Homeಮುಖಪುಟಜಂತರ್ ಮಂತರ್ ಪ್ರತಿಭಟನೆ: ಪತ್ರಕರ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ದೆಹಲಿ ಪೊಲೀಸ್ ಅಧಿಕಾರಿಗೆ ಬಡ್ತಿ: ದೂರುದಾರರನ್ನೇ...

ಜಂತರ್ ಮಂತರ್ ಪ್ರತಿಭಟನೆ: ಪತ್ರಕರ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ದೆಹಲಿ ಪೊಲೀಸ್ ಅಧಿಕಾರಿಗೆ ಬಡ್ತಿ: ದೂರುದಾರರನ್ನೇ ಎರಡು ಬಾರಿ ಬಂದಿಸಿದ್ದ ಪೊಲೀಸರು

- Advertisement -
- Advertisement -

ನವದೆಹಲಿ: ಮಹಿಳಾ ಪತ್ರಕರ್ತೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಅಧಿಕಾರಿ ವಿವೇಕ್ ಭಗತ್ ಅವರನ್ನು ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಅಡಿಷನಲ್ ಡಿಸಿಪಿ) ಹುದ್ದೆಗೆ ಬಡ್ತಿ ನೀಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅಕ್ಟೋಬರ್ 3ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಮಹಿಳಾ ಪತ್ರಕರ್ತೆಯೊಬ್ಬರಿಗೆ ಪೊಲೀಸ್ ಅಧಿಕಾರಿ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪದ ಬೆನ್ನಲ್ಲೇ, ಪ್ರಕರಣದ ದೂರುಗಳನ್ನು ಅಪರಾಧ ಶಾಖೆ ಪರಿಶೀಲಿಸುತ್ತಿರುವ ಸಂದರ್ಭದಲ್ಲೇ ಈ ಬಡ್ತಿ ನೀಡಲಾಗಿದೆ.

2018ರ ಬ್ಯಾಚ್‌ನ DANIPS ಅಧಿಕಾರಿ ವಿವೇಕ್ ಭಗತ್ ಈ ಹಿಂದೆ ಸಹಾಯಕ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರ ವಿರುದ್ಧದ ಆರೋಪಗಳು ಬಹಿರಂಗವಾಗುವುದಕ್ಕೂ ಮುನ್ನವೇ ಬಡ್ತಿಯ ಪ್ರಕ್ರಿಯೆ ಆರಂಭವಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಡ್ತಿಗಳು ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆಯ ಭಾಗವಾಗಿದ್ದು, ಇತ್ತೀಚಿನ ಆರೋಪಗಳಿಗೆ ಸಂಬಂಧಿಸಿದಂತೆ ಅವುಗಳನ್ನು ತಡೆಹಿಡಿಯಲಾಗಿಲ್ಲ ಎಂಬುದು ಪೊಲೀಸ್ ಇಲಾಖೆಯ ನಿಲುವಾಗಿದೆ.

https://twitter.com/cpimspeak/status/2107122201438875923?ref_src=twsrc%5Etfw%7Ctwcamp%5Etweetembed%7Ctwterm%5E2107122201438875923%7Ctwgr%5Eab9bcf4424ccd2dd7f3b7298535834ac9774405b%7Ctwcon%5Es1_&ref_url=https%3A%2F%2Fmaktoobmedia.com%2Fpost%3Fid%3D116623slug%3Ddelhi-cop-accused-of-sexually-harassing-woman-journalist-promoted-as-police-refuse-fir-detain-complainant-twice

