Homeಮುಖಪುಟಜಾರಕಿಹೊಳಿ ಲೈಂಗಿಕ ಪ್ರಕರಣ: ಸದನದಲ್ಲಿ ಸಿಡಿ ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

ಜಾರಕಿಹೊಳಿ ಲೈಂಗಿಕ ಪ್ರಕರಣ: ಸದನದಲ್ಲಿ ಸಿಡಿ ಹಿಡಿದು ಕಾಂಗ್ರೆಸ್ ನಾಯಕರ ಪ್ರತಿಭಟನೆ

- Advertisement -
- Advertisement -

ರಮೇಶ್ ಜಾರಕಿಹೊಳಿ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸ್ವತಂತ್ರ ಸಂಸ್ಥೆಯಿಂದ ನಡೆಸಬೇಕೆಂದು ಆಗ್ರಹಿಸಿ ವಿಧಾನ ಮಂಡಲದ ಅಧಿವೇಶನದಲ್ಲಿ ಸಿಡಿ ಹಿಡಿದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು, ಸಿಡಿಗಳನ್ನು ಕೈಯಲ್ಲಿ ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ಆರಂಭಿಸಿದರು. ಉದ್ಯೋಗ ಕೇಳಿದ ಯುವತಿ ಮೇಲೆ ಅತ್ಯಾಚಾವೆಸಗಿದ ರಮೇಶ್ ಜಾರಕಿಹೊಳಿ ಮೇಲೆ ಅತ್ಯಾಚಾರದ ಎಫ್‌ಐಆರ್‌ ದಾಖಲಿಸಬೇಕು. ತನಿಖೆಯನ್ನು ಸ್ವತಂತ್ರ ಸಂಸ್ಥೆಗೆ ನೀಡಬೇಕು ಎಂದು ಆಗ್ರಹಿಸಿದರು.

ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಮಂಗಳವಾರ ಬೆಳಗ್ಗೆ ನಡೆದ ಹಿರಿಯ ನಾಯಕರ ಸಭೆಯಲ್ಲಿ ಎರಡೂ ಸದನಗಳಲ್ಲಿ ಸಿಡಿ ತೋರಿಸಿ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತೀರ್ಮಾನ ತೆಗೆದುಕೊಂಡಿತ್ತು. ಎಲ್ಲಾ ನಾಯಕರಿಗೂ ಎಂ.ಬಿ.ಪಾಟೀಲ್ ಸಿಡಿ ವಿತರಿಸಿದ್ದರು.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ – ವೀಡಿಯೋ ವೈರಲ್

ಹಿರಿಯ ನಾಯಕರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಸ್.ಆರ್. ಪಾಟೀಲ, ಎಚ್.ಕೆ. ಪಾಟೀಲ, ಅಜಯ್ ಸಿಂಗ್, ತುಕಾರಾಂ, ರಮೇಶ್ ಕುಮಾರ್, ಜಮೀರ್ ಅಹ್ಮದ್ ಖಾನ್, ಅಮರೇಗೌಡ ಭಯ್ಯಾಪುರ್ ಮತ್ತು ನಾರಾಯಣಸ್ವಾಮಿ ಭಾಗವಹಿಸಿದ್ದರು.

ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ಕಲಾಪದಲ್ಲಿಯೂ ಪ್ರತಿಭಟನೆ ನಡೆಸಲಾಯಿತು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಕಾಂಗ್ರೆಸ್ ನಾಯಕರ ಮನವೊಲಿಸಲು ಪ್ರಯತ್ನಿಸಿ ವಿಫಲರಾದರು. ಪ್ರಶ್ನೋತ್ತರ ವೇಳೆ ಬಳಿಕ ಪ್ರತಿಭಟನೆ ನಡೆಸುವಂತೆ ಕೇಳಿದರು ಆದರೆ ಕಾಂಗ್ರೆಸ್ ನಾಯಕರು ಇದಾವುದಕ್ಕೂ ಬಗ್ಗದೆ ಇದ್ದಾಗ ಕಲಾಪವನ್ನು 10 ನಿಮಿಷ ಮುಂದೂಡಿಕೆ ಮಾಡಿದರು.

https://twitter.com/INCKarnataka/status/1374301690250207232

ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಾಗುವವರೆಗೆ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಹೇಳಿದೆ. ಜೊತೆಗೆ ಸಿಡಿ ಪ್ರಕರಣದ ನಂತರ ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ಕೋರ್ಟ್​ನಿಂದ ತಡೆಯಾಜ್ಞೆ ತಂದಿದ್ದ ಆರು ಮಂದಿ ಸಚಿವರು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಬಿಗಿ ಪಟ್ಟು ಹಿಡಿದಿದೆ.

ಇದನ್ನೂ ಓದಿ: ತುಮಕೂರು: ಸಮಾಧಿ ಗುಂಡಿಯಿಂದ ದಲಿತ ಶಿಶುವಿನ ಮೃತದೇಹ ಹೊರತೆಗೆಸಿ ಅಮಾನವೀಯತೆ!

ಸಚಿವರಾದ ಡಾ. ಕೆ. ಸುಧಾಕರ್, ಎಸ್​.ಟಿ. ಸೋಮಶೇಖರ್, ನಾರಾಯಣ ಗೌಡ, ಶಿವರಾಮ್ ಹೆಬ್ಬಾರ್, ಬಿ.ಸಿ ಪಾಟೀಲ್, ಭೈರತಿ ಬಸವರಾಜ್ ಕೂಡ ರಾಜೀನಾಮೆ ನೀಡುವವರೆಗೂ ಧರಣಿ ನಡೆಸುವುದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

 

ಬಿಜೆಪಿ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲೂ ಕಾಂಗ್ರೆಸ್ ದಾಳಿ ನಡೆಸುತ್ತಿದೆ. ರಮೇಶ್ ಜಾರಕಿಹೊಳಿಯವರನ್ನು ರೇಪಿಸ್ಟ್ ರಮೇಶ್ ಎಂದು ಕರೆದಿರುವ ಕಾಂಗ್ರೆಸ್, ಅವರ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ, ಸಂತ್ರಸ್ತೆಗೆ ನ್ಯಾಯ ಕೊಡಿಸಬೇಕು ಎಂದಿದೆ.

‌ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೇಲೆ ಯುವತಿಯೊಬ್ಬರಿಗೆ ಕೆಲಸದ ಆಮಿವೊಡ್ಡಿ ಲೈಂಗಿಕವಾಗಿ ಬಳಸಿಕೊಂಡ ಆರೋಪವಿದೆ. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ವಿಡಿಯೋ ಸಿ.ಡಿ ಜೊತೆಗೆ ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ನೀಡಿದ್ದರು.


ಇದನ್ನೂ ಓದಿ: ಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...