Homeಅಂತರಾಷ್ಟ್ರೀಯಜಪಾನ್‌ನ ’ಟ್ವಿಟರ್ ಕಿಲ್ಲರ್’ಗೆ ಮರಣದಂಡನೆ ವಿಧಿಸಿದ ಟೋಕಿಯೊ ನ್ಯಾಯಾಲಯ

ಜಪಾನ್‌ನ ’ಟ್ವಿಟರ್ ಕಿಲ್ಲರ್’ಗೆ ಮರಣದಂಡನೆ ವಿಧಿಸಿದ ಟೋಕಿಯೊ ನ್ಯಾಯಾಲಯ

’ಟ್ವಿಟರ್ ಕಿಲ್ಲರ್’ ಒಂಬತ್ತು ಮಂದಿಯನ್ನು ಕೊಲೆ ಮಾಡಿ, ಅವರ ದೇಹದ ಅಂಗಾಂಗಗಳನ್ನು ಬೇರ್ಪಡಿಸಿ ತನ್ನ ಅಪಾರ್ಟ್‌ಮೆಂಟ್‌ನ ಶೀತಲೀಕರಣ ಘಟಕದಲ್ಲಿ ಸಂಗ್ರಹಿಸಿಟ್ಟಿದ್ದ. 

- Advertisement -
- Advertisement -

ಆನ್‌ಲೈನ್‌ನಲ್ಲಿ ಭೇಟಿಯಾದ ಒಂಬತ್ತು ಜನರನ್ನು ಕೊಲೆ ಮಾಡಿ ತುಂಡು ತುಂಡು ಮಾಡಿದ್ದ ಜಪಾನಿನ ’ಟ್ವಿಟರ್ ಕಿಲ್ಲರ್’ ಎಂದು ಖ್ಯಾತನಾಗಿದ್ದ ವ್ಯಕ್ತಿಗೆ ಟೋಕಿಯೊ ನ್ಯಾಯಾಲಯ ಮಂಗಳವಾರ ಮರಣದಂಡನೆ ವಿಧಿಸಿದೆ.

30 ವರ್ಷದ ಅಪರಾಧಿ ತಕಾಹಿರೋ ಶಿರೈಶಿ ಯುವ ಸಂತ್ರಸ್ತರನ್ನು ಕೊಂದು ತುಂಡು ತುಂಡು ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ. ಹತರಾದವರಲ್ಲಿ ಒಬ್ಬರನ್ನು ಹೊರತುಪಡಿಸಿ ಎಲ್ಲರೂ ಅಪರಾಧಿಗೆ ಸಾಮಾಜಿಕ ಮಾಧ್ಯಮದಲ್ಲಿ ಭೇಟಿಯಾಗಿದ್ದವರು.

15 ರಿಂದ 26 ವರ್ಷದೊಳಗಿನ ಮೃತ ಸಂತ್ರಸ್ತರು ಸಾಮಾಜಿಕ ಮಾಧ್ಯಮದಲ್ಲಿ ಆತ್ಮಹತ್ಯಾ ಆಲೋಚನೆಗಳನ್ನು ವ್ಯಕ್ತಪಡಿಸಿದ್ದರು. ತಮ್ಮ ಸಾವಿಗೆ ಒಪ್ಪಿಗೆ ಸೂಚಿಸಿದ್ದರು ಎಂದು ವಾದಿಸಿದ ಆರೋಪಿ ಪರ ವಕೀಲ ಜೈಲು ಶಿಕ್ಷೆ ನೀಡುವಂತೆ ಮನವಿ ಮಾಡಿದ್ದರು.

