Homeಕರ್ನಾಟಕಜಯನಗರ ಮತಎಣಿಕೆ ವಿವಾದ : ಸೌಮ್ಯ ರೆಡ್ಡಿ ವಿರುದ್ಧದ ಬಿಜೆಪಿ ಶಾಸಕ ರಾಮಮೂರ್ತಿ ಅರ್ಜಿ ವಜಾಗೊಳಿಸಿದ...

ಜಯನಗರ ಮತಎಣಿಕೆ ವಿವಾದ : ಸೌಮ್ಯ ರೆಡ್ಡಿ ವಿರುದ್ಧದ ಬಿಜೆಪಿ ಶಾಸಕ ರಾಮಮೂರ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್!

- Advertisement -
- Advertisement -

ಚುನಾವಣಾ ತಕರಾರು ಅರ್ಜಿಗೆ ಸಂಬಂಧಿಸಿ ಪರಾಜಿತ ಅಭ್ಯರ್ಥಿ ಹಾಗೂ ಅರ್ಜಿದಾರರಾದ ಸೌಮ್ಯ ರೆಡ್ಡಿ ಅವರಿಗೆ ಡಿವಿಡಿ ಮತ್ತು ಇತರ ಕೆಲವು ದಾಖಲೆಗಳನ್ನು ರೆಕಾರ್ಡ್‌ನಲ್ಲಿ ಇರಿಸಲು ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.3) ವಜಾಗೊಳಿಸಿದೆ.

ಹೈಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದ್ದು, ಸಿ.ಕೆ ರಾಮಮೂರ್ತಿ ಅವರಿಗೆ ಲಿಖಿತ ಹೇಳಿಕೆ ಸಲ್ಲಿಸಲು ಮೂರು ವಾರಗಳ ಕಾಲಾವಕಾಶ ನೀಡಿದೆ ಎಂದು ವರದಿಯಾಗಿದೆ.

ಶಾಸಕ ಸಿ.ಕೆ ರಾಮಮೂರ್ತಿ ವಿರುದ್ಧ ಸೌಮ್ಯಾರೆಡ್ಡಿ ಅವರು ಕರ್ನಾಟಕ ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ತಮ್ಮ ಅರ್ಜಿಯಲ್ಲಿ ರಾಮಮೂರ್ತಿ ಅವರ ಆಯ್ಕೆಯನ್ನು ಅಸಿಂಧು ಎಂಬುದಾಗಿ ಘೋಷಿಸಬೇಕು ಎಂದು ಕೋರಿದ್ದರು.

ಸೌಮ್ಯರೆಡ್ಡಿ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಡಿವಿಡಿ ಸೇರಿದಂತೆ 10 ಪ್ರಮುಖ ದಾಖಲೆಗಳನ್ನು ಹಾಜರುಪಡಿಸಲು ಫೆ.14ರಂದು ಅನುಮತಿ ನೀಡಿತ್ತು.

ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸಿ.ಕೆ ರಾಮಮೂರ್ತಿ ಅವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಪ್ರಕರಣದ ಹಿನ್ನೆಲೆ : 2023ರಲ್ಲಿ ನಡೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ, ಜಯನಗರ ಕ್ಷೇತ್ರದಿಂದ ಸಿ.ಕೆ ರಾಮಮೂರ್ತಿ ಬಿಜೆಪಿ ಅಭ್ಯರ್ಥಿಯಾಗಿ ಮತ್ತು ಸೌಮ್ಯರೆಡ್ಡಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯರೆಡ್ಡಿ ಕೇವಲ 16 ಮತಗಳಿಂದ ಪರಾಭವಗೊಂಡಿದ್ದರು.

ಈ ಸಂಬಂಧ ಸಿ.ಕೆ ರಾಮಮೂರ್ತಿ ಅವರ ಆಯ್ಕೆ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಸೌಮ್ಯರೆಡ್ಡಿ, ಮತಎಣಿಕೆ ಪ್ರಕ್ರಿಯೆಯಲ್ಲಿ ಏನೋ ವ್ಯತ್ಯಾಸವಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದರು.

“ವಿದ್ಯುನ್ಮಾನ ಮತ ಯಂತ್ರಗಳ ಮತ ಎಣಿಕೆಯಲ್ಲಿ ನಾನು ಮುನ್ನಡೆ ಸಾಧಿಸಿದ್ದೆ. ಆದರೆ ಅಂಚೆ ಮತಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದೆ. ಒಟ್ಟು 827 ಅಂಚೆ ಮತಗಳಲ್ಲಿ ವ್ಯತ್ಯಾಸವಾಗಿದ್ದು, ಪ್ರತಿ ಬಾರಿ ಮರು ಎಣಿಕೆ ಮಾಡಿದಾಗಲೂ ಪ್ರತ್ಯೇಕ ಅಂಕಿ-ಅಂಶ ಬಂದಿದೆ. ಮತ ಎಣಿಕೆ ಆರಂಭವಾದ ನಂತರವೂ ಅಂಚೆ ಮೂಲಕ ಬಂದಿದ್ದ ಮತ ಪತ್ರಗಳನ್ನು ಎಣಿಕೆಗೆ ಪರಿಗಣಿಸಲಾಗಿದೆ” ಎಂದು ಸೌಮ್ಯಾರೆಡ್ಡಿ ಆರೋಪಿಸಿದ್ದರು.

ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ಆರೋಪ : ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಸೇರಿ 12 ಮಂದಿ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...