Homeಚಳವಳಿಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವಿರಲಿ: ಜನಸಾಹಿತ್ಯ ಸಮ್ಮೇಳನದ ನಿರ್ಣಯಗಳು

ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವಿರಲಿ: ಜನಸಾಹಿತ್ಯ ಸಮ್ಮೇಳನದ ನಿರ್ಣಯಗಳು

- Advertisement -
- Advertisement -

ಒಂದು ಸಮುದಾಯವನ್ನು ದೂರವಿರಿಸಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಪ್ರತಿರೋಧವಾಗಿ ನಡೆದ ಜನಸಾಹಿತ್ಯ ಸಮ್ಮೇಳನವು ಎಲ್ಲಾ ನೇಮಕಾತಿಗಳಲ್ಲಿ ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವಿರಲಿ ಎಂಬುದು ಸೇರಿದಂತೆ ಪ್ರಮುಖ 9 ನಿರ್ಣಯಗಳನ್ನು ಕೈಗೊಂಡಿದೆ.

ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿಯ ಅಲುಮ್ನಿ ಹೊರಾಂಗಣದಲ್ಲಿ ನಡೆದ ಸಮ್ಮೇಳನದಲ್ಲಿ ಈ ಕೆಳಕಂಡ ನಿರ್ಣಯಗಳನ್ನು ಅಂಗೀಕರಿಸಲಾಯಿತು.

1. ಸಾಹಿತ್ಯ ಸಮ್ಮೇಳನಗಳು ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ ನಡೆಸುವ ಎಲ್ಲ ಕಾರ್ಯಕ್ರಮಗಳಲ್ಲಿ ಎಲ್ಲ ಸಮುದಾಯಗಳ ಒಳಗೊಳ್ಳಬೇಕು. ಅದರಲ್ಲಿಯೂ ದಲಿತರು, ದಮನಿತರು, ಆದಿವಾಸಿಗಳು, ಮಹಿಳೆಯರು, ಲೈಂಗಿಕ ಅಲ್ಪಸಂಖ್ಯಾತರು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಒಳಗೊಳ್ಳುವಿಕೆ ಇರಲೇಬೇಕು.

2 . ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಸಂಸ್ಥೆಗಳ ಸ್ವಾಯತ್ತತೆಯನ್ನು ಸರ್ಕಾರ ಕಾಪಾಡಿಕೊಳ್ಳಬೇಕು.

3. ಈ ಸಂಸ್ಥೆಗಳಿಗೆ ನೇಮಕ ಮಾಡುವಾಗ ವಿಶೇಷ ಎಚ್ಚರ ವಹಿಸಿ ಅರ್ಹರನ್ನು ನೇಮಿಸಬೇಕು. ಈ ನೇಮಕಾತಿಯು ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಪ್ರಾತಿನಿಧ್ಯವನ್ನು ಆಧರಿಸಿರಬೇಕು.

4. ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷರ ನೇಮಕಾತಿ ಮತ್ತು ರಂಗಾಯಣ ನಿರ್ದೇಶಕರ ನೇಮಕಾತಿ ವಿಷಯದಲ್ಲಿ ಸರ್ಕಾರ ತಳೆದ ನಿಲುವಿಗೆ ಖಂಡನೆ.

5. ಕರ್ನಾಟಕದಲ್ಲಿರುವ ಎಲ್ಲ ಭಾಷೆಗಳನ್ನು ಸಂರಕ್ಷಿಸಲು ಅಗತ್ಯ ಇರುವ ಸಮಗ್ರ ಭಾಷಾ ನೀತಿಯನ್ನು ರೂಪಿಸಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು.

6. ಕನ್ನಡ ನೆಲದ ಮೇಲೆ ಹಿಂದಿ ಹೇರಿಕೆಯನ್ನು ನಾವು ವಿರೋಧಿಸುತ್ತೇವೆ. ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಬೇಕು.

7. ಕರ್ನಾಟಕ ಮತ್ತು ಮಹರಾಷ್ಟ್ರಗಳ ಗಡಿಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡಿಕೊಳ್ಳಬೇಕೆಂದು ಹಾಗೂ ಗಡಿನಾಡ ಕನ್ನಡಿಗರ ರಕ್ಷಣೆ ಮಾಡಬೇಕು.

8. ಕೃಷ್ಣಾ, ಕಾವೇರಿ, ಮಹದಾಯಿ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದ ಅಂತಾರಾಜ್ಯ ವ್ಯಾಜ್ಯಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗದಂತೆ ನ್ಯಾಯಾಂಗ ಹೋರಾಟ ನಡೆಸಬೇಕು. ಈ ನದಿಗಳ ನೀರಿನ ಬಳಕೆಗೆ ಯೋಜನೆಗಳನ್ನು ರೂಪಿಸಿ ಅವುಗಳ ಅನುಷ್ಠಾನಕ್ಕೆ ಹಣ ಒದಗಿಸಬೇಕು.

9. ವಿವಿಧ ಬ್ಯಾಂಕುಗಳು, ನಂದಿನಿಯು ಸೇರಿದಂತೆ ಕರ್ನಾಟಕ ಕೇಂದ್ರಿಕೃತ ಸಂಸ್ಥೆಗಳನ್ನು ಉತ್ತರ ಭಾರತದ ಸಂಸ್ಥೆಗಳೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆಗೆ ವಿರೋಧ.

ಇದನ್ನೂ ಓದಿ; ಮುಸ್ಲಿಮರನ್ನು ಹೊರಗಟ್ಟಲಿಕ್ಕೆ ಇಷ್ಟು ಹುನ್ನಾರ ಬೇಕಿತ್ತೆ?: ಲೇಖಕಿ ಬಾನು ಮುಷ್ತಾಕ್ ಪ್ರಶ್ನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...