Homeಕರ್ನಾಟಕಯು.ಟಿ.ಖಾದರ್‌ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್‌ ಅಭ್ಯರ್ಥಿ ನಾಮಪತ್ರ ವಾಪಸ್!

ಯು.ಟಿ.ಖಾದರ್‌ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್‌ ಅಭ್ಯರ್ಥಿ ನಾಮಪತ್ರ ವಾಪಸ್!

“ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದೆ” ಎಂದು ಅಭ್ಯರ್ಥಿ ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ

- Advertisement -
- Advertisement -

ಮಂಗಳೂರು ನಗರ (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ಪಕ್ಷದ ನಾಯಕರಿಗೆ ಹೇಳದೆ ನಾಮಪತ್ರ ವಾಪಸ್ ಪಡೆದಿದ್ದಾರೆಂಬ ಟೀಕೆ ವ್ಯಕ್ತವಾಗಿದೆ.

ಜೆಡಿಎಸ್‌ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಅಲ್ತಾಫ್ ಕುಂಪಲ ಅವರು ಪಕ್ಷದ ಮುಖಂಡರಿಗೆ ಮಾಹಿತಿ ನೀಡದೆಯೇ ನಾಮಪತ್ರವನ್ನು ಹಿಂಪಡೆದುಕೊಂಡಿದ್ದು, ಈ ಬಗ್ಗೆ ಜೆಡಿಎಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ಷೇತ್ರದಲ್ಲಿ ಮಾಜಿ ಸಚಿವ ಯು.ಟಿ.ಖಾದರ್‌ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ.

ರಾಜಕೀಯ ಗೊಂದಲ ಬೇಡ ಎಂದು ತೀರ್ಮಾನಿಸಿ ಎ.21 ರಂದು ಅವರು ನಾಮಪತ್ರ ವಾಪಸ್ ಪಡೆದಿದ್ದಾರೆ. ಇದರ ಬಳಿಕ ಅವರು ಕೇರಳ ಕಡೆ ತೆರಳಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು ಎಂದು ಜೆಡಿಎಸ್‌ನ ಹಿರಿಯ ಮುಖಂಡರೊಬ್ಬರು ತಿಳಿಸಿರುವುದಾಗಿ ‘ವಾರ್ತಾ ಭಾರತಿ’ ವರದಿ ಮಾಡಿದೆ.

ಅಲ್ತಾಫ್ ಕುಂಪಲ ಅವರು ಇತ್ತೀಚೆಗೆ ಜೆಡಿಎಸ್ ಪಕ್ಷದಲ್ಲಿ ಕಾಣಿಸಿಕೊಂಡು ವಿಧಾನಪರಿಷತ್ ಸದಸ್ಯ ಬಿ.ಎಂ ಫಾರುಕ್ ಅವರ ಮನವೊಲಿಸಿ ಜೆಡಿಎಸ್‌ನಿಂದ ಉಳ್ಳಾಲ ಕ್ಷೇತ್ರದಿಂದ ಸ್ಪರ್ಧಿಸಲು ಬಿ- ಫಾರಂ ಪಡೆದುಕೊಂಡಿದ್ದರು.

ಉಳ್ಳಾಲ ನಗರಸಭೆಯ ಜೆಡಿಎಸ್ ಕೌನ್ಸಿಲರ್ ಹಾಗೂ ಜಿಲ್ಲಾ ಮುಖಂಡರ ಜೊತೆಗೆ ನಾಮಪತ್ರ ಸಲ್ಲಿಸಿದ್ದ ಅವರು  ಎ.21 ರಂದು ಅಲ್ತಾಫ್ ಅವರು ತನ್ನ ಪಕ್ಷದ ಮುಖಂಡರುಗಳಿಗೆ ಮಾಹಿತಿಯೇ ಇಲ್ಲದೆ ನಾಮಪತ್ರ ವಾಪಸ್ಸು ಪಡೆದುಕೊಂಡಿದ್ದರು.

