ ಇದ್ದಾರೆ. ಮೊನ್ನೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಹೈಕೋರ್ಟ್ ನೋಟೀಸ್ ನೀಡಿದ್ದನ್ನು ನೋಡಿದರೆ ಇವರು ಹೇಳಿದ್ದು ನನಗೋ, ಯಡಿಯೂರಪ್ಪನವರಿಗೋ? ಎಂದು ಗೊಂದಲವಾಗುತ್ತಿದೆ” ಎಂದು ಕುಹಕವಾಡಿದ್ದಾರೆ.

“ನನ್ನ ಅಧಿಕಾರವಧಿಯ ಹಗರಣಗಳನ್ನು ಬಯಲಿಗೆಳೆಯುತ್ತೇವೆ ಎಂದು ಧಮ್ಕಿ ಹಾಕುವ ಬದಲು ಧಮ್ ಇದ್ದರೆ ಮೊದಲು ಆ ಕೆಲಸ ಮಾಡಿ. ನಾನು ಅದನ್ನು ಎದುರಿಸಲು ಸದಾ ಸಿದ್ಧ. ಈ ಬ್ಲಾಕ್ ಮೇಲ್ ತಂತ್ರಗಳನ್ನೆಲ್ಲ ನಿಮ್ಮವರ ಮೇಲೆ ಬಳಸಿಕೊಳ್ಳಿ” ಎಂದು ತಿಳಿಸಿದ್ದಾರೆ.

“ನಮ್ಮ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವ ಮೊದಲು ನಿಮ್ಮ ನಾಯಕರುಗಳ ಮೇಲೆ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಸಾಲು ಸಾಲು ಹಗರಣಗಳನ್ನು ಇತ್ಯರ್ಥ ಮಾಡಿಕೊಂಡು ಬನ್ನಿ.‘ ನೀವು ಬೀಸುವ ಕತ್ತಿ ನಿಮ್ಮ ಕುತ್ತಿಗೆಯನ್ನೇ ಕೊಯ್ಯದಿರಲಿ” ಎಂದು ಆಶಿಸಿದ್ದಾರೆ.

“ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕ ಚರ್ಚೆಗೆ ನೀವು ಸಿದ್ಧರಿದ್ದಿರಾ ಬಸವರಾಜ ಬೊಮ್ಮಾಯಿಯವರೇ? ನಮ್ಮ ಪಕ್ಷ ಸಿದ್ಧ ಇದೆ. ನೀವು ಸಿದ್ಧ ಇದ್ದರೆ ಸಾರ್ವಜನಿಕ ಚರ್ಚೆಗೆ ಸ್ಥಳ-ಸಮಯ ನೀವೇ ನಿರ್ಧರಿಸಿ ತಿಳಿಸಿ, ನಾನು ಬರ್ತೇನೆ. ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ” ಎಂದಿದ್ದಾರೆ.

ಭ್ರಷ್ಟಾಚಾರವನ್ನೇ ವಿಷಯವನ್ನಾಗಿಟ್ಟು ಚುನಾವಣೆ ಎದುರಿಸುವ ಧಮ್ ನಿಮಗಿದೆಯೇ ಬೊಮ್ಮಾಯಿಯವರೇ? ನಿಮಗೆ ಆ ಧಮ್ ಇಲ್ಲ. ಕೊನೆಗೆ ಹಿಂದು-ಮುಸ್ಲಿಮ್, ಮಂದಿರ ಮಸೀದಿ, ಹಿಜಾಬ್ –ಕೇಸರಿ ಶಾಲುಗಳ ವಿವಾದದಲ್ಲಿಯೆ ನಿಮ್ಮ ಪ್ರಚಾರ ಕೊನೆಗೊಳ್ಳುವುದು. ಬೇರೆ ದಾರಿ ನಿಮಗಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಮತ್ತೊಮ್ಮೆ ಕಮಲ ಅರಳಲಿದೆ; ತಾಕತ್ತಿದ್ದರೆ ನಿಲ್ಲಿಸಿ ನೋಡೋಣ: ಸಿಎಂ ಬೊಮ್ಮಾಯಿ

ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, “ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ ಅವಕಾಶ ಇಲ್ಲ. ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಿಸುತ್ತೇವೆ. ರಾಜ್ಯದಾದ್ಯಂತ ಇಂಥ ಹಲವು ಸಮಾವೇಶ ನಡೆಸುತ್ತೇವೆ. ತಾಕತ್ತಿದ್ದರೆ…ಧಮ್ಮಿದ್ದರೆ…ನಿಲ್ಲಿಸಿ ನೋಡೋಣ. ನಿಮ್ಮ ಹಣಬಲದಿಂದ ಏನೂ ಮಾಡಲಿಕ್ಕೆ ಸಾಧ್ಯವಿಲ್ಲ. ನೀವು ಮಾಡಿರುವ ಎಲ್ಲ ಹಗರಣಗಳನ್ನು, ನಿಮ್ಮ ನಿಜ ಸ್ವರೂಪವನ್ನು ಕರ್ನಾಟಕದ ಜನತೆ ಮುಂದಿಡುತ್ತೇವೆ” ಎಂದಿದ್ದರು.

“2023ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಕನ್ನಡ ನಾಡಿನ ಸೇವೆಗಾಗಿ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕಮಲ ಅರಳಿಸಲಿದೆ. ಇಂದು ನೀವು (ಸಭಿಕರು) ಆ ಸಂದೇಶ ನೀಡಿದ್ದೀರ. ತಾವು ನಮ್ಮ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಬೆಂಬಲದಿಂದ 2019ರಲ್ಲಿ ಅತಿ ಹೆಚ್ಚು ಸ್ಥಾನ ಬಿಜೆಪಿಗೆ ಕೊಟ್ಟಿದ್ದೀರಾ; ನ್ಯಾಯಯುತವಾಗಿ ಯಡಿಯೂರಪ್ಪ ಆಗಲೇ ಮುಖ್ಯಮಂತ್ರಿಯಾಗಬೇಕಿತ್ತು. ಕಾಂಗ್ರೆಸ್ ನಾಯಕರು ವಾಮಮಾರ್ಗದಿಂದ, ಸಂವಿಧಾನಬಾಹಿರವಾಗಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಕೆಲಸ ಮಾಡಿದರು” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...