Homeಮುಖಪುಟಜನಶಕ್ತಿ ಮೀಡಿಯ ವೆಬ್‌ ಲೋಕಾರ್ಪಣೆ : ಪರ್ಯಾಯ ಮಾಧ್ಯಮ ಏಕೆ-ಹೇಗೆ ಕುರಿತು ಸಂವಾದ

ಜನಶಕ್ತಿ ಮೀಡಿಯ ವೆಬ್‌ ಲೋಕಾರ್ಪಣೆ : ಪರ್ಯಾಯ ಮಾಧ್ಯಮ ಏಕೆ-ಹೇಗೆ ಕುರಿತು ಸಂವಾದ

ವಿಶ್ಲೇಷಣಾತ್ಮಕ ಲೇಖನಗಳಿಗೆ ಇದೊಂದು ತಾಣವಾಗಲಿದ್ದು, ಕತೆ, ಕವಿತೆ, ಸಿನಿಮಾ, ರಂಗಭೂಮಿ ಮುಂತಾದ ಸಾಂಸ್ಕೃತಿಕ ಅಭಿವ್ಯಕ್ತಿ ಅಥವಾ ಅವುಗಳ ವಿಮರ್ಶೆಗೂ ಇದು ತೆರೆದಿರುತ್ತದೆ ಎಂದು ವೆಬ್‌ಸೈಟ್ ಹೇಳಿದೆ.

- Advertisement -
- Advertisement -

’ಜನಶಕ್ತಿ’ ವಾರಪತ್ರಿಕೆಯ ಜಾಲತಾಣ ರೂಪವಾದ ’ಜನಶಕ್ತಿ ಮೀಡಿಯಾ’ ವೆಬ್‌ ಪತ್ರಿಕೆಯು ಹೊಸ ವಿನ್ಯಾಸದೊಂದಿಗೆ ಲೋಕಾರ್ಪಣೆಯಾಗಲಿದ್ದು, ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 15 ರ ವರೆಗೆ ಪರ್ಯಾಯ ಮಾಧ್ಯಮ ಏಕೆ? ಹೇಗೆ ? ಕುರಿತು ಬರಹ ಮತ್ತು ವೆಬಿನಾರ್‌ಗಳ ಸಂವಾದ ನಡೆಯಲಿದೆ.

ಜನಶಕ್ತಿ ಮೀಡಿಯಾ ವೆಬ್, ಫೇಸ್‌ಬುಕ್, ಪಾಡ್ಕಾಸ್ಟ್ ಮತ್ತು ಯೂ ಟ್ಯೂಬ್ ಚಾನೆಲುಗಳು ಈಗಾಗಲೇ ಸಕ್ರಿಯವಾಗಿದ್ದು, ಪ್ರಸ್ತುತ ಹೊಸ ವಿನ್ಯಾಸದೊಂದಿಗೆ ಪ್ರಕಟಿಸುವ ಸಿದ್ಧತೆ ನಡೆಯುತ್ತಿದೆ. ವೆಬ್ ಪತ್ರಿಕೆಯಲ್ಲಿ ಪ್ರಸಕ್ತ ವಿದ್ಯಮಾನಗಳ ವಸ್ತುನಿಷ್ಠ ವರದಿ, ಟೀಕೆ ಟಿಪ್ಪಣಿ ವಿಮರ್ಶೆಗಳಿರುತ್ತವೆ ಎಂದು ಹೇಳಿಕೆಯಲ್ಲಿ ವಸಂತರಾಜು ಎನ್‌.ಕೆ ತಿಳಿಸಿದ್ದಾರೆ.