ಆದರೆ ಈ ವಿವರಣೆಯ ನಡುವೆಯೇ ಪ್ರಕರಣದ ಗಂಭೀರತೆ ಮತ್ತಷ್ಟು ಹೆಚ್ಚಾಗಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯ ನಡೆದಿದೆ ಎಂದು ಮೂವರು ಮಹಿಳಾ ಪತ್ರಕರ್ತರು ದೂರು ನೀಡಿದ್ದಾರೆ. ಈ ದೂರುಗಳನ್ನು ಇದೀಗ ಅಪರಾಧ ಶಾಖೆಗೆ ವರ್ಗಾಯಿಸಲಾಗಿದ್ದು, “ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ” ನಡೆಸಲಾಗುವುದು ಎಂದು ದೆಹಲಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಇದರ ನಡುವೆ, ಆರೋಪ ಎದುರಿಸುತ್ತಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಒತ್ತಾಯಿಸಿ ಪತ್ರಕರ್ತರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಹೊರಗೆ ಧರಣಿ ನಡೆಸಿದ್ದಾರೆ. ಪ್ರಕರಣದಲ್ಲಿ ದೂರು ನೀಡಿದ ಮಹಿಳಾ ಪತ್ರಕರ್ತೆಯರನ್ನು ಪೊಲೀಸರು ಬಂಧಿಸಿ ವಶಕ್ಕೆ ಪಡೆದಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ದೂರುದಾರರನ್ನು ಮತ್ತೊಮ್ಮೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಆರೋಪಗಳ ನಡುವೆಯೂ ಈವರೆಗೆ ಎಫ್‌ಐಆರ್ ದಾಖಲಾಗಿಲ್ಲ ಎಂಬುದು ಪ್ರತಿಭಟನಾಕಾರರ ಆಕ್ರೋಶಕ್ಕೆ ಪ್ರಮುಖ ಕಾರಣವಾಗಿದೆ.

ಮಾನವ ಹಕ್ಕುಗಳ ಕಾರ್ಯಕರ್ತರು ಮತ್ತು ವಿವಿಧ ಸಂಘಟನೆಗಳು ವಿವೇಕ್ ಭಗತ್ ಅವರು ಮಹಿಳಾ ಪತ್ರಕರ್ತೆಯನ್ನು ಅನುಚಿತವಾಗಿ ಮುಟ್ಟಿದ್ದಾರೆ ಎಂದು ಆರೋಪಿಸಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸುವುದರ ಜೊತೆಗೆ ಅವರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿವೆ. ಪೊಲೀಸ್ ಸಿಬ್ಬಂದಿಯಿಂದ ದೌರ್ಜನ್ಯ ಮತ್ತು ಲೈಂಗಿಕ ಕಿರುಕುಳ ನಡೆದಿದೆ ಎಂದು ಮಹಿಳಾ ಪತ್ರಕರ್ತರು ಹಾಗೂ ಪ್ರತಿಭಟನಾಕಾರರು ಪದೇಪದೇ ದೂರು ನೀಡುತ್ತಿರುವುದು ದೆಹಲಿ ಪೊಲೀಸರ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಈ ಪ್ರಕರಣ ರಾಜಕೀಯ ವಲಯದಲ್ಲಿಯೂ ತೀವ್ರ ಪ್ರತಿಕ್ರಿಯೆ ಹುಟ್ಟುಹಾಕಿದೆ. ದೆಹಲಿ ಪೊಲೀಸರು ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿರುವುದನ್ನು ಉಲ್ಲೇಖಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಉತ್ತರ ಕೇಳಿದ್ದಾರೆ. ನೂರಾರು ಪತ್ರಕರ್ತರು ಗಂಟೆಗಟ್ಟಲೆ ಒಂದೇ ಬೇಡಿಕೆಯೊಂದಿಗೆ ಕುಳಿತಿದ್ದಾರೆ. ಎಫ್‌ಐಆರ್ ದಾಖಲಿಸಬೇಕು ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಪ್ರಶ್ನಿಸಿದ್ದಾರೆ. ಎಫ್‌ಐಆರ್ ದಾಖಲಿಸುವುದು ಪೊಲೀಸರ ಮೂಲ ಕರ್ತವ್ಯವಲ್ಲವೇ ಎಂದು ಪ್ರಶ್ನಿಸಿರುವ ಅವರು, ದೆಹಲಿ ಪೊಲೀಸರು ಗೃಹ ಸಚಿವಾಲಯದ ಅಡಿಯಲ್ಲಿ ಬರುತ್ತಾರೆ; ಈ ವಿಚಾರಕ್ಕೆ ಅಮಿತ್ ಶಾ ಉತ್ತರಿಸಬೇಕು ಎಂದು ಹೇಳಿದ್ದಾರೆ.

