ರಮೇಶ್ ಜಾರಕಿಹೊಳಿ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸ್ವತಂತ್ರ ಸಂಸ್ಥೆಯಿಂದ ನಡೆಸಬೇಕೆಂದು ಆಗ್ರಹಿಸಿ ವಿಧಾನ ಮಂಡಲದ ಅಧಿವೇಶನದಲ್ಲಿ ಸಿಡಿ ಹಿಡಿದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು, ಸಿಡಿಗಳನ್ನು ಕೈಯಲ್ಲಿ ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ಆರಂಭಿಸಿದರು. ಉದ್ಯೋಗ ಕೇಳಿದ ಯುವತಿ ಮೇಲೆ ಅತ್ಯಾಚಾವೆಸಗಿದ ರಮೇಶ್ ಜಾರಕಿಹೊಳಿ ಮೇಲೆ ಅತ್ಯಾಚಾರದ ಎಫ್‌ಐಆರ್ ದಾಖಲಿಸಬೇಕು. ತನಿಖೆಯನ್ನು ಸ್ವತಂತ್ರ ಸಂಸ್ಥೆಗೆ ನೀಡಬೇಕು ಎಂದು ಆಗ್ರಹಿಸಿದರು.
ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ಬೆಳಗ್ಗೆ ನಡೆದ ಹಿರಿಯ ನಾಯಕರ ಸಭೆಯಲ್ಲಿ ಎರಡೂ ಸದನಗಳಲ್ಲಿ ಸಿಡಿ ತೋರಿಸಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತೀರ್ಮಾನ ತೆಗೆದುಕೊಂಡಿತ್ತು. ಎಲ್ಲಾ ನಾಯಕರಿಗೂ ಎಂ.ಬಿ.ಪಾಟೀಲ್ ಸಿಡಿ ವಿತರಿಸಿದ್ದರು.
ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ – ವೀಡಿಯೋ ವೈರಲ್
ಹಿರಿಯ ನಾಯಕರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಸ್.ಆರ್. ಪಾಟೀಲ, ಎಚ್.ಕೆ. ಪಾಟೀಲ, ಅಜಯ್ ಸಿಂಗ್, ತುಕಾರಾಂ, ರಮೇಶ್ ಕುಮಾರ್, ಜಮೀರ್ ಅಹ್ಮದ್ ಖಾನ್, ಅಮರೇಗೌಡ ಭಯ್ಯಾಪುರ್ ಮತ್ತು ನಾರಾಯಣಸ್ವಾಮಿ ಭಾಗವಹಿಸಿದ್ದರು.
ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಕಲಾಪದಲ್ಲಿಯೂ ಪ್ರತಿಭಟನೆ ನಡೆಸಲಾಯಿತು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾಂಗ್ರೆಸ್ ನಾಯಕರ ಮನವೊಲಿಸಲು ಪ್ರಯತ್ನಿಸಿ ವಿಫಲರಾದರು. ಪ್ರಶ್ನೋತ್ತರ ವೇಳೆ ಬಳಿಕ ಪ್ರತಿಭಟನೆ ನಡೆಸುವಂತೆ ಕೇಳಿದರು ಆದರೆ ಕಾಂಗ್ರೆಸ್ ನಾಯಕರು ಇದಾವುದಕ್ಕೂ ಬಗ್ಗದೆ ಇದ್ದಾಗ ಕಲಾಪವನ್ನು 10 ನಿಮಿಷ ಮುಂದೂಡಿಕೆ ಮಾಡಿದರು.
https://twitter.com/INCKarnataka/status/1374301690250207232
ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಾಗುವವರೆಗೆ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ. ಜೊತೆಗೆ ಸಿಡಿ ಪ್ರಕರಣದ ನಂತರ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್ನಿಂದ ತಡೆಯಾಜ್ಞೆ ತಂದಿದ್ದ ಆರು ಮಂದಿ ಸಚಿವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಬಿಗಿ ಪಟ್ಟು ಹಿಡಿದಿದೆ.
ಇದನ್ನೂ ಓದಿ: ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!
ಸಚಿವರಾದ ಡಾ. ಕೆ. ಸುಧಾಕರ್, ಎಸ್.ಟಿ. ಸೋಮಶೇಖರ್, ನಾರಾಯಣ ಗೌಡ, ಶಿವರಾಮ್ ಹೆಬ್ಬಾರ್, ಬಿ.ಸಿ ಪಾಟೀಲ್, ಭೈರತಿ ಬಸವರಾಜ್ ಕೂಡ ರಾಜೀನಾಮೆ ನೀಡುವವರೆಗೂ ಧರಣಿ ನಡೆಸುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಬೇಕು ಹಾಗೂ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ತನಿಖೆ
ನಡೆಸಬೇಕೆಂದು ಕಾಂಗ್ರೆಸ್ ಆಗ್ರಹಿಸುತ್ತದೆ.ಸಂತ್ರಸ್ತೆಯ ಆರೋಪ ಹಾಗೂ ಸತ್ಯಾಂಶವನ್ನು ಬಿಜೆಪಿ ಸರ್ಕಾರ ನಿರ್ಲಕ್ಷಿಸುತ್ತಿರುವುದೇಕೆ?
ನಿಷ್ಪಕ್ಷಪಾತ ತನಿಖೆಯಿಂದ ಮಾತ್ರ ಈ ಪ್ರಕರಣದಲ್ಲಿ ನ್ಯಾಯ ಒದಗಿಸಲು ಸಾಧ್ಯ. https://t.co/UwafHR88Dh— Karnataka Congress (@INCKarnataka) March 23, 2021
ಬಿಜೆಪಿ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲೂ ಕಾಂಗ್ರೆಸ್ ದಾಳಿ ನಡೆಸುತ್ತಿದೆ. ರಮೇಶ್ ಜಾರಕಿಹೊಳಿಯವರನ್ನು ರೇಪಿಸ್ಟ್ ರಮೇಶ್ ಎಂದು ಕರೆದಿರುವ ಕಾಂಗ್ರೆಸ್, ಅವರ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ, ಸಂತ್ರಸ್ತೆಗೆ ನ್ಯಾಯ ಕೊಡಿಸಬೇಕು ಎಂದಿದೆ.
ಉದ್ಯೋಗ ಕೇಳಿದವರಿಗೆ @narendramodi
"ಪಕೋಡಾ ಮಾರಿ" ಎನ್ನುತ್ತಾರೆ.ರಾಜ್ಯದ ಸಚಿವರು
"ಮಂಚ ಹತ್ತಿ" ಎನ್ನುತ್ತಾರೆ!#RapistRamesh— Karnataka Congress (@INCKarnataka) March 23, 2021
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೇಲೆ ಯುವತಿಯೊಬ್ಬರಿಗೆ ಕೆಲಸದ ಆಮಿವೊಡ್ಡಿ ಲೈಂಗಿಕವಾಗಿ ಬಳಸಿಕೊಂಡ ಆರೋಪವಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿಡಿಯೋ ಸಿ.ಡಿ ಜೊತೆಗೆ ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ನೀಡಿದ್ದರು.
ಇದನ್ನೂ ಓದಿ: ಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ


