Homeಮುಖಪುಟಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ 'ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ' ಎಂದು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

- Advertisement -
- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಈ ವೀಡಿಯೊದಲ್ಲಿ, ತಾನು ಇನ್ನೂ ಅಪ್ರಾಪ್ತ ವಯಸ್ಕಳಾಗಿದ್ದು, ಪ್ರತಿಭಟನೆಯಲ್ಲಿದ್ದ ಜನರ ಪ್ರಭಾವಕ್ಕೆ ಒಳಗಾಗಿ ಪ್ರಧಾನಿಯವರ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾಗಿ ಆಕೆ ಹೇಳಿಕೊಂಡಿದ್ದಾಳೆ ಎಂದು ಪಿಟಿಐ ವರದಿ ಮಾಡಿದೆ.

ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಆಕೆಯ ವಯಸ್ಸು 25 ವರ್ಷ ಎಂದು ಉಲ್ಲೇಖಿಸಲಾಗಿದ್ದರೆ, ಕ್ಷಮೆಯಾಚನೆಯ ವಿಡಿಯೋದಲ್ಲಿ ಆಕೆ ತನಗೆ ಕೇವಲ 15 ವರ್ಷ ವಯಸ್ಸು ಎಂದು ಹೇಳಿಕೊಂಡಿದ್ದಾಳೆ. ನನಗೆ ಕೇವಲ 15 ವರ್ಷ. ನಾನು ಮಾಡಿದ್ದು ಕ್ಷಮೆಗೆ ಅರ್ಹವಲ್ಲದ್ದು, ನಾನು ಅತ್ಯಂತ ಕೆಟ್ಟದಾಗಿ ಮಾತನಾಡಿದ್ದೇನೆ ಎಂದಿರುವ ಆಕೆ, ಇದನ್ನು ತನ್ನ ಮೊದಲ ಮತ್ತು ಕೊನೆಯ ತಪ್ಪು ಎಂದು ಹೇಳಿದ್ದಾಳೆ. ಅಲ್ಲದೆ, ನಾನು ಇಡೀ ದೇಶದ ಕ್ಷಮೆ ಕೇಳುತ್ತೇನೆ. ನನಗೆ ತುಂಬಾ ನಾಚಿಕೆಯಾಗುತ್ತಿದೆ, ನನ್ನನ್ನು ನಾನೇ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ವಿನಂತಿಸಿದ್ದಾಳೆ. ಆದರೆ ಈ ವಿಡಿಯೋದ ನೈಜತೆಯನ್ನು ಸ್ವತಂತ್ರವಾಗಿ ದೃಢೀಕರಿಸಲು ಸಾಧ್ಯವಾಗಿಲ್ಲ.

ಜುಲೈ 23 ರಂದು ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ನೋಯ್ಡಾ ಪೊಲೀಸರು ಜೀರೋ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಆ ನಂತರ ಈ ಜೀರೋ ಎಫ್‌ಐಆರ್ ಅನ್ನು ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.

ಪ್ರತಿಭಟನಾಕಾರ ಬಾಲಕಿಯ ವಯಸ್ಸನ್ನು ಪರಿಶೀಲಿಸಲು ದೆಹಲಿ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಇದೀಗ ಕ್ಷಮೆಯಾಚನೆಯ ವೀಡಿಯೊ ಹೊರಬಂದಿರುವುದರಿಂದ, ಮುಂದಿನ ತನಿಖೆಯನ್ನು ಹೇಗೆ ನಡೆಸಬೇಕು ಎಂಬುದರ ಕುರಿತು ಪರಿಶೀಲಿಸಿ ನಿರ್ಧಾರ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. ಆದರೆ, ಈ ವೀಡಿಯೊದಲ್ಲಿರುವ ಹೇಳಿಕೆಗಳ ಸತ್ಯಾಸತ್ಯತೆಯನ್ನು ಇಂಡಿಯನ್ ಎಕ್ಸ್‌ಪ್ರೆಸ್ ಸ್ವತಂತ್ರವಾಗಿ ದೃಢೀಕರಿಸಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಹುಡುಕಿದರೂ ಯಾವುದೇ ದೃಢೀಕೃತ ಖಾತೆ ಸಿಕ್ಕಿಲ್ಲ ಹಾಗೂ ಈ ಪ್ರಕರಣದಲ್ಲಿ ಆ ಯುವತಿಯಿಂದ ಯಾವುದೇ ಪ್ರತಿಕ್ರಿಯೆ ಲಭಿಸಿಲ್ಲ ಎಂದು ವರದಿ ಹೇಳಿದೆ.