ಪತ್ರಕರ್ತರೊಂದಿಗೆ ಪೊಲೀಸರು ನಡೆದುಕೊಂಡ ರೀತಿಗೆ ಪ್ರೆಸ್ ಕ್ಲಬ್ ಆಫ್ ಇಂಡಿಯಾ ಕೂಡ ತೀವ್ರ ಆಘಾತ ಮತ್ತು ನಿರಾಶೆ ವ್ಯಕ್ತಪಡಿಸಿದೆ. ಮಹಿಳಾ ಪತ್ರಕರ್ತರು ನೀಡಿರುವ ದೂರುಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಅದು ಪೊಲೀಸರನ್ನು ಒತ್ತಾಯಿಸಿದೆ. ಡಿಜಿಐಪಿಯುಬಿಯೂ ಪೊಲೀಸ್ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.

ವಿವೇಕ್ ಭಗತ್ ಅವರ ಬಡ್ತಿ ಇದೀಗ ಪ್ರಕರಣದ ಪ್ರಮುಖ ವಿವಾದವಾಗಿ ಮಾರ್ಪಟ್ಟಿದೆ. ಮಹಿಳಾ ಪತ್ರಕರ್ತೆಯ ಮೇಲೆ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಅಧಿಕಾರಿಯ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರು ನಿರಾಕರಿಸಿದ್ದಾರೆ; ಅದೇ ವೇಳೆ ಆರೋಪ ತನಿಖೆಯಲ್ಲಿರುವಾಗಲೇ ಅವರಿಗೆ ಹೆಚ್ಚುವರಿ ಡಿಸಿಪಿ ಹುದ್ದೆಗೆ ಬಡ್ತಿ ನೀಡಲಾಗಿದೆ ಎಂಬ ಪ್ರಶ್ನೆ ಎದ್ದಿದೆ. ಇಂತಹ ಬೆಳವಣಿಗೆ ಮಹಿಳಾ ಪತ್ರಕರ್ತರಿಗೆ ಯಾವ ಸಂದೇಶ ನೀಡುತ್ತದೆ? ಆರೋಪ ಎದುರಿಸುತ್ತಿರುವ ಅಧಿಕಾರಿಯನ್ನು ವ್ಯವಸ್ಥೆಯೇ ರಕ್ಷಿಸುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯನ್ನೂ ಇದು ಹುಟ್ಟುಹಾಕಿದೆ.

ಸಿಜೆಪಿ ಕಾನೂನು ವ್ಯವಹಾರಗಳ ಮುಖ್ಯಸ್ಥೆ ರತ್ನಾ ಸಿಂಗ್ ಕೂಡ ಬಡ್ತಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಅಧಿಕಾರಿಗೆ ಬಡ್ತಿ ನೀಡಿರುವುದು ಹೊಣೆಗಾರಿಕೆಯ ಬದಲಿಗೆ ಅಧಿಕಾರಕ್ಕೆ ರಕ್ಷಣೆ ನೀಡುವ ಸಂದೇಶವನ್ನು ಕಳುಹಿಸುತ್ತದೆ ಎಂದು ಅವರು ಆಕ್ಷೇಪಿಸಿದ್ದಾರೆ. ಕೇಂದ್ರ ಗೃಹ ಸಚಿವಾಲಯವು ಈ ನಿರ್ಧಾರವನ್ನು ಮರುಪರಿಶೀಲಿಸಿ ಹಿಂಪಡೆಯಬೇಕು ಮತ್ತು ಅಧಿಕಾರವು ಹೊಣೆಗಾರಿಕೆಗಿಂತ ಮೇಲಲ್ಲ ಎಂಬುದನ್ನು ಖಚಿತಪಡಿಸಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.

ಪ್ರಕರಣದ ದೂರುಗಳು ಇದೀಗ ಅಪರಾಧ ಶಾಖೆಯ ತನಿಖೆಯಲ್ಲಿರುವ ಸಂದರ್ಭದಲ್ಲಿ, ಆರೋಪ ಎದುರಿಸುತ್ತಿರುವ ಅಧಿಕಾರಿಗೆ ದೊರೆತಿರುವ ಬಡ್ತಿ ಮತ್ತು ಎಫ್‌ಐಆರ್ ದಾಖಲಿಸುವ ವಿಚಾರದಲ್ಲಿ ಪೊಲೀಸರ ನಡೆ ಎರಡೂ ಒಟ್ಟಾಗಿ ದೆಹಲಿ ಪೊಲೀಸ್ ವ್ಯವಸ್ಥೆಯ ಹೊಣೆಗಾರಿಕೆ ಹಾಗೂ ಮಹಿಳಾ ಪತ್ರಕರ್ತರ ಸುರಕ್ಷತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಸರಗೋಡು: ವಿಶ್ವವಿದ್ಯಾಲಯ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ನಾಯಕನ ಉಪಸ್ಥಿತಿ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ

