Homeಮುಖಪುಟಜಾವೇದ್ ಅಖ್ತರ್ V/s ಕಂಗನಾ: ವಾರೆಂಟ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ ನಟಿ

ಜಾವೇದ್ ಅಖ್ತರ್ V/s ಕಂಗನಾ: ವಾರೆಂಟ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ ನಟಿ

ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಪ್ರಕರಣದಲ್ಲಿ ನಟಿ ಕಂಗನಾ ಅನಗತ್ಯವಾಗಿ ನನ್ನನ್ನು ಎಳೆದು ತರುವ ಪ್ರಯತ್ನ ಮಾಡಿದ್ದಾರೆ ಎಂದು ಅಖ್ತರ್ ದೂರು ದಾಖಲಿಸಿದ್ದಾರೆ

- Advertisement -
- Advertisement -

ನಟಿ ಕಂಗನಾ ರಾಣಾವತ್ ವಿರುದ್ಧ ಗೀತರಚನೆಕಾರ ಜಾವೇದ್ ಅಖ್ತರ್ ಹೂಡಿದ್ದ ಮಾನಹಾನಿ ದೂರಿನಲ್ಲಿ ಮ್ಯಾಜಿಸ್ಟ್ರೇಟ್ ಹೊರಡಿಸಿರುವ ಜಾಮೀನು ವಾರೆಂಟ್ ಅನ್ನು ಪ್ರಶ್ನಿಸಿ ನಟಿ ಕಂಗನಾ ಸೆಷನ್ಸ್ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ.

ಬುಧವಾರ ಕಂಗನಾ ರಾಣಾವತ್ ಸಲ್ಲಿಸಿರುವ ಮನವಿಯನ್ನು ಮಾರ್ಚ್ 15 ರಂದು ವಿಚಾರಣೆಗೆ ಒಳಪಡಿಸಲಾಗುವುದು ಎಂದು ನ್ಯಾಯಾಲಯದ ಮೂಲಗಳು ತಿಳಿಸಿವೆ.

ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮಾರ್ಚ್ 1 ರಂದು ನಟಿ ಕಂಗನಾ ರಾಣಾವತ್ ವಿರುದ್ಧ ನ್ಯಾಯಾಲಯಕ್ಕೆ ಹಾಜರಾಗಲು ವಿಫಲವಾದ ಕಾರಣದಿಂದ ಜಾಮೀನು ವಾರೆಂಟ್ ಹೊರಡಿಸಿತ್ತು.

ಇದನ್ನೂ ಓದಿ: ಕಂಗನಾ ವಿರುದ್ಧ ಜಾವೇದ್ ದೂರು: ಅದೊಂದು ತೋಳಗಳ ಹಿಂಡು ಎಂದ ನಟಿ!

ಮಾರ್ಚ್ 1 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನಿರ್ದೇಶಿಸಿ ಮ್ಯಾಜಿಸ್ಟ್ರೇಟ್ ಫೆಬ್ರವರಿಯಲ್ಲಿ ಸಮನ್ಸ್ ಜಾರಿಗೊಳಿಸಿದ್ದರು.

ನಟ ಸುಶಾಂತ್ ಸಿಂಗ್ ರಜಪೂತ್ ಅಸಹಜ ಸಾವಿನ ಪ್ರಕರಣದಲ್ಲಿ ನಟಿ ಕಂಗನಾ ಅನಗತ್ಯವಾಗಿ ನನ್ನನ್ನು ಎಳೆದು ತರುವ ಪ್ರಯತ್ನ ಮಾಡಿದ್ದಾರೆ. ಖಾಸಗಿವಾಹಿನಿಗಳಿಗೆ ನೀಡಿರುವ ಸಂದರ್ಶನಗಳಲ್ಲಿ ನನ್ನ ವಿರುದ್ಧ ಆಧಾರರಹಿತ ದೂರುಗಳನ್ನು ಮಾಡುವ ಮೂಲಕ ನನ್ನ ಮಾನಹಾನಿ ಮಾಡಿದ್ದಾರೆ ಎಂದು ಜಾವೇದ್ ಅಖ್ತರ್‌ ಮುಂಬೈ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ. ಈ ಹಿಂದೆ, ಅಖ್ತರ್ ಅವರ ದೂರಿನ ಬಗ್ಗೆ ಪೊಲೀಸರು ವರದಿಯನ್ನು ಸಲ್ಲಿಸಿದ್ದರು.


ಇದನ್ನೂ ಓದಿ:  ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಕಂಗನಾ ರಾಣಾವತ್ ವಿರುದ್ಧ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...