ಈ ಕುರಿತು ಎ.22 ರಂದು ನೋಟೀಸ್‌ ಬೋರ್ಡ್‌‌ನಲ್ಲಿ ಮಾಹಿತಿಯನ್ನು ಹಾಕಲಾಗಿತ್ತು. ಇದನ್ನು ಗಮನಿಸಿದ ಸ್ಥಳೀಯರು ಜೆಡಿಎಸ್ ಮುಖಂಡರಿಗೆ ಮಾಹಿತಿ ನೀಡಿದ್ದರು. ಮುಖಂಡರು ಅಲ್ತಾಫ್ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಕಳೆದ ಎರಡು ದಿನಗಳಿಂದ ಮೊಬೈಲ್ ಸ್ವಿಚ್ ಆಫ್ ಆಗಿತ್ತು.

ನಾಪತ್ತೆಯಾಗಿದ್ದ ಅವರು ಅಲ್ತಾಫ್‌ ಸುದ್ದಿಗೋಷ್ಠಿ ನಡೆಸಿದ್ದಾರೆ. “ಮಂಗಳೂರು (ಉಳ್ಳಾಲ) ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದ ನನ್ನನ್ನು ಕಾಂಗ್ರೆಸ್ ಪಕ್ಷದ ತಂಡವೊಂದು ಅಪಹರಿಸಿ ಕರೆದೊಯ್ದು ಬಲವಂತವಾಗಿ ನಾಮಪತ್ರ ಹಿಂತೆಗೆಯುವಂತೆ ಮಾಡಿದೆ” ಎಂದು ಅಲ್ತಾಫ್ ಕುಂಪಲ ಆರೋಪಿಸಿದ್ದಾರೆ.

“ನಾನು ಎಲ್ಲೂ ಓಡಿಹೋಗಿಲ್ಲ. ನನಗೆ ಯಾವುದೇ ರೀತಿಯಲ್ಲಿ ಆಮಿಷ ಒಡ್ಡಲಾಗಿಲ್ಲ. ನಗರ ಪೊಲೀಸ್ ಕಮಿಷನರ್ ಅವರಿಗೆ ಭದ್ರತೆ ನೀಡುವಂತೆ ಮನವಿ ಮಾಡಿದ್ದೇನೆ” ಎಂದು ಮಾಹಿತಿ ನೀಡಿದ್ದಾರೆ.

ಜೆಡಿಎಸ್ ರಾಜ್ಯ ವಕ್ತಾರ ಎಂ.ಬಿ. ಸದಾಶಿವ, “ಅಲ್ತಾಫ್ ಕುಂಪಲ ಅವರು ಈದ್ ಉಲ್ ಫಿತ್ರ್ ಹಬ್ಬದ ದಿನ ಮಸೀದಿಯಿಂದ ಹೊರಬರುವಾಗ ತಂಡವೊಂದು ಅವರನ್ನು ಬೆದರಿಸಿ ಚುನಾವಣಾಧಿಕಾರಿಯ ಬಳಿಗೆ ಕರೆದೊಯ್ದು ನಾಮಪತ್ರ ಹಿಂತೆಗೆದುಕೊಳ್ಳುವಂತೆ ಮಾಡಿದೆ. ಇದು ಎಲ್ಲರೂ ಚಿಂತಿಸಬೇಕಾದ ವಿಷಯವಾಗಿದೆ. ಜೆಡಿಎಸ್‌ನ ಸಾಮಾನ್ಯ ಕಾರ್ಯಕರ್ತನನ್ನೇ ಎದುರಿಸಲಾಗದವರು ಜನರನ್ನು ಹೇಗೆ ನಡೆಯಿಸಿಕೊಳ್ಳಬಹುದು” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಎಚ್‌.ಡಿ.ಕೋಟೆ ಕ್ಷೇತ್ರ: ತ್ರಿಕೋನ ಸ್ಪರ್ಧೆಯಲ್ಲಿ ಬಿಜೆಪಿ ಖಾತೆ ತೆರೆಯುವುದೇ?

“ಈ ಬಾರಿ ಯಾರ ಸಹಾಯವೂ ಇಲ್ಲದೆ ಸ್ವತಂತ್ರವಾಗಿ ಜೆಡಿಎಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನಾವು ಜನಪರವಾದ ಪಂಚರತ್ನ ಯೋಜನೆಯ ಮೂಲಕ ಜನರ ಮನಸಿಗೆ ಹತ್ತಿರವಾಗಿದ್ದೇವೆ. ಜೆಡಿಎಸ್ ಹೇಳಿರುವ ಜನಪರ ಕಾರ್ಯಕ್ರಮಗಳನ್ನು ಆಡಳಿತಕ್ಕೆ ಬರುವ ಮರುಕ್ಷಣವೇ ಜಾರಿಗೆ ತರಲು ನಾವು ಸಿದ್ಧರಿದ್ದೇವೆ” ಎಂದು ತಿಳಿಸಿದ್ದಾರೆ. ಮಂಗಳೂರು ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಾಜಿ ಸಚಿವ ಯು.ಟಿ.ಖಾದರ್‌ ಸ್ಪರ್ಧಿಸಿದ್ದಾರೆ.

ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಕಳೆದುಕೊಂಡ ಜೆಡಿಎಸ್

ಅಲ್ತಾಫ್ ಕುಂಪಲ ಅವರು ನಾಮಪತ್ರ ವಾಪಸ್‌ ಪಡೆದಿರುವುದು ಮತ್ತು ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತವಾಗಿರುವುದು ರಾಜಕೀಯ ಚರ್ಚೆಗೆ ಕಾರಣಗಿದೆ. ಈ ಎರಡು ಕ್ಷೇತ್ರಗಳಲ್ಲಿ ಜೆಡಿಎಸ್‌ನ ಅಭ್ಯರ್ಥಿಗಳು ಇಲ್ಲವಾಗಿ ಇಲ್ಲಿ ಸ್ಪರ್ಧೆಯನ್ನೇ ಜೆಡಿಎಸ್‌ ಕಳೆದುಕೊಂಡಿದೆ.

ಶಿವಾಜಿನಗರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ನಾಮಪತ್ರ ಸಲ್ಲಿಸಿದ್ದ ಅಬ್ದುಲ್ ಜಫರ್ ಅಲಿ ಮತ್ತು ಆರ್.ಮಂಜುನಾಥರವರ ನಾಮಪತ್ರ ತಿರಸ್ಕೃತಗೊಂಡಿವೆ. ಅಬ್ದುಲ್ ಜಫರ್ ಅಲಿ ಅವರು ಹೆಸರು ಮತದಾರರ ಪಟ್ಟಿಯಲ್ಲಿ ಇಲ್ಲದಿರುವುದು ಮತ್ತು ಆರ್.ಮಂಜುನಾಥ್‌ರವರು ತಡವಾಗಿ ನಾಮಪತ್ರ ಸಲ್ಲಿಸಿದ್ದು ಅವರಿಬ್ಬರ ನಾಮಪತ್ರ ತಿರಸ್ಕೃತಗೊಳ್ಳಲು ಕಾರಣವಾಗಿದೆ.

ವಿದೇಶದಲ್ಲಿದ್ದ ಕಾರಣ ಅಬ್ದುಲ್ ಜಫರ್ ಅಲಿಯವರ ಹೆಸರು ಮತದಾರರ ಪಟ್ಟಿಯಲ್ಲಿರಲಿಲ್ಲ. ಆನಂತರ ಅವರು ಏಪ್ರಿಲ್ 20 ರಂದು ಮತದಾರರ ಗುರತಿನ ಚೀಟಿಗೆ ಅರ್ಜಿ ಹಾಕಿದ್ದರು. ಆದರೆ ಏಪ್ರಿಲ್ 11 ಕೊನೆಯ ದಿನವಾದ ಕಾರಣ ಅವರ ಹೆಸರು ಸೇರ್ಪಡೆಗೊಂಡಿರಲಿಲ್ಲ.

ಇನ್ನು ಅವರ ನಾಮಪತ್ರ ತಿರಸ್ಕೃತಗೊಳ್ಳುವ ಸಂಭವವನ್ನು ಅರಿತು ಜೆಡಿಎಸ್‌ನಿಂದ ಆರ್.ಮಂಜುನಾಥ್‌ರವರಿಗೂ ಬಿ ಫಾರಂ ಕೊಟ್ಟು ತರಾತುರಿಯಲ್ಲಿ ನಾಮಪತ್ರ ಸಲ್ಲಿಸಲಾಗಿತ್ತು. ಆದರೆ ಮಧ್ಯಾಹ್ನ 3 ಗಂಟೆ ಸಮಯ ಮೀರಿದ ನಂತರ ನಾಮಪತ್ರ ಸಲ್ಲಿಕೆಯಾದ ಕಾರಣ ಅದನ್ನೂ ತಿರಸ್ಕರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...