'ವಂದೇ ಮಾತರಂ'ಗೆ ಸಂಬಂಧಿಸಿದ ಕಾರ್ಯಕ್ರಮವೊಂದರಲ್ಲಿ ಆರ್‌ಎಸ್‌ಎಸ್ ನಂಟಿನ ಸಂಘಟನೆಯೊಂದರ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರ ಉಪಸ್ಥಿತಿಯನ್ನು ವಿರೋಧಿಸಿ ಕೇರಳದ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (ಅ.6) ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕಾರ್ಯಕ್ರಮದಲ್ಲಿ ನಂದಕುಮಾರ್ ಅವರ...

ಪತ್ರಕರ್ತೆ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಎಸಿಪಿಗೆ ಹೆಚ್ಚುವರಿ ಡಿಸಿಪಿ ಹುದ್ದೆ; ವಿರೋಧದ ಬಳಿಕ ಆದೇಶಕ್ಕೆ ತಡೆ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧದ ಪ್ರತಿಭಟನೆಯ ವೇಳೆ ಮಹಿಳಾ ಪತ್ರಕರ್ತೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರಿಗೆ ನೀಡಲಾಗಿದ್ದ...

ಬಿಜೆಪಿ ಸದಸ್ಯರಾಗಿರುವವರು ಮಾತ್ರ ಮತ ಚಲಾಯಿಸಬಹುದು ಎಂದು ಚುನಾವಣಾ ಆಯೋಗ ನಂಬಿದೆ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತೀವ್ರ ವಾಗ್ದಾಳಿ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣಾ ಆಯೋಗದ ವಿವಾದಾತ್ಮಕ ಕಾರ್ಯವೈಖರಿಯನ್ನು ಖಂಡಿಸಿ ಇಂಡಿಯಾ ಒಕ್ಕೂಟದ ನಾಯಕರು ದೆಹಲಿಯಲ್ಲಿ ನಡೆಸಿದ ಬೃಹತ್ ಪ್ರತಿಭಟನಾ ಮೆರವಣಿಗೆಯ ವೇಳೆ ಸಮಾಜವಾದಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್...

ದೆಹಲಿಯಲ್ಲಿ ಎಸ್‌ಐಆರ್ ಅಕ್ರಮಗಳ ವಿರುದ್ಧ ‘ಇಂಡಿಯಾ’ ಸಂಸದರ ಜಾಥಾ: ಗ್ಯಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಇದೀಗ ರಾಷ್ಟ್ರ ರಾಜಕಾರಣದಲ್ಲಿ ಮತ್ತೊಮ್ಮೆ ಪ್ರಮುಖ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬೃಹತ್ ಅಕ್ರಮಗಳು ನಡೆಯುತ್ತಿದ್ದು, ಅರ್ಹ ಮತದಾರರ...

SIR ಅಕ್ರಮಗಳ ವಿರುದ್ಧ ಅಕ್ಟೋಬರ್‌ 8ರಂದು ‘ಜನತಾ ನ್ಯಾಯಾಲಯ’: ಮತ ಹಕ್ಕು ರಕ್ಷಣೆಗೆ ವಿನೂತನ ಹೋರಾಟ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಅಕ್ರಮಗಳ ವಿರುದ್ಧ ಮತ್ತು ಎಸ್‌ಐಆರ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಅಕ್ಟೋಬರ್‌‌ 8ರಂದು 'ಜನತಾ ನ್ಯಾಯಾಲಯ' ಎಂಬ...

‘ಫಾರಂ 6 ಬದಲಾವಣೆ ಅನುಮೋದಿಸಿಲ್ಲ’: ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಪ್ರತಿಪಕ್ಷಗಳ ಆರೋಪಕ್ಕೆ ಮತ್ತಷ್ಟು ಬಲ ತುಂಬಿದ ಸುಪ್ರೀಂ ಹೇಳಿಕೆ

ನವದೆಹಲಿ: ಮತದಾರರಾಗಿ ನೋಂದಣಿ ಮಾಡಿಕೊಳ್ಳಲು ಬಳಸುವ ನಮೂನೆ 6ಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಸ್ಪಷ್ಟ ಹೇಳಿಕೆ ಇದೀಗ ಚುನಾವಣಾ ಆಯೋಗ ಮತ್ತು ಪ್ರತಿಪಕ್ಷಗಳ ನಡುವಿನ ಸಂಘರ್ಷವನ್ನು ಮತ್ತಷ್ಟು ತೀವ್ರಗೊಳಿಸಿದೆ. ಮತದಾರರ ಪಟ್ಟಿಯ...

