Homeಮುಖಪುಟಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತ ಬೇಕು; ಅವರಿಗೆ ಆತ್ಮಸಾಕ್ಷಿ ಇದೆಯೇ..: ಮುಖ್ಯಮಂತ್ರಿ ಸಿದ್ದರಾಮಯ್ಯ

ಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತ ಬೇಕು; ಅವರಿಗೆ ಆತ್ಮಸಾಕ್ಷಿ ಇದೆಯೇ..: ಮುಖ್ಯಮಂತ್ರಿ ಸಿದ್ದರಾಮಯ್ಯ

- Advertisement -
- Advertisement -

‘ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಲು 45 ಮತಗಳ ಅಗತ್ಯವಿದೆ, ಅಷ್ಟು ಮತಗಳು ಅವರಿಗಿದೆಯೇ ? ಅವರಿಗೆ ಆತ್ಮಸಾಕ್ಷಿ ಇದೆಯೇ’ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮುಯ್ಯ, ಅವರ ಮತಗಳೇ ನಮಗೆ ಬರುತ್ತವೆ ಎಂದು ಹೇಳಿದರು.

ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಜೆಡಿಎಸ್‌ನವರಿಗೆ ಅಗತ್ಯ ಮತವಿಲ್ಲದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಿ, ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಬೆದರಿಕೆ ಹಾಕಿರುವುದಕ್ಕೆ ಎಫ್.ಐ.ಆರ್ ಹಾಕಲಾಗಿದೆ. ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ನ ಮೂರೂ ಅಭ್ಯರ್ಥಿಗಳು ಗೆಲ್ಲುತ್ತಾರೆ

‘ಕಾಂಗ್ರೆಸ್ ನ ಅಜಯ ಮಾಕನ್, ಚಂದ್ರಶೇಖರ್ ಹಾಗೂ ಸೈಯ್ಯದ್ ನಾಸಿರ್ ಹುಸೇನ್, ಮೂರೂ ಅಭ್ಯರ್ಥಿಗಳು ಸುಲಭವಾಗಿ ಗೆಲ್ಲುತ್ತಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮತದಾನ ಪೂರ್ಣಗೊಂಡ ನಂತರ ವಿಧಾನನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಆಮಿಷಗಳು ಹಾಗೂ ಬೆದರಿಕೆ ಹಾಕಿದ್ದರಿಂದ ಒಟ್ಟಿಗಿದ್ದು ಮತ ಚಲಾವಣೆ ಮಾಡಿದ್ದೇವೆ.
ಚುನಾವಣೆಗೆ ನಿಲ್ಲುವವರೆಲ್ಲಾ ಗೆಲ್ಲುತ್ತೇವೆ ಎಂದೇ ಹೇಳುವುದು; ಸೋಲುತ್ತೇವೆ ಎಂದು ಯಾರೂ ನಿಲ್ಲುವುದಿಲ್ಲ. ಆದರೆ, ಅವರಿಗೆ ಎಷ್ಟು ಮತಗಳು ಬೇಕೋ ಅಷ್ಟು ಮತಗಳಿಲ್ಲ. ಅವರಿಗಿರುವುದೇ 19 ಮತಗಳು. ಅದರಿಂದ ಅವರು ಅಭ್ಯರ್ಥಿಯನ್ನು ನಿಲ್ಲಿಸಬೇಕಿರಲಿಲ್ಲ; ಆದರೂ ನಿಲ್ಲಿಸಿದ್ದಾರೆ. ನಮ್ಮ ಎಲ್ಲಾ ಶಾಸಕರು ನಿಷ್ಠೆಯಿಂದ ಕಾಂಗ್ರೆಸ್ ಪರವಾಗಿ ಮತ ಹಾಕಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಯೇ ಗೆಲ್ಲುವುದು. ಜೆಡಿಎಸ್ ಐದನೇ ಅಭ್ಯರ್ಥಿಯನ್ನು ನಿಲ್ಲಿಸಿದ್ದರಿಂದ ನಾವೆಲ್ಲ ಒಟ್ಟಿಗೆ ಇದ್ದು ಮತ ಹಾಕಬೇಕಾಯಿತು. ನಮ್ಮ ಶಾಸಕರಿಗೆ ಆಸೆ ಆಮಿಷಗಳನ್ನು ಒಡ್ಡುವುದು ಬೆದರಿಕೆ ಹಾಕುವುದನ್ನು ಮಾಡುತ್ತಿದ್ದರು. ಅದಕ್ಕೆ ಎಲ್ಲರೂ ಒಟ್ಟಿಗಿದ್ದು ಮತ ಚಲಾಯಿಸಿದ್ದೇವೆ’ ಎಂದರು.

ಆಮಿಷ ಒಡ್ಡುವ ಪ್ರಮೇಯ ಇಲ್ಲ

ನಮ್ಮ ಸರ್ಕಾರದ ಬಗ್ಗೆ ಒಳ್ಳೆ ಅಭಿಪ್ರಾಯ ಇರುವ ಬೇರೆ ಪಕ್ಷದ ಮತಗಳೂ ಬರಬಹುದು. ನಮಗೆ ಸಾಕಷ್ಟು ಮತಗಳಿರುವಾಗ ಆಸೆ ಆಮಿಷ ಒಡ್ಡುವ ಪ್ರಮೇಯ ಎಲ್ಲಿದೆ. ನಮಗೆ 136 ಮತಗಳಿವೆ. ಸ್ವತಂತ್ರ ಅಭ್ಯರ್ಥಿ ಲತಾ ಪ್ರಕಾಶ್, ಮಲ್ಲಿಕಾರ್ಜುನ ಹಾಗೂ ದರ್ಶನ್ ಪುಟ್ಟಣ್ಣಯ್ಯ, ಪುಟ್ಟಸ್ವಾಮಿ ಗೌಡ ಹಾಗೂ ಜನಾರ್ದನ ರೆಡ್ಡಿ ಇವರ ಮತಗಳಿದ್ದ ಮೇಲೆ ಆಸೆ ಆಮಿಷ ಒಡ್ಡುವ ಪ್ರಮೇಯ ಎಲ್ಲಿದೆ. ಆಮಿಷ, ಬೆದರಿಕೆ ಒಡ್ಡುತ್ತಿರುವವರು ಜೆಡಿಎಸ್ ಹಾಗೂ ಬಿಜೆಪಿಯವರು ಎಂದರು.

ಅಡ್ಡಮತದಾನ ಬಿಜೆಪಿಯಲ್ಲಿ ಮಾತ್ರ ಸಾಧ್ಯ

ಜೆಡಿಎಸ್ ಹಾಗೂ ಬಿಜೆಪಿ ಕಾಂಗ್ರೆಸ್ ನಿಂದ ಅಡ್ಡ ಮತದಾನದ ನಿರೀಕ್ಷೆ ಯಲ್ಲಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ತಮ್ಮ ಶಾಸಕರನ್ನು ಭದ್ರವಾಗಿತ್ತುಕೊಳ್ಳಲಿ; ಅಡ್ಡಮತದಾನ ಬಿಜೆಪಿಯಲ್ಲಿ ಮಾತ್ರ ಸಾಧ್ಯ’ ಎಂದರು.

ಇದನ್ನೂ ಓದಿ; ದಾರಿ ತಪ್ಪಿಸುವ ಜಾಹೀರಾತು; ಪತಂಜಲಿ ಕಂಪನಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...