ಇದು ರಾಜ್ಯ, ರಾಷ್ಟ್ರ ಮತ್ತು ಅಂರ‍್ರಾಷ್ಟ್ರೀಯ ಮಟ್ಟದ ಚಿಂತಕರ, ಪರಿಣಿತರ, ಬರಹಗಾರರ, ಪತ್ರಕರ್ತರ ವೈವಿಧ್ಯಮಯ ಅಭಿಪ್ರಾಯಗಳಿಗೆ ವೇದಿಕೆಯಾಗಿರುತ್ತದೆ. ಆರ್ಥಿಕ, ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ, ವಿಜ್ಙಾನ-ತಂತ್ರಜ್ಙಾನ ಇತ್ಯಾದಿ ವಿಷಯಗಳ ಕುರಿತು ವಿಶ್ಲೇಷಣಾತ್ಮಕ ಲೇಖನಗಳಿಗೂ ಇದೊಂದು ತಾಣವಾಗಲಿದ್ದು, ಕತೆ, ಕವಿತೆ, ಸಿನಿಮಾ, ರಂಗಭೂಮಿ ಮುಂತಾದ ಸಾಂಸ್ಕೃತಿಕ ಅಭಿವ್ಯಕ್ತಿ ಅಥವಾ ಅವುಗಳ ವಿಮರ್ಶೆಗೂ ಇದು ತೆರೆದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

“ಕರ್ನಾಟಕ 2020: ಕೊರೊನಾ ಕಾಲದಲ್ಲಿ ಮತ್ತು ನಂತರ” ವಿಷಯದ ಕುರಿತು ಮುಖ್ಯವಾಹಿನಿ ಮಾಧ್ಯಮಗಳು ಕೊರೊನಾ ಕಾಲದಲ್ಲಿ ಹೇಗೆ ವರ್ತಿಸಿದವು? ಈ ವರ್ತನೆಗೆ ಕೊರೊನಾ ಕಾರಣವೇ?  ಅಲ್ಲದಿದ್ದರೆ ಇದಕ್ಕೆ ಕಾರಣಗಳೇನು? ಮುಖ್ಯವಾಹಿನಿ ಮಾಧ್ಯಮಗಳನ್ನು ‘ಸುಧಾರಿಸಲು’ ಸಾಧ್ಯವಿಲ್ಲವೇ? ಇದೆ ಎನ್ನುವುದಾದರೆ ಏನು ಮಾಡಬೇಕು? ಇಲ್ಲವಾದರೆ ಪರ್ಯಾಯ ಏನು? ಪರ್ಯಾಯ ಮಾಧ್ಯಮದ ಸ್ವರೂಪ, ಕಾರ್ಯವಿಧಾನ ಹೇಗಿರಬೇಕು? ಅದಕ್ಕೆ ಸಂಪನ್ಮೂಲ ಹೊಂದಿಸುವುದು ಹೇಗೆ? ಇನ್ನಿತ್ಯಾದಿ ಪ್ರಶ್ನೆಗಳನ್ನಿಟ್ಟುಕೊಂಡು ಸರಣಿ ಬರಹ ಮತ್ತು ಚರ್ಚೆ ನಡೆಸಲು ಮೀಡಿಯ ತಂದ ಮುಂದಾಗಿದೆ.

ಇದನ್ನೂ ಓದಿ: ವೃತ್ತಿನಿಷ್ಠೆಯಿಲ್ಲದ ಮಾಧ್ಯಮಗಳು ಯಾವ ಹುನ್ನಾರದಲ್ಲಿ ಭಾಗಿಯಾಗುತ್ತಿವೆ?

ಥೀಮ್‌ ಕುರಿತ ಅಭಿಪ್ರಾಯಗಳನ್ನು ಬರಹ, ಅಡಿಯೋ ಅಥವಾ ವಿಡಿಯೋ ರೂಪದಲ್ಲಿ ಸೆಪ್ಟೆಂಬರ್ 20 ರೊಳಗಾಗಿ 9845172249, 9449260183/ [email protected] ಮೈಲ್/ವಾಟ್ಸಪ್ ಗೆ ಕಳಿಸಿಕೊಡಬೇಕು ಎಂದು ಜನಶಕ್ತಿ ಮೀಡಿಯ ತಂಡ ವಿನಂತಿಸಿದೆ.


ಓದಿ: ಸುಶಾಂತ್ ಸಿಂಗ್ ಪ್ರಕರಣ: ರಿಯಾ ಜೊತೆ ಮಾಧ್ಯಮಗಳ ನಡೆ ಖಂಡನೀಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...