ಆದರೆ, ಮಂಗಳವಾರ ಅಪರಾಧಿ ತಕಾಹಿರೋ ಶಿರೈಶಿಗೆ ನ್ಯಾಯಾಧೀಶ ನೌಕುನಿ ಯಾನೊ ಮರಣದಂಡನೆ ವಿಧಿಸಿದ್ದಾರೆ ಎಂದು ನ್ಯಾಯಾಲಯದ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ನಮಗೆ ಜಿಯೋ ಬೇಡ, BSNLಗೆ ಪೋರ್ಟ್ ಆಗಲು 4G ಸೇವೆ ಕೊಡಿ: KVS ಒತ್ತಾಯ

’ಟ್ವಿಟರ್ ಕಿಲ್ಲರ್’ ಒಂಬತ್ತು ಮಂದಿಯನ್ನು ಕೊಲೆ ಮಾಡಿ, ಅವರ ದೇಹದಿಂದ ಅಂಗಾಂಗಗಳನ್ನು ಬೇರ್ಪಡಿಸಿ ಅವುಗಳನ್ನು ತನ್ನ ಅಪಾರ್ಟ್‌ಮೆಂಟ್‌ನ ಶೀತಲೀಕರಣ ಘಟಕದಲ್ಲಿ ಸಂಗ್ರಹಿಸಿಟ್ಟಿದ್ದ.

“ಒಂಬತ್ತು ಯುವಕರ ಪ್ರಾಣವನ್ನು ಕಸಿದುಕೊಳ್ಳುವುದು ಅತ್ಯಂತ ಗಂಭೀರವಾಗಿದೆ. ಈ ಕೊಲೆಗಳಿಗೆಲ್ಲ ಆರೋಪಿಯೇ ನೇರ ಹೊಣೆ. ಹತರಾದವರ್‍ಯಾರೂ ಕೊಲೆಯಾಗಲು ಒಪ್ಪಿರಲಿಲ್ಲ. ಈತನ ಕೃತ್ಯದಿಂದ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ’ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ತಾವು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿರುವುದಾಗಿ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದರು. ಅಂತಹವರನ್ನು ಸಂಪರ್ಕಿಸಲು ಶಿರೈಶಿ ಟ್ವಿಟ್ಟರ್ ಅನ್ನು ಬಳಸಿದ್ದಾರೆ. ಟ್ವಿಟರ್‌ನಲ್ಲಿ ‘ಹ್ಯಾಂಗ್‌ ಮ್ಯಾನ್‌’ ಹೆಸರಿನಲ್ಲಿ ಖಾತೆ ತೆರೆದಿದ್ದ ಆರೋಪಿ, ತಾನು ಅವರಿಗೆ ಸಹಾಯ ಮಾಡುವುದಾಗಿ ತಿಳಿಸಿ, ತನ್ನ ಅಪಾರ್ಟ್‌ಮೆಂಟ್‌ಗೆ ಕರೆಸಿಕೊಂಡು ಕೊಲೆ ಮಾಡುತ್ತಿದ್ದ ಎಂದು ತನಿಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಚಾರಣೆ ವೀಕ್ಷಣೆಗೆ ನ್ಯಾಯಾಲಯವು ಸಾರ್ವಜನಿಕರಿಗಾಗಿ ಕೇವಲ 16 ಸ್ಥಾನಗಳನ್ನು ಮಾತ್ರ ಹೊಂದಿತ್ತು. ಆದರೆ, ಈ ಪ್ರಕರಣದ ವಿಚಾರಣೆಯನ್ನು ಖುದ್ದಾಗಿ ನೋಡಲು ಸುಮಾರು 435 ಜನರು ನ್ಯಾಯಾಲಯದಲ್ಲಿ ಹಾಜರಿದ್ದರು ಎಂದು ವರದಿಯಾಗಿದೆ.


ಇದನ್ನೂ ಓದಿ: ಉತ್ತರ ಪ್ರದೇಶ-ಅಂತರ್‌ಧರ್ಮಿಯ ವಿವಾಹ; ಗರ್ಭಿಣಿ ಸರ್ಕಾರಿ ಆಶ್ರಯತಾಣದಲ್ಲಿ, ಪತಿ ಜೈಲಿನಲ್ಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...