Homeಕರ್ನಾಟಕಸಿಡಿ ಕೇಸ್: FIR ದಾಖಲಿಸದ ಕಮಲ್ ಪಂತ್ ವಿರುದ್ಧ ಖಾಸಗಿ ದೂರು ನೀಡಿದ ಜನಾಧಿಕಾರ ಸಂಘರ್ಷ...

ಸಿಡಿ ಕೇಸ್: FIR ದಾಖಲಿಸದ ಕಮಲ್ ಪಂತ್ ವಿರುದ್ಧ ಖಾಸಗಿ ದೂರು ನೀಡಿದ ಜನಾಧಿಕಾರ ಸಂಘರ್ಷ ಪರಿಷತ್

ಈಗಾಗಲೇ ಕಳೆದ ಮಾರ್ಚ್ 17 ರಂದು ಕಬ್ಬನ್ ಪಾರ್ಕ್ ಠಾಣೆಯಲ್ಲಿ ಒಮ್ಮೆ ದೂರು ದಾಖಲಿಸಿದ್ದರು. ಆದರೆ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ.

- Advertisement -
- Advertisement -

ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರನ್ನು ಆಧರಿಸಿ FIR  ದಾಖಲಿಸಲು ವಿಫಲರಾಗಿದ್ದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತನ್ ಮತ್ತು ಕಬ್ಬನ್ ಪಾರ್ಕ್‌ ಪೊಲೀಸ್ ಠಾಣೆ ಅಧಿಕಾರಿ ಮಾರುತಿ.ಬಿ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್ ಮತ್ತೆ ಖಾಸಗಿ ದೂರು (ಪಿಸಿಆರ್‌) ನೀಡಿದೆ.

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಕೆಲಸ ಕೇಳಿಕೊಂಡು ಬಂದಿದ್ದ ಯುವತಿಯ ಮೇಲೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಕಬ್ಬನ್ ಪಾಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಸಂತ್ರಸ್ತೆ ಪರ ವಕೀಲ ಜಗದೀಶ್ ದೂರು ನೀಡಿದ ನಂತರ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಈಗ ದಿನೇಶ್ ಕಲ್ಲಹಳ್ಳಿ ದೂರನ್ನು ಆಧರಿಸಿಕೊಂಡು ಜನಾಧಿಕಾರ ಸಂಘರ್ಷ ಪರಿಷತ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತನ್ ಮತ್ತು ಕಬ್ಬನ್ ಪಾರ್ಕ್‌ ಪೊಲೀಸ್ ಠಾಣೆ ಅಧಿಕಾರಿ ಮಾರುತಿ.ಬಿ ವಿರುದ್ಧ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ದೂರು ದಾಖಲಿಸಿದೆ. ಈಗಾಗಲೇ ಕಳೆದ ಮಾರ್ಚ್ 17 ರಂದು ಕಬ್ಬನ್ ಪಾರ್ಕ್ ಠಾಣೆಯಲ್ಲಿ ಒಮ್ಮೆ ದೂರು ದಾಖಲಿಸಿದ್ದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿಗೆ ಕೊರೊನಾ ಎಂದ ಭೈರತಿ ಬಸವರಾಜ್, ಎಸ್‌ಐಟಿ ವಿಚಾರಣೆಗೆ ಗೈರು ಸಾಧ್ಯತೆ

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಜನಾಧಿಕಾರ ಸಂಘರ್ಷ ಪರಿಷತ್ ಸಹ ಅಧ್ಯಕ್ಷ  ಆದರ್ಶ ಐಯರ್, “ದಿನೇಶ್ ಕಲ್ಲಹಳ್ಳಿ ಅವರು ದೂರು ನೀಡಿದ ಕೂಡಲೇ ನಿರ್ಭಯಾ ಆಕ್ಟ್ ಪ್ರಕಾರ ತಕ್ಷಣ ಎಫ್‌ಐಆರ್‌ ದಾಖಲಿಸಬೇಕಿತ್ತು. ಆದರೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಡಿಸಿಪಿ ಅನುಚೇತನ್ ಮತ್ತು ಕಬ್ಬನ್ ಪಾರ್ಕ್‌ ಪೊಲೀಸ್ ಠಾಣೆ ಅಧಿಕಾರಿ ಮಾರುತಿ.ಬಿ ಅವರು ಈ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ಸಿಆರ್‌ಪಿಸಿ ಸೆಕ್ಷನ್ 36  ಪ್ರಕಾರ ಆಯುಕ್ತರಿರಲಿ, ಡಿಸಿಪಿ ಇರಲಿ ಅವರಿಗೆ FIR ದಾಖಲಿಸುವ ಭಾದ್ಯತೆ ಇದೆ. ಆದರೆ ಇವರು ಈ ಸೆಕ್ಷನ್ ಅನ್ನು ಉಲ್ಲಂಘಿಸಿದ್ದಾರೆ” ಎಂದರು.

ಮುಂದುವರೆದು “ಪ್ರಕರಣದ ಕತೆ ಏನೇ ಇರಲಿ. ಆದರೆ ದೂರು ನೀಡಿದ ತಕ್ಷಣ ಎಫ್‌ಐಆರ್‌ ದಾಖಲಿಸುವುದು ಅವರ ಭಾದ್ಯತೆ. ಅದಲ್ಲಿ ವಿಫಲರಾದರೆ ಸೆಕ್ಷನ್ 166 (ಎ) ಪ್ರಕಾರ ಕ್ರಿಮಿನಲ್ ಆಕ್ಷನ್ ತೆಗೆದುಕೊಳ್ಳಬಹುದು. ಹಾಗಾಗಿ ನಾವು ಇದರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದೇವೆ” ಎಂದಿದ್ದಾರೆ.

“ದಿನೇಶ್ ಕಲ್ಲಹಳ್ಳಿ  ದೂರು ನೀಡಿ 25 ದಿನಗಳಾಗಿದ್ದೂ ಅವರು FIR ದಾಖಲಿಸಿರಲಿಲ್ಲ. ಹೀಗಾಗಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಮಾರ್ಚ್ 17 ರಂದು ದೂರು ದಾಖಲಿಸಿದ್ದೇವು. ಅವರು ಅದನ್ನು ತೆಗೆದುಕೊಂಡಿರಲಿಲ್ಲ. ನಂತರ ಪೋಸ್ಟ್, ಈ-ಮೇಲ್ ಮೂಲಕ ಕ‌ಳಿಸಿದ್ದೆವು.  ಕಳೆದ ತಿಂಗಳು ಈ ದೂರು ಸರಿಯಿಲ್ಲ ಎಂದು ಹೇಳಿ ತಮ್ಮ ಮೇಲಿನ ಪ್ರಕರಣವನ್ನು ಅವರೇ ಮುಕ್ತಾಯಗೊಳಿಸಿದ್ದಾರೆ. ಹೀಗಾಗಿ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ (ನೃಪತುಂಗಾ ರಸ್ತೆಯ 8 ನೇ ಎಸಿಎಂಎಂ) ಮತ್ತೆ ದೂರು ದಾಖಲಿಸಿದೆ. ಮುಂದಿನ ವಿಚಾರಣೆ ಏಪ್ರಿಲ್ 16 ರಂದು ನಡೆಯಲಿದೆ” ಎಂದು ಪರಿಷತ್ ಸಹ ಅಧ್ಯಕ್ಷ ಆದರ್ಶ ಐಯರ್ ತಿಳಿಸಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ನಗರ ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ಪತ್ರ ಬರೆದ ಸಂತ್ರಸ್ತೆ

ಪ್ರಕರಣದ ತನಿಖೆಗೆ ವಿಷೇಶ ತನಿಖಾ ತಂಡ ರಚಿಸಲಾಗಿದ್ದು, ಸಂತ್ರಸ್ತೆ ಕೂಡ ಬಹಿರಂಗವಾಗಿ ಕಾಣಿಸಿಕೊಂಡು ತನಿಖೆಗೆ ಸಹಕರಿಸುತ್ತಿದ್ದಾರೆ. ಆದರೆ ಪ್ರಕರಣದಲ್ಲಿ ಅತ್ಯಾಚಾರ ಆರೋಪಿಯಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೊರೊನಾ ಸೋಂಕಿಗೆ ಒಳಗಾಗಿದ್ದೇನೆ ಎಂದು ತಿಳಿಸಿ ವಿಚಾರಣೆಗೆ ಗೈರಾಗಿದ್ದಾರೆ. ಈ ನಡುವೆ ಪೊಲೀಸ್ ಅಧಿಕಾರಿಗಳ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ದೂರು ದಾಖಲಿಸಲು ಹೊರಟಿರುವುದು ಸಿಡಿ ಪ್ರಕರಣಕ್ಕೆ ಮತ್ತೊಂದು ಸ್ವರೂಪ ನೀಡಿದೆ.

ಜನಾಧಿಕಾರ ಸಂಘರ್ಷ ಪರಿಷತ್ ನೀಡಿರುವ ದೂರಿನ ಪ್ರತಿ ಓದಲು ಇಲ್ಲಿ ಕ್ಲಿಕ್ ಮಾಡಿ.

PCR CoP DCP PI 166AIPC Annexures PresentationIndex by naanugauri on Scribd


ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...