Homeಮುಖಪುಟಜಾರ್ಖಂಡ್ ವಿಧಾನಸಭೆ ಚುನಾವಣೆ ಘೋಷಣೆ: 81 ಕ್ಷೇತ್ರಗಳಿಗೆ 5 ಹಂತಗಳಲ್ಲಿ ಚುನಾವಣೆ..

ಜಾರ್ಖಂಡ್ ವಿಧಾನಸಭೆ ಚುನಾವಣೆ ಘೋಷಣೆ: 81 ಕ್ಷೇತ್ರಗಳಿಗೆ 5 ಹಂತಗಳಲ್ಲಿ ಚುನಾವಣೆ..

- Advertisement -
- Advertisement -

ಜಾರ್ಖಂಡ್ ರಾಜ್ಯದ 81 ವಿಧಾನಸಭಾ ಕ್ಷೇತ್ರಗಳಿಗೆ ಐದು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಮಹಾರಾಷ್ಟ್ರ ಹರಿಯಾಣದಲ್ಲಿ ಪ್ರಯಾಸಕರ ಗೆಲುವು ಸಾಧಿಸಿ, ಸರ್ಕಾರ ರಚಿಸಲು ಒದ್ದಾಡುತ್ತಿರುವ ಬಿಜೆಪಿ ಪಾಲಿಗೆ ಮತ್ತೊಂದು ಅಗ್ನಿಪರೀಕ್ಷೆ ಎದುರಾಗಿದೆ. ಕಾಂಗ್ರೆಸ್‌ ಸೇರಿದಂತೆ ವಿಪಕ್ಷಗಳು ಮತ್ತಷ್ಟು ಹುರುಪಿನಿಂದ ಹೋರಾಡಲು ಸಜ್ಜುಗೊಂಡಿವೆ.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಆರೋರ ಚುನಾವಣಾ ಮಾದರಿ ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬರಲಿದೆ. ಈ ಬಾರಿಯ ಚುನಾವಣೆಯಲ್ಲಿ ಶೇಕಡ 20ರಷ್ಟು ಮತ ಕೇಂದ್ರಗಳನ್ನು ಹೆಚ್ಚಿಸಲಾಗಿದೆ ಎಂದು ಹೇಳಿದರು.

ಮೊದಲ ಹಂತದ ಚುನಾವಣೆ ನವೆಂಬರ್ 30, ಎರಡನೇ ಹಂತದ ಚುನಾವಣೆ ಡಿಸೆಂಬರ್ 7, ಮೂರನೇ ಹಂತದ ಚುನಾವಣೆ ಡಿಸೆಂಬರ್ 12, ನಾಲ್ಕನೇ ಹಂತದ ಚುನಾವಣೆ ಡಿಸೆಂಬರ್ 16, ಐದನೇ ಮತ್ತು ಕೊನೆಯ ಹಂತದ ಚುನಾವಣೆ ಡಿಸೆಂಬರ್ 20ರಂದು ನಡೆಯಲಿದೆ. ಡಿಸೆಂಬರ್ 23ರಂದು ಮತಯಂತ್ರಗಳ ಎಣಿಕೆ ನಡೆಯಲಿದೆ ಎಂದರು.

ಚುನಾವಣೆಯಲ್ಲಿ ಸೂಕ್ತ ಭದ್ರತೆ ಕಲ್ಪಿಸಲಾಗುವುದು. 19 ಕ್ಷೇತ್ರಗಳು ನಕ್ಸಲ್ ಬಾಧಿತ ಪ್ರದೇಶಗಳೆಂದು ಗುರುತಿಸಲಾಗಿದ್ದು, ಅಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

2014ರ ಚುನಾವಣೆಯಲ್ಲಿ 81 ಕ್ಷೇತ್ರಗಳಲ್ಲಿ ಬಿಜೆಪಿ 37 ಹಾಗೂ ಎಜೆಎಸ್ ಯು-5 ಸ್ಥಾನ ಗಳಿಸಿ ಎರಡೂ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆಯಾಗಿತ್ತು.ಬಿಜೆಪಿಯ  ರಘುಬರ್ ದಾರ್ ಮುಖ್ಯಮಂತ್ರಿಯಾಗಿದ್ದಾರೆ. ಅವರ ಅವಧಿ ಜನವರಿ ಮೊದಲ ವಾರದವರೆಗೆ ಇದೆ. ಆದರೂ ಅವಧಿಪೂರ್ವವಾಗಿ ಚುನಾವಣೆ ಘೋಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...