Homeಮುಖಪುಟಜಂತರ್ ಮಂತರ್ ಪ್ರತಿಭಟನೆ: ಕಾಕ್ರೋಚ್ ಜನತಾ ಪಾರ್ಟಿ ನಾಯಕರ ನ್ಯಾಯಾಂಗ ಬಂಧನ ಎರಡು ದಿನಗಳಿಗೆ ವಿಸ್ತರಣೆ;...

ಜಂತರ್ ಮಂತರ್ ಪ್ರತಿಭಟನೆ: ಕಾಕ್ರೋಚ್ ಜನತಾ ಪಾರ್ಟಿ ನಾಯಕರ ನ್ಯಾಯಾಂಗ ಬಂಧನ ಎರಡು ದಿನಗಳಿಗೆ ವಿಸ್ತರಣೆ; ಪ್ರಕರಣ ಕ್ರೈಂ ಬ್ರಾಂಚ್‌ಗೆ ವರ್ಗಾವಣೆ!

- Advertisement -
- Advertisement -

ದೆಹಲಿಯ ನಿರ್ಬಂಧಿತ ಜಂತರ್ ಮಂತರ್ ಪ್ರದೇಶಕ್ಕೆ ಅತಿಕ್ರಮ ಪ್ರವೇಶ ಮಾಡಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಎರಡು ದಿನಗಳಿಗೆ ವಿಸ್ತರಿಸಿ ಆದೇಶಿಸಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಈ ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರ ಕ್ರೈಂ ಬ್ರಾಂಚ್‌ಗೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಕ್ಟೋಬರ್ 14 ರಿಂದ ವಶದಲ್ಲಿರುವ ಇಬ್ಬರೂ ನಾಯಕರನ್ನು ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ತನಿಖೆಗಾಗಿ ಐದು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೋರಿದ್ದರು. ಆದರೆ ಮನವಿಯನ್ನು ಪರಿಶೀಲಿಸಿದ ಮ್ಯಾಜಿಸ್ಟ್ರೇಟ್, ಪೊಲೀಸರ ಬೇಡಿಕೆಯಂತೆ 5 ದಿನಗಳ ಬದಲಿಗೆ 2 ದಿನಗಳವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶಿಸಿದ್ದಾರೆ. ವಿಚಾರಣೆ ವೇಳೆ, ಆರೋಪಿಗಳು ಕಳೆದ ಅಕ್ಟೋಬರ್ 11 ರಂದು ಮುಚ್ಚಳಿಕೆಯೊಂದಿಗೆ ಸಲ್ಲಿಸಿದ್ದ ಶಾಂತಿ ಬಾಂಡ್‌ಗಳನ್ನು “ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ್ದಾರೆ” ಎಂದು ನ್ಯಾಯಾಲಯ ಕಠಿಣ ಅವಲೋಕನವನ್ನು ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ.

ಮತ್ತೊಂದೆಡೆ, ಆರೋಪಿಗಳ ಪರ ವಕೀಲರು ಸಲ್ಲಿಸಿದ್ದ ಜಾಮೀನು ಹಾಗೂ ಜಾಮೀನುದಾರರ ದಾಖಲೆಗಳಲ್ಲಿ ವ್ಯತ್ಯಾಸವಿರುವುದನ್ನು ಹಾಗೂ ಅವುಗಳ ವಿವರಗಳು ತೃಪ್ತಕರವಾಗಿಲ್ಲದೆ ಇರುವುದನ್ನು ಗಮನಿಸಿದ ನ್ಯಾಯಾಲಯವು ಅವುಗಳನ್ನು ತಿರಸ್ಕರಿಸಿದೆ. ಇದರ ನಡುವೆ, ತನಿಖೆ ಮತ್ತು ಜಾಮೀನು ಪ್ರಕ್ರಿಯೆಗಳನ್ನು ಉದ್ದೇಶಪೂರ್ವಕವಾಗಿ ವಿಳಂಬಗೊಳಿಸಲಾಗುತ್ತಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಗಂಭೀರ ಆರೋಪ ಮಾಡಿದೆ.

ಇದೇ ವೇಳೆ, CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. “26 ವರ್ಷದ ಸೌರವ್ ದಾಸ್ ಅವರನ್ನು ಜೈಲಿನಲ್ಲಿರಿಸುವ ಮೂಲಕ ನೀವು ಶಕ್ತಿಶಾಲಿ ಎಂದು ಭಾವಿಸಿರಬಹುದು. ಬೀದಿಗಳಲ್ಲಿ ಮಕ್ಕಳ ಮೇಲೆ ಹಲ್ಲೆ ನಡೆಸುವ ಮೂಲಕ ಅಥವಾ ದೆಹಲಿಯಾದ್ಯಂತ ಬ್ಯಾರಿಕೇಡ್‌ಗಳನ್ನು ಹಾಕಿ ವಿದ್ಯಾರ್ಥಿಗಳನ್ನು ಎಳೆದಾಡುವ ಮೂಲಕ ನಿಮ್ಮ ಶಕ್ತಿಯನ್ನು ಪ್ರದರ್ಶಿಸುತ್ತಿರಬಹುದು. ರಾಷ್ಟ್ರಧ್ವಜ ಪ್ರದರ್ಶಿಸಲು ಜಂತರ್ ಮಂತರ್‌ಗೆ ತೆರಳಿದ್ದ ದಾಸ್ ಮತ್ತು ರಂಕಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿ, ಅವರ ನ್ಯಾಯಾಲಯದ ವಿಚಾರಣೆಗಳನ್ನು ಪದೇಪದೇ ಮುಂದೂಡಲಾಗುತ್ತಿದೆ” ಎಂದು ದೀಪ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಧಿತರಾದ ಸೌರವ್ ದಾಸ್ ಅವರು ಲಂಡನ್‌ನಲ್ಲಿದ್ದ ತಮ್ಮ ಉದ್ಯೋಗವನ್ನು ತೊರೆದು ಸಾಮಾಜಿಕ ಹೋರಾಟಕ್ಕೆ ಬಂದಿರುವುದಾಗಿ ಮತ್ತು ಅಶುತೋಷ್ ರಾಂಕಾ ಅವರು ಭಾರತದ ಕಾನೂನು ವ್ಯವಸ್ಥೆಯ ಕುರಿತು ಬರೆದಿರುವ ಹಿನ್ನೆಲೆಯನ್ನು ಬೆಂಬಲಿಗರು ಸ್ಮರಿಸಿದ್ದಾರೆ. ಸಾರ್ವಜನಿಕ ಶಾಂತಿ ಮತ್ತು ಪ್ರತಿಭಟನಾ ಹಕ್ಕುಗಳ ಕುರಿತಾದ ಕಾನೂನು ಚರ್ಚೆಗಳ ನಡುವೆ, ಅಕ್ಟೋಬರ್ 21 ರಂದು ಈ ಇಬ್ಬರೂ ನಾಯಕರು ಮತ್ತೊಮ್ಮೆ ನ್ಯಾಯಾಲಯದ ವಿಚಾರಣೆಗೆ ಹಾಜರಾಗಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್‌ ತೀರ್ಪನ್ನು ‘ನ್ಯಾಯ ನಿರಾಕರಣೆ’ ಎಂದು ಟೀಕಿಸುವುದು ಅಪರಾಧವಲ್ಲ : ಕರ್ನಾಟಕ ಹೈಕೋರ್ಟ್

ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕಿನ ವ್ಯಾಪ್ತಿಯನ್ನು ಸ್ಪಷ್ಟಪಡಿಸಿರುವ ಕರ್ನಾಟಕ ಹೈಕೋರ್ಟ್, ಸುಪ್ರೀಂ ಕೋರ್ಟ್ ತೀರ್ಪೊಂದನ್ನು ಟೀಕಿಸುವ ಘೋಷವಾಕ್ಯಗಳನ್ನು ಸಾರ್ವಜನಿಕ ಗೋಡೆಯ ಮೇಲೆ ಬರೆದಿದ್ದಾರೆ ಎಂಬ ಆರೋಪದ ಮೇರೆಗೆ 13 ವ್ಯಕ್ತಿಗಳ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್...

