Homeಮುಖಪುಟಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

- Advertisement -
- Advertisement -

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು ಹೊರಬರುತ್ತಿವೆ. ಪ್ರತಿಭಟನಾ ಸ್ಥಳಕ್ಕೆ 30 ರಿಂದ 40 ಮಂದಿ ಅಪರಿಚಿತ ನುಸುಳುಕೋರರು ನುಗ್ಗಿದ್ದು, ಇವರು ಶಾಂತಿಯುತ ಹೋರಾಟವನ್ನು ಪ್ರಚೋದನಾತ್ಮಕ ಮತ್ತು ದೇಶವಿರೋಧಿ ಘೋಷಣೆಗಳ ಮೂಲಕ ಹಾದಿ ತಪ್ಪಿಸಲು ಸಂಚು ರೂಪಿಸುತ್ತಿದ್ದಾರೆ ಎಂದು ಸಿಜೆಪಿ ಗಂಭೀರ ಆರೋಪ ಮಾಡಿದೆ.

ಪ್ರತಿಭಟನಾ ಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಜೆಪಿ ವಕ್ತಾರ ಅಶುತೋಷ್ ರಂಕಾ, BJP ಮತ್ತು ದೆಹಲಿ ಪೊಲೀಸರೊಂದಿಗೆ ಸಂಬಂಧ ಹೊಂದಿರುವ ಕಿಡಿಗೇಡಿಗಳು ನಮ್ಮ ಪ್ರತಿಭಟನಾ ಸ್ಥಳಕ್ಕೆ ನುಸುಳಿದ್ದಾರೆ. ನಮ್ಮ ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ದೊಡ್ಡ ಮಟ್ಟದ ಪಿತೂರಿ ನಡೆದಿದೆ. ನುಗ್ಗಿರುವ ಈ ಕಿಡಿಗೇಡಿಗಳಿಗೂ ನಮ್ಮ ಪಕ್ಷಕ್ಕಾಗಲಿ ಅಥವಾ ಸೋನಮ್ ವಾಂಗ್ಚುಕ್ ಅವರಿಗಾಗಲಿ ಯಾವುದೇ ಸಂಬಂಧವಿಲ್ಲ. ನಮ್ಮ ಬೆಂಬಲಿಗರು ಜಾಗರೂಕರಾಗಿರಬೇಕು ಮತ್ತು ಇಂತಹ ಪಿತೂರಿ ಶಕ್ತಿಗಳನ್ನು ಗುರುತಿಸಿ ದೂರ ಇಡಬೇಕು ಎಂದು ಕರೆ ನೀಡಿದ್ದಾರೆ.

ಮತ್ತೊಂದೆಡೆ, ನೀಟ್ ಪೇಪರ್ ಲೀಕ್ ಹಗರಣವನ್ನು ವಿರೋಧಿಸಿ ಜುಲೈ 20ರಂದು ಹಮ್ಮಿಕೊಳ್ಳಲಾಗಿರುವ ಬೃಹತ್ ಸಂಸತ್ ಚಲೋ ಮೆರವಣಿಗೆಯನ್ನು ಶಿಕ್ಷಣ ತಜ್ಞ ಸೋನಮ್ ವಾಂಗ್ಚುಕ್ ಅವರು ಭಾರತದ ಎರಡನೇ ಸ್ವಾತಂತ್ರ್ಯ ಚಳವಳಿ ಎಂದು ಬಣ್ಣಿಸಿದ್ದಾರೆ.

ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿ ಆಸ್ಪತ್ರೆಯಲ್ಲಿರುವ ವಾಂಗ್ಚುಕ್ ಅವರು ತಮ್ಮ ಪತ್ನಿಯ ಮೂಲಕ ಬೆಂಬಲಿಗರಿಗೆ ಮಹತ್ವದ ಸಂದೇಶ ರವಾನಿಸಿದ್ದು, “ದೇಶದ ಯುವಜನರ ಭವಿಷ್ಯಕ್ಕಾಗಿ ಹಮ್ಮಿಕೊಳ್ಳಲಾಗಿರುವ ಈ ಸಂಸತ್ ಚಲೋ ಮೆರವಣಿಗೆಯನ್ನು ದೇಶಾದ್ಯಂತ ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸಬೇಕು,” ಎಂದು ದೇಶದ ಜನತೆಗೆ ಮನವಿ ಮಾಡಿದ್ದಾರೆ.

ಹೈಕೋರ್ಟ್ ಮೆಟ್ಟಿಲೇರಿದ ವಾಂಗ್ಚುಕ್ ಪತ್ನಿ

ಉಪವಾಸ ಸತ್ಯಾಗ್ರಹದ ಹಿನ್ನೆಲೆಯಲ್ಲಿ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ಬಲವಂತವಾಗಿ ಸಫ್ದರ್ಜಂಗ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಸಫ್ದರ್ಜಂಗ್ ಆಸ್ಪತ್ರೆಯ ಚಿಕಿತ್ಸೆಯ ಮೇಲೆ ನಮಗೆ ನಂಬಿಕೆಯಿಲ್ಲ, ಎಂದು ವಾಂಗ್ಚುಕ್ ಅವರ ಪತ್ನಿ ಆತಂಕ ವ್ಯಕ್ತಪಡಿಸಿದ್ದಾರೆ.

ವಾಂಗ್ಚುಕ್ ಅವರ ಆರೋಗ್ಯದ ಹಿತದೃಷ್ಟಿಯಿಂದ ಅವರನ್ನು ತಮಗೆ ಇಷ್ಟಬಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಅನುಮತಿ ಕೋರಿ ಅವರು ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದೇ ವೇಳೆ, ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಪೊಲೀಸರು ಬಲವಂತವಾಗಿ ಹೊತ್ತೊಯ್ದ ದಿನದಿಂದಲೇ, ಸಿಜೆಪಿ ಸಂಸ್ಥಾಪಕರಾದ ಅಭಿಜೀತ್ ದೀಪ್ಕೆ ಅವರು ಜಂತರ್ ಮಂತರ್‌ನಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...