ಬಂಗಾಳ ಟ್ರಿಬ್ಯೂನಲ್ ನ್ಯಾಯಾಧೀಶರಿಂದ ಚುನಾವಣಾ ಆಯೋಗದ ಪೋರ್ಟಲ್ ವೈಫಲ್ಯದ ಬಗ್ಗೆ ಗಂಭೀರ ಆರೋಪ: ‘ನೋಡೀಸ್ ಜಾರಿ, ವಿಚಾರಣೆ ಅಥವಾ ಮತದಾರರ ಹಕ್ಕು ಮರುಸ್ಥಾಪನೆ ಅಸಾಧ್ಯ!

ಪ್ರಮುಖ ರಾಷ್ಟ್ರೀಯ ದಿನಪತ್ರಿಕೆ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ವರದಿ ಮಾಡಿರುವಂತೆ, ಪಶ್ಚಿಮ ಬಂಗಾಳದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಅಳಿಸಲ್ಪಟ್ಟ ಲಕ್ಷಾಂತರ ಮತದಾರರ ಮೇಲ್ಮನವಿಗಳನ್ನು ವಿಲೇವಾರಿ ಮಾಡಲು ಸುಪ್ರೀಂ ಕೋರ್ಟ್...

‘ನಕಲಿ ಫಾರ್ಮ್ 7 ಸಲ್ಲಿಕೆ ವಿರುದ್ಧ ಕ್ರಮ ತೆಗೆದುಕೊಳ್ಳಿ..’; ಅಧಿಕಾರಿಗಳಿಗೆ ತೆಲಂಗಾಣ ಸಿಇಒ ಸೂಚನೆ

ತೆಲಂಗಾಣದಲ್ಲಿ ಫಾರ್ಮ್ 7 ರ ಮೂಲಕ ಮತದಾರರ ಹೆಸರುಗಳನ್ನು ಅಕ್ರಮವಾಗಿ ಅಳಿಸುತ್ತಿರುವ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ (ಡಿಇಒ) ರಾಜ್ಯದ ಮುಖ್ಯ ಚುನಾವಣಾಧಿಕಾರಿ (ಸಿಇಒ)...

ಕರ್ನಾಟಕ ಎಸ್ಐಆರ್: ಮುಸ್ಲೀಮರನ್ನು ಗುರಿಯಾಗಿಸಿ ತೀರ್ಥಹಳ್ಳಿಯಲ್ಲಿ 81 ಮತದಾರರ ಹೆಸರು ಅಳಿಸಲು ಬಿಜೆಪಿ ಮುಖಂಡರ ಮನವಿ

ಶಿವಮೊಗ್ಗ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯುತ್ತಿರುವ ನಡುವೆಯೇ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸುರುಳಿ ಬಾಳೆಬೈಲು ಗ್ರಾಮದಲ್ಲಿ 81 ಮತದಾರರ ಹೆಸರುಗಳನ್ನು ಕರಡು ಮತದಾರರ ಪಟ್ಟಿಯಿಂದ ಅಳಿಸುವಂತೆ ಬಿಜೆಪಿ...

ಮುಸ್ಲಿಂ ಮತದಾರರ ಹೆಸರು ಡಿಲೀಟ್ ಪ್ರಕರಣ: ಬಿಜೆಪಿ ನಾಯಕ ರವಿ ಪಾಟೀಲ್‌ಗೆ ನಿರೀಕ್ಷಣಾ ಜಾಮೀನು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಮುಸ್ಲಿಂ ಮತದಾರರ ಹೆಸರುಗಳನ್ನು ಮೋಸದಿಂದ ಡಿಲೀಟ್ ಮಾಡಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ನಾಯಕ ಡಾ. ರವಿ ಬಸಲಿಂಗಪ್ಪಗೌಡ ಪಾಟೀಲ್ ಅವರಿಗೆ ಕರ್ನಾಟಕದ ಬೆಳಗಾವಿಯ...