ಮತ್ತೊಂದೆಡೆ, ಶುಕ್ರವಾರ ರಾತ್ರಿ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರು ಬಳಸಿದ ನಿಂದನೀಯ ಭಾಷೆ ಸಾಂಸ್ಕೃತಿಕ ಆಘಾತ ತಂದಿದೆ. ಆದಾಗ್ಯೂ, ದಾರಿ ತಪ್ಪಿದ ಯುವಜನತೆಯನ್ನು ಸಮಾಜವು ತಿದ್ದಿ ಸರಿದಾರಿಗೆ ತರಬೇಕು ಮತ್ತು ಆ ರೀತಿ ತನಗೆ ನಿಂದಿಸಿದ ‘ದಾರಿ ತಪ್ಪಿದ ಯುವಕರನ್ನು’ ತಾನು ಕ್ಷಮಿಸಿರುವುದಾಗಿ ಹೇಳಿದ್ದಾರೆ.

ಮುಂದುವರೆದು ಮಾತನಾಡಿದ ಪ್ರಧಾನಿ ಮೋದಿ, ಪ್ರತಿಭಟನೆಯ ಸಮಯದಲ್ಲಿ ಕೆಲವು ‘ಕಿಡಿಗೇಡಿ ಮಕ್ಕಳು’ ತಮ್ಮನ್ನು ಮತ್ತು ತಮ್ಮ ಮೃತ ತಾಯಿಯನ್ನು ಗುರಿಯಾಗಿಸಿಕೊಂಡು ಅತ್ಯಂತ ಕೀಳು ಮಟ್ಟದ ಮಾತುಗಳನ್ನು ಬಳಸಿದ್ದಾರೆ. ಆದರೆ ನಿಂದನೆಗಳಿಂದ ಎಂದಿಗೂ ಸಮಸ್ಯೆಗಳು ಬಗೆಹರಿಯುವುದಿಲ್ಲ, ಯೌವನದಲ್ಲಿ ಮಾಡಿದ ತಪ್ಪುಗಳನ್ನು ಸರಿಯಾದ ಮಾರ್ಗದರ್ಶನದ ಮೂಲಕ ತಿದ್ದಬೇಕು ಎಂದಿದ್ದಾರೆ. ಯುವಕರನ್ನು ಶಿಕ್ಷಿಸುವುದು, ಅವರನ್ನು ಕೋರ್ಟ್ ಮೆಟ್ಟಿಲೇರಿಸುವುದು ಅಥವಾ ತೊಂದರೆ ಕೊಡುವುದರಿಂದ ಪರಿಸ್ಥಿತಿ ಬದಲಾಗುವುದಿಲ್ಲ. ಹೀಗಾಗಿ ಅವರನ್ನು ಕ್ಷಮಿಸಲು ತಾನು ಬಯಸುತ್ತಿದ್ದು, ಸಮಾಜವೂ ಅವರಿಗೆ ಸರಿಯಾದ ದಾರಿ ತೋರಿಸಬೇಕು ಎಂದು ಪ್ರಧಾನಿ ಕರೆ ನೀಡಿದ್ದಾರೆ. ನೀಟ್ ಅಕ್ರಮಗಳ ಕುರಿತ ಈ ಸರಣಿ ಪ್ರತಿಭಟನೆಗಳ ಬೆನ್ನಲ್ಲೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...