Homeಕರ್ನಾಟಕಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ಸೌಮ್ಯ ರೆಡ್ಡಿ

ಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ವಿವಾದ: ಹೈಕೋರ್ಟ್ ಮೆಟ್ಟಿಲೇರಿದ ಸೌಮ್ಯ ರೆಡ್ಡಿ

- Advertisement -
- Advertisement -

2023ರ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಸಂದರ್ಭದಲ್ಲಿ ಚುನಾವಣಾ ಅಧಿಕಾರಿಗಳು ಆಯೋಗದ ನೂತನ ಅಧಿಸೂಚನೆಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಜಯನಗರದ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಯವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಮತ ಎಣಿಕೆ ಪ್ರಕ್ರಿಯೆಯಲ್ಲಿ ಹಳೆಯ ನಿಯಮಗಳನ್ನು ಅನುಸಲಾಗಿದೆ ಎಂದು ಸೌಮ್ಯ ರೆಡ್ಡಿ ಅವರು ಕೋರ್ಟ್‌ ಮೆಟ್ಟಿಲೇರಿದ್ದಾರೆ. ಆಯೋಗದ ಆದೇಶದ ಆಧಾರದಲ್ಲಿ ಮತ ಎಣಿಕೆ ನಡೆದಿಲ್ಲ. ಅಲ್ಲದೆ ಮರು ಮತ ಮಣಿಕೆಯಲ್ಲಿಯೂ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ಮುಂದೂಡಿದೆ.

”ಅಂಚೆ ಮತಗಳ ಎಣಿಕೆಯಲ್ಲೂ ಲೋಪವಾಗಿದ್ದು, 837 ಮತಗಳ ಮರು ಎಣಿಕೆ ಮಾಡಬೇಕು. ಇದಕ್ಕೆ ಸಂಬಂಧಿಸಿದ ದೃಶ್ಯಾವಳಿಗಳನ್ನು ಪರಿಶೀಲಿಸಬೇಕು” ಎಂದು ಸೌಮ್ಯ ರೆಡ್ಡಿ ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಹೊಸ ಅಧಿಸೂಚನೆ ಪ್ರಕಾರ ಮತ ಎಣಿಕೆಯಾದರೆ ಗೆಲುವು ನಮ್ಮದೇ..

ಈ ಬಗ್ಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ”ಕಳೆದ ವಿಧಾನಸಭಾ ಮತ ಎಣಿಕೆಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಹೈ ಕೋರ್ಟ್‌ಗೆ ಅರ್ಜಿ ಹಾಕಲಾಗಿದೆ. ಆಗ ಮತ ಎಣಿಕೆಯ ಸಂದರ್ಭದಲ್ಲಿ ಚುನಾವಣಾಧಿಕಾರಿ ಹಳೆಯ ನಿಯಮಗಳಂತೆ ಮತ ಎಣಿಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಮಗೆ ಹಿನ್ನಡೆಯಾಗಿದೆ” ಎಂದು ಹೇಳಿದ್ದಾರೆ.

ಇದೇ ವೇಳೆ ಲೋಕಸಭೆ ಚುನಾವಣೆಯಲ್ಲಿ ಸೌಮ್ಯ ರೆಡ್ಡಿ ಸ್ಫರ್ಧಿಸದಿರುವ ಬಗ್ಗೆ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. 2023ರ ಅಧಿಸೂಚನೆಯಂತೆ ಮತ ಎಣಿಕೆಯಾದರೆ ಗೆಲುವು ನಮ್ಮದಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸಿಕೆ ರಾಮಮೂರ್ತಿ ವಿರುದ್ಧ ಸೌಮ್ಯ ರೆಡ್ಡಿ 16 ಮತಗಳ ಅಂತರದಲ್ಲಿ ಸೋಲು ಕಂಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಧಾರವಾಡ ಅಖಾಡ: ಕೇಸರಿ ಕೋಟೆಯಲ್ಲೇ ಸಂಘೀ ಸೇನಾಧಿಪತಿ ಪ್ರಹ್ಲಾದ್ ಜೋಶಿಗೆ ನಡುಕ!!

0
ಪೇಡಾ ನಗರಿ, ಸಾಂಸ್ಕೃತಿಕ ರಾಜಧಾನಿ, ಕರ್ನಾಟಕದ ಆಕ್ಸ್‌ಫರ್ಡ್ ಎಂದೆಲ್ಲ ಗುರುತಿಸಲ್ಪಡುವ ಧಾರವಾಡ ನಗರ ಕೇಂದ್ರವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರ ಮಲೆನಾಡು, ಅರೆಮಲೆನಾಡು ಮತ್ತು ಬಯಲುನಾಡುಗಳ ವಿಭಿನ್ನ ನೈಸರ್ಗಿಕ ಗುಣ-ಧರ್ಮದ ಸೀಮೆ. ಖಡಕ್ ಜವಾರಿ...