ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುತ್ತಿಲ್ಲ. ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜೊತೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಬೇಕಾ? ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾದಯಾತ್ರೆಗೆ ಬಿಜೆಪಿ ಏಕಪಕ್ಷೀಯ ತೀರ್ಮಾನ ಕೈಗೊಂಡಿದೆ. ಬೆಂಗಳೂರಿನಿಂದ ಮೈಸೂರಿನವರೆಗೆ ನಮ್ಮ ಶಕ್ತಿಯಿದೆ. ಆದರೆ, ನಮ್ಮನ್ನು ಸರಿಯಾಗಿ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಇದರಿಂದ ನನ್ನ ಮನಸ್ಸಿಗೆ ನೋವಾಗಿದೆ. ಹೀಗಿರುವಾಗ ನಾವ್ಯಾಕೆ ಬೆಂಬಲ ಕೊಡಬೇಕು? ಎಂದಿದ್ದಾರೆ.
JDS withdraws support for BJP's Padayatra against chief Minister @siddaramaiah
The week long padayatra was due to start on August 3rd from Bengaluru to Mysuru. BJP & JDS had collectively announced the Padayatra