Homeಕರ್ನಾಟಕಬದುಕಲು ಬೇಕಾದಷ್ಟು ಭೂಮಿ, ಗೌರವದಿಂದ ಬಾಳುವಂತಹ ವಸತಿ ನಮ್ಮ ಜನ್ಮ ಸಿದ್ಧ ಹಕ್ಕು: ಭೂಮಿ ಹೋರಾಟದ...

ಬದುಕಲು ಬೇಕಾದಷ್ಟು ಭೂಮಿ, ಗೌರವದಿಂದ ಬಾಳುವಂತಹ ವಸತಿ ನಮ್ಮ ಜನ್ಮ ಸಿದ್ಧ ಹಕ್ಕು: ಭೂಮಿ ಹೋರಾಟದ ನಿರ್ಣಯಗಳು

ಪ್ರತಿಭಟನಾ ಸ್ಥಳಕ್ಕೆ ಇಂದು ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ ತಮ್ಮ ಬೆಂಬಲ ಘೋಷಿಸಿದರು. ಜನತಾ ಅಧಿವೇಶನ ನಾಳೆಯು ಮುಂದುವರೆಯಲಿದೆ.

- Advertisement -
- Advertisement -

ರಾಜ್ಯ ಸರ್ಕಾರ ತಂದಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಯನ್ನು ವಿರೋಧಿಸಿ ರೈತ, ದಲಿತ, ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟವು ಬೆಂಗಳೂರಿನ ಫ್ರೀಡಂ ಪಾಕ್‌ನಲ್ಲಿ ನಡೆಯುತ್ತಿದ್ದು, ಎರಡನೆ ದಿನವು ಮುಂದುವರೆದಿದೆ. ತಮ್ಮ ಹೋರಾಟವನ್ನು, “ಜನ ಚಳವಳಿಗಳ ಪರ್ಯಾಯ ಜನತಾ ಅಧಿವೇಶನ” ಎಂದು ಐಕ್ಯ ಹೋರಾಟ ಸಮಿತಿಯು ಕರೆದಿದ್ದು, ಇಂದು ಭೂಮಿ, ವಸತಿ ಹಕ್ಕು ವಂಚಿತರ ವಿಚಾರವಾಗಿ ಪ್ರತಿಭಟನಾಕಾರರು ತಮ್ಮ ನಿರ್ಣಯಗಳನ್ನು ರಾಜ್ಯ ಸರ್ಕಾರದ ಮುಂದಿಟ್ಟಿದ್ದಾರೆ.

ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

ಭೂಮಿ ವಸತಿ ಹಕ್ಕು ವಂಚಿತರು ಇಂದು ’ಬದುಕಲು ಬೇಕಾದಷ್ಟು ಭೂಮಿ, ಗೌರವದಿಂದ ಬಾಳುವಂತಹ ವಸತಿ ನಮ್ಮ ಜನ್ಮ ಸಿದ್ಧ ಹಕ್ಕು’ ಎಂದು ಘೋಷಿಸಿದ್ದು, ತಮ್ಮ ನಿರ್ಣಯಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.

  1. ಯಾವುದೇ ಕಾರಣಕ್ಕೂ ಬಡಜನರನ್ನು (ಕನಿಷ್ಠ ಪರ್ಯಾಯ ವ್ಯವಸ್ಥೆಯನ್ನಾದರೂ ಮಾಡದೆ) ಅವರ ಭೂಮಿಯಿಂದಾಗಲೀ, ಮನೆಗಳಿಂದಾಗಲಿ ಒಕ್ಕಲೆಬ್ಬಿಸಬಾರದು.
  2. ಫಾರಂ 50, 57, 94ಸಿ, 94ಸಿಸಿ ಮತ್ತು ಅರಣ್ಯ ಹಕ್ಕು ಅರ್ಜಿಗಳನ್ನು ನವೆಂಬರ್ ಅಧಿವೇಶನದೊಳಗಾಗಿ ಇತ್ಯರ್ಥಗೊಳಿಸಿ ಬಡಜನರಿಗೆ ಹಕ್ಕುಪತ್ರ ನೀಡಬೇಕು.
  3. ಒಟ್ಟು ಸರ್ಕಾರಿ ಭೂಮಿಯ ಆಡಿಟಿಂಗ್ ನಡೆಸಬೇಕು. ಲಭ್ಯವಿರುವ ಭೂಮಿಯನ್ನು ನಿವೇಶನಕ್ಕಾಗಿ ಮತ್ತು ಉಳುಮೆಗಾಗಿ ಕೂಡಲೇ ವಿತರಣೆ ಮಾಡಬೇಕು.
  4. ರೈತ ವಿರೋಧಿ, ದಲಿತ ವಿರೋಧಿ, ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳನ್ನು ಈ ಕೂಡಲೇ ರದ್ದುಗೊಳಿಸಬೇಕು. ಅಂತಹ ಕಾಯ್ದೆಯ ತಿದ್ದುಪಡಿಯ ಎಲ್ಲಾ ಪ್ರಸ್ತಾಪಗಳನ್ನು ಕೈಬಿಡಬೇಕು.
  5. ಭೂಮಿಯು ಉಳುವವರಿಗೆ ಮತ್ತು ವಾಸಿಸುವವರಿಗೆ ಸೇರಿದ್ದು, ಭೂಗಳ್ಳರಿಗಲ್ಲ, ಕಂಪನಿಗಳಿಗಲ್ಲ.
  6. ಕೊರೊನಾದಿಂದ ತತ್ತರಿಸುವ ರೈತರ ಮತ್ತು ಕಾರ್ಮಿಕರ ನೆರವಿಗೆ ಸರ್ಕಾರ ಸಮಗ್ರ ಪ್ಯಾಕೇಜ್ ಘೋಷಿಸಬೇಕು.

ಪ್ರತಿಭಟನಾ ಸ್ಥಳಕ್ಕೆ ಇಂದು ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಭೇಟಿ ನೀಡಿ ತಮ್ಮ ಬೆಂಬಲ ಘೋಷಿಸಿದರು. ಜನತಾ ಅಧಿವೇಶನ ನಾಳೆಯು ಮುಂದುವರೆಯಲಿದೆ.

ಇದನ್ನೂ ಓದಿ: ಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ವಿಡಿಯೋ ನೋಡಿ:

’ಜನತಾ ಅಧಿವೇಶನ’ವನ್ನು ಬೆಂಬಲಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿದರು.

Posted by Naanu Gauri on Tuesday, September 22, 2020

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...