‘ಭಾರತದಲ್ಲಿ ಆಡಳಿತ ಬದಲಾವಣೆ ಆಗುವುದಿಲ್ಲ’: ಪ್ರತಿಭಟನೆ, ಹೋರಾಟಗಳಿಗೆ ಪಶ್ಚಿಮ ದೇಶಗಳ ಪ್ರಭಾವ ಕಾರಣ ಎಂದ ಮೋಹನ್ ಭಾಗವತ್

ನಾಗ್ಪುರ: ಭಾರತದಲ್ಲಿ ಆಡಳಿತ ಬದಲಾವಣೆಯ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎನ್ನುವ ವಾದವನ್ನು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರೋಧಿಸಿದ್ದಾರೆ. ಆಡಳಿತ ಬದಲಾವಣೆಗೆ ಕರೆ ನೀಡುವ ಚಳವಳಿಗಳು ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವುದಿಲ್ಲ. ಬದಲಿಗೆ,...

ಗಾಜಿಯಾಬಾದ್‌| ದಲಿತ ವಿದ್ಯಾರ್ಥಿಗೆ ಸಹಪಾಠಿಗಳಿಂದ ಜಾತಿ ನಿಂದನೆ – ಹಲ್ಲೆ ಆರೋಪ

ಅಕ್ಟೋಬರ್ 7 ರ ಮಧ್ಯರಾತ್ರಿ ಮಹೇಶ್ ಕುಮಾರ್ (45) ಎಚ್ಚರಗೊಂಡಾಗ, ತಮ್ಮ ಮನೆಯ ಹೊರಗೆ 11ನೇ ತರಗತಿಯಲ್ಲಿ ಓದುತ್ತಿದ್ದ ಮಗ ಕುಳಿತಿರುವುದನ್ನು ಗಮನಿಸಿದರು. ಆ ಹದಿಹರೆಯದ ಬಾಲಕನ ಮುಖದಲ್ಲಿ ಆತಂಕವಿತ್ತು, ಶಾಲೆಯಲ್ಲಿ ತನಗಾಗುತ್ತಿದ್ದ...

ಪ್ರಧಾನಿ, ಮಾಜಿ ಪ್ರಧಾನಿ ವಿದೇಶಿ ಪ್ರವಾಸ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್!

ಮಾಹಿತಿ ಹಕ್ಕು ಕಾಯ್ದೆಯಡಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಡಾ. ಮನ್ಮೋಹನ್ ಸಿಂಗ್ ಅವರು ಭಾರತೀಯ ವಾಯುಪಡೆಯ (IAF) ವಿಮಾನಗಳಲ್ಲಿ ನಡೆಸಿದ್ದ ವಿದೇಶಿ ಪ್ರವಾಸಗಳಿಗೆ ಸಂಬಂಧಿಸಿದ ವಿವರವಾದ ದಾಖಲೆಗಳನ್ನು ಬಹಿರಂಗಪಡಿಸುವಂತೆ...

ಗಾಯಕಿ ನೇಹಾ ಸಿಂಗ್ ಕುರಿತು ಎಬಿಪಿ ನ್ಯೂಸ್ ಸುಳ್ಳು, ಮಾನಹಾನಿಕರ ವರದಿ : ಸ್ವಯಂಪ್ರೇರಿತ ಪ್ರಕರಣ ಕೈಗೆತ್ತಿಕೊಂಡ ರಾಷ್ಟ್ರೀಯ ಮಹಿಳಾ ಆಯೋಗ

ಗಾಯಕಿ ಹಾಗೂ ಹೋರಾಟಗಾರ್ತಿ ನೇಹಾ ಸಿಂಗ್ ರಾಥೋರ್ ಬಗ್ಗೆ ಎಬಿಪಿ ನ್ಯೂಸ್ ಸುಳ್ಳು ಹಾಗೂ ಅವಹೇಳನಕಾರಿ ಸುದ್ದಿ ಪ್ರಸಾರ ಮಾಡಿರುವುದಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಸ್ವಯಂಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡಿದೆ. ಎಬಿಪಿ ನ್ಯೂಸ್...

‘ಅನ್ಯಧರ್ಮೀಯರು ಹೊರಹೋಗಿ’: ಗುಜರಾತ್ ಗರ್ಬಾ ಉತ್ಸವಗಳಲ್ಲಿ ಹಿಂದುತ್ವ ಸಂಘಟನೆಗಳಿಂದ ಕಿರುಕುಳ, ಬೆದರಿಕೆ!

