Homeಕರ್ನಾಟಕಬಜೆಟ್ ಅಧಿವೇಶನದಲ್ಲಿ 'ರೋಹಿತ್ ಕಾಯ್ದೆ' ಜಾರಿಗೆ ಆಗ್ರಹ

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

- Advertisement -
- Advertisement -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ ‘ರೋಹಿತ್ ವೇಮುಲ ಕಾಯ್ದೆ’ಯನ್ನು ಜಾರಿಗೊಳಿಸಬೇಕು ಎಂದು ‘ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ’ ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು.

ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ತಂಡದ ಪ್ರಮುಖರು, “ಕಾಂಗ್ರೆಸ್‌ ಪಕ್ಷವು 2023ರ ಚುನಾವಣಾ ಪ್ರಣಾಳಿಕೆಯಲ್ಲಿ ‘ರೋಹಿತ್‌ ವೇಮುಲ ಕಾಯ್ದೆ’ಯನ್ನು ಜಾರಿಗೊಳಿಸುವ ಭರವಸೆ ನೀಡಿತ್ತು. ಏಪ್ರಿಲ್ 2025ರಲ್ಲಿ ರಾಹುಲ್ ಗಾಂಧಿಯವರ ಕರೆಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ‘ರೋಹಿತ್ ವೇಮುಲ ಕಾಯ್ದೆ’ಯನ್ನು ಜಾರಿಗೆ ತರುವುದಾಗಿ ಸಾರ್ವಜನಿಕವಾಗಿ ಭರವಸೆ ನೀಡಿದ್ದರು. ಈ ಭರವಸೆಯು ಉನ್ನತ ಶಿಕ್ಷಣದಲ್ಲಿ ಸಾಂಸ್ಥಿಕ ತಾರತಮ್ಯವನ್ನು ಎದುರಿಸುತ್ತಿರುವ ಲಕ್ಷಾಂತರ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು, ಬೋಧಕರು ಮತ್ತು ಸಿಬ್ಬಂದಿಗಳಲ್ಲಿ ಸಮಾನ ಬದುಕಿನ ಹೊಸ ಭರವಸೆಯನ್ನು ಮೂಡಿಸಿತ್ತು ಎಂದರು.

ಮುಂದುವರಿದು, ಜನಾಂದೋಲನ ತಂಡವು ರಾಜ್ಯದಾದ್ಯಂತ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿ ಸಂಘಟನೆಗಳು, ಶಿಕ್ಷಕರು ಮತ್ತು ಕಾನೂನು ತಜ್ಞರೊಂದಿಗೆ ಎರಡು ವರ್ಷ ಕಾಲ ಸಮಾಲೋಚನೆ ನಡೆಸಿದ ನಂತರ, ಏಪ್ರಿಲ್ 2025ರಲ್ಲಿ ಮಾದರಿ ವಿಧೇಯಕದ ಕರಡನ್ನು ಸಿದ್ಧಪಡಿಸಿತು. ಡಿಸೆಂಬರ್ 2025ರಲ್ಲಿ ಅದನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸಲ್ಲಿಸಿತು. ಅದೇ ತಿಂಗಳಲ್ಲೇ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಹಾಗೂ ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಅವರೊಂದಿಗೆ ಸಮಾಲೋಚನೆ ನಡೆಸಿತ್ತು. ಸರ್ಕಾರ ಸಣ್ಣಪುಟ್ಟ ತಿದ್ದುಪಡಿಗಳೊಂದಿಗೆ ಮಾದರಿ ವಿಧೇಯಕವನ್ನು ಒಪ್ಪಿಕೊಂಡಿರುವುದಾಗಿ ಆಂದೋಲನದ ಸದಸ್ಯರಿಗೆ ತಿಳಿಸಿತ್ತು. ಅದನ್ನು ನಾವು ಸ್ವಾಗತಿಸಿದ್ದೆವು ಎಂದು ವಿವರಿಸಿದರು.

ರಾಜ್ಯ ಸರ್ಕಾರ ರೋಹಿತ್ ವೇಮುಲ ಕಾಯ್ದೆಯನ್ನು ಜಾರಿಗೊಳಿಸುವ ಪ್ರಕ್ರಿಯೆಯಲ್ಲಿದೆ ಎಂದು ರಾಹುಲ್ ಗಾಂಧಿಯವರು 2026ರ ಜನವರಿ 17ರಂದು ಸಾರ್ವಜನಿಕವಾಗಿ ಹೇಳಿದ್ದಾರೆ. ಆದರೆ, ಇದುವರೆಗೆ ವಿಧೇಯಕದ ಕರಡನ್ನು ಸಾರ್ವಜನಿಕ ಸಮಾಲೋಚನೆಗಾಗಿ ಬಿಡುಗಡೆ ಮಾಡಿಲ್ಲ, ಅಥವಾ ಕಾಯ್ದೆಯನ್ನು ಜಾರಿಮಾಡಲು ಸ್ಪಷ್ಟ ವೇಳಾಪಟ್ಟಿಯನ್ನೂ ಘೋಷಿಸಿಲ್ಲ. ಈ ವಿಳಂಬವು ರಾಜ್ಯದಾದ್ಯಂತ ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಲ್ಲಿ ಆತಂಕವನ್ನು ಹೆಚ್ಚಿಸಿದೆ ಎಂದು ಹೇಳಿದರು.

ಉನ್ನತ ಶಿಕ್ಷಣದಲ್ಲಿನ ರಚನಾತ್ಮಕ ಜಾತಿ ಆಧಾರಿತ ತಾರತಮ್ಯವನ್ನು ಹೋಗಲಾಡಿಸಲು 2026ರ ಯುಜಿಸಿ ಸಮಾನತೆ ನಿಯಮಗಳು ಸೇರಿದಂತೆ ಅಸ್ತಿತ್ವದಲ್ಲಿರುವ ನಿಯಂತ್ರಣ ಕ್ರಮಗಳು ಸಾಕಾಗುವುದಿಲ್ಲ ಎಂದು ಆಂದೋಲನವು ಪುನರುಚ್ಚರಿಸುತ್ತದೆ. ಪ್ರತ್ಯೇಕ ‘ರೋಹಿತ್ ವೇಮುಲ ಕಾಯ್ದೆ’ ತುರ್ತಾಗಿ ಜಾರಿಯಾಗಬೇಕಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯೆ ಪ್ರವೇಶಿಸಿ, ಕೊಟ್ಟ ಮಾತಿನಂತೆ ಕಾಯ್ದೆಯನ್ನು ಜಾರಿಗೊಳಿಸುವಂತೆ ಸೂಚಿಸಬೇಕು, ಬಜೆಟ್ ಅಧಿವೇಶನದಲ್ಲಿ ಅದನ್ನು ಘೋಷಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಆಂದೋಲನದ ಪ್ರಮುಖರಾದ ಬಸವರಾಜ್ ಕೌತಾಳ್, ಮಾವಳ್ಳಿ ಶಂಕರ್, ಹುಲಿಕುಂಟೆ ಮೂರ್ತಿ, ರಾಹುಲ್, ಲೇಖಾ ಮತ್ತು ಆಶ್ನಾ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...