Homeಮುಖಪುಟ‘ಯಾವುದೇ ಸ್ಥಾನಮಾನ ಬೇಕಾಗಿಲ್ಲ’ ಎಂದು ಕಮಲ ಹಿಡಿದ ಜನಾರ್ದನ ರೆಡ್ಡಿ; ಬಿಜೆಪಿಯೊಳಗೆ ಕೆಆರ್‌ಪಿಪಿ ವಿಲೀನ

‘ಯಾವುದೇ ಸ್ಥಾನಮಾನ ಬೇಕಾಗಿಲ್ಲ’ ಎಂದು ಕಮಲ ಹಿಡಿದ ಜನಾರ್ದನ ರೆಡ್ಡಿ; ಬಿಜೆಪಿಯೊಳಗೆ ಕೆಆರ್‌ಪಿಪಿ ವಿಲೀನ

- Advertisement -
- Advertisement -

ಗಣಿ ಉದ್ಯಮಿ ಮತ್ತು ಕರ್ನಾಟಕ ರಾಜ್ಯ ಪ್ರಗತಿ ಪಕ್ಷ (ಕೆಆರ್‌ಪಿಪಿ) ಶಾಸಕ ಗಾಲಿ ಜನಾರ್ದನ ರೆಡ್ಡಿ ಸೋಮವಾರ ಪಕ್ಷದ ನಾಯಕ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಅವರ ಪತ್ನಿ ಹಾಗೂ ರಾಜಕಾರಣಿ ಅರುಣಾ ಲಕ್ಷ್ಮಿ ಕೂಡ ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

“ಇಂದು ನಾನು ನನ್ನ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಮೂಲಕ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ. ನಾನು 3 ನೇ ಬಾರಿಗೆ ಮೋದಿಯನ್ನು ಬೆಂಬಲಿಸಲು ನನ್ನ ಮನೆಗೆ ಮರಳಿದ್ದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಯಾವುದೇ ಷರತ್ತುಗಳಿಲ್ಲದೆ ನಾನು ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ. ನನಗೆ ಯಾವುದೇ ಸ್ಥಾನಮಾನದ ಅಗತ್ಯವಿಲ್ಲ” ಎಂದು ಜನಾರ್ದನ ರೆಡ್ಡಿ ಹೇಳಿದರು.

ಬಿಜೆಪಿಗೆ ರೆಡ್ಡಿ ಮರು ಪ್ರವೇಶ ಮಾಡಿರುವ ಬಗ್ಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ, “ರೆಡ್ಡಿ ಅವರದ್ದು ತುಂಬಾ ಒಳ್ಳೆಯ ನಿರ್ಧಾರ; ಇದು ನಮ್ಮ ಪಕ್ಷವನ್ನು ಬಲಪಡಿಸುತ್ತದೆ. ಎಲ್ಲ 28 ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಅವರ ಪತ್ನಿ ಮತ್ತು ಸ್ನೇಹಿತರು ಬಿಜೆಪಿಗೆ ಸೇರಿದ್ದಾರೆ ಮತ್ತು ಇದು ನಮಗೆ ಬೂಸ್ಟ್ ಆಗಿದೆ. ನಾನು ಅವರನ್ನು ಪೂರ್ಣ ಹೃದಯದಿಂದ ಸ್ವಾಗತಿಸುತ್ತೇನೆ” ಎಂದರು.

“ನಾಳೆ(ಸೋಮವಾರ) ಬೆಳಗ್ಗೆ 10 ಗಂಟೆಗೆ ಬಿಜೆಪಿಯ ಹಿರಿಯ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರಲು ನಿರ್ಧರಿಸಿದ್ದೇನೆ. ಬಿಜೆಪಿ ನಮ್ಮ ತಾಯಿಗೆ ಸಮಾನ, ಕೆಆರ್‌ಪಿಪಿ ಕಾರ್ಯಕರ್ತರೊಂದಿಗೆ ಸಭೆ ಕರೆದು ಅಭಿಪ್ರಾಯ ಪಡೆದು ಬಿಜೆಪಿ ಸೇರಲು ಸರ್ವಾನುಮತದಿಂದ ನಿರ್ಧರಿಸಿದ್ದೇನೆ. ಅವರು ನನ್ನೊಂದಿಗೆ ಇರುತ್ತಾರೆ ಎಂದು ಅವರು ನನಗೆ ಭರವಸೆ ನೀಡಿದರು” ಎಂದು ರೆಡ್ಡಿ ಭಾನುವಾರ ಸುದ್ದಿಗಾರರಿಗೆ ತಿಳಿಸಿದ್ದರು.

ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜನಾರ್ದನ ರೆಡ್ಡಿ ಕೆಆರ್‌ಪಿಪಿಯಿಂದ ಸ್ಪರ್ಧಿಸಿ ಚುನಾವಣೆಗೆ ಸ್ಪರ್ಧಿಸಿ, ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು.

ಜನಾರ್ದನ ರೆಡ್ಡಿ ಅವರು ಗಣಿ ಹಗರಣದಲ್ಲಿ ಬಂಧಿಸಿ ಜೈಲಿಗೆ ಕಳುಹಿಸುವ ಮೊದಲು ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. ಮುಖ್ಯವಾಗಿ, ಬಿಜೆಪಿ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಜನಾರ್ದನ ರೆಡ್ಡಿ ಸಹೋದರರಾದ ಜಿ ಕರುಣಾಕರ ರೆಡ್ಡಿ ಮತ್ತು ಜಿ ಸೋಮಶೇಖರ ರೆಡ್ಡಿ ಕಳೆದ ವರ್ಷದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು.

28 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್ 4 ರಂದು ಮತಗಳ ಎಣಿಕೆ ನಡೆಯಲಿದೆ.

ಇದನ್ನೂ ಓದಿ;

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...