ಗುಜರಾತ್‌ನಾದ್ಯಂತ ನಡೆಯುತ್ತಿರುವ ನವರಾತ್ರಿ ಗರ್ಬಾ ಉತ್ಸವಗಳಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸೇರಿದಂತೆ ಬಲಪಂಥೀಯ ಹಿಂದುತ್ವ ಸಂಘಟನೆಗಳು ಮುಸ್ಲಿಮರು ಹಾಗೂ ಮುಸ್ಲಿಮೇತರರನ್ನು ಪ್ರವೇಶಿಸದಂತೆ ತಡೆಯಲು ಹೊಸ ನಿಯಮಗಳನ್ನು ಜಾರಿಗೆ ತರುತ್ತಿವೆ ಎಂದು...

ಮಣಿಪುರ ಹಿಂಸಾಚಾರ: ಉರುವಲು ಸಂಗ್ರಹಿಸುತ್ತಿದ್ದ ಮೂವರನ್ನು ಕೊಂದ ಉಗ್ರರು; ಸಿಎಂ ನಿವಾಸದ ಮುಂದೆ ಶವಗಳನ್ನಿಟ್ಟು ಸ್ಥಳೀಯರ ಪ್ರತಿಭಟನೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಕಾಡಿನಲ್ಲಿ ಉರುವಲು ಸಂಗ್ರಹಿಸಲು ತೆರಳಿದ್ದ ಮೂವರನ್ನು ಉಗ್ರಗಾಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಇಂಫಾಲ್ ಪೂರ್ವ ಮತ್ತು ಕಾಂಗ್ಪೋಕ್ಪಿ ಜಿಲ್ಲೆಗಳ ಗಡಿಯಲ್ಲಿರುವ ಬೆಟ್ಟ ಪ್ರದೇಶದಲ್ಲಿ ಸೋಮವಾರ ಈ ದಾಳಿ ನಡೆದಿದೆ....

ಆಂಧ್ರ ಪ್ರದೇಶ | ಹಿಂಸಾಚಾರದಿಂದ ಮುನ್ಸಿಪಲ್ ಚುನಾವಣೆ ನಾಮಪತ್ರ ಸಲ್ಲಿಕೆಗೆ ಅಡ್ಡಿ ಆರೋಪ : ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈಎಸ್‌ಆರ್‌ ಕಾಂಗ್ರೆಸ್

ಆಂಧ್ರ ಪ್ರದೇಶದಲ್ಲಿ ನಡೆದ ವ್ಯಾಪಕ ಹಿಂಸಾಚಾರದಿಂದಾಗಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ವೈಎಸ್‌ಆರ್‌ ಕಾಂಗ್ರೆಸ್ ಪಕ್ಷ ಸೋಮವಾರ (ಅಕ್ಟೋಬರ್ 19) ಸುಪ್ರೀಂ ಕೋರ್ಟ್‌ನ...

ಮೂಲಭೂತ ಸೌಕರ್ಯ- ವಿದ್ಯಾರ್ಥಿ ಸಂಘಕ್ಕಾಗಿ ಉಪವಾಸ ಸತ್ಯಾಗ್ರಹ; ಸಮಸ್ಯೆಗಳ ಪರಿಹಾರಕ್ಕೆ ಮುಂದಾದ ಜಾಮಿಯಾ ಆಡಳಿತ ಮಂಡಳಿ

ದೆಹಲಿಯಲ್ಲಿರುವ ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿರುವ ಉಪವಾಸ ಸತ್ಯಾಗ್ರಹಕ್ಕೆ ಒಂದು ವಾರ ತುಂಬಿದ ಹಿನ್ನೆಲೆಯಲ್ಲಿ, ಸೋಮವಾರ (ಅ.19) ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಏಳು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ವಿದ್ಯಾರ್ಥಿಗಳು...

2027ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗುವ ಇಚ್ಛೆ: ಕೊಲೆ ಅಪರಾಧಿಯ ಶಿಕ್ಷೆಗೆ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್!

ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಸಾಧ್ಯವಾದರೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಟಿಕೆಟ್‌ನಲ್ಲಿ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿರುವ ಕೊಲೆ ಪ್ರಕರಣದ ಅಪರಾಧಿಯ ಜೀವಾವಧಿ ಜೈಲು ಶಿಕ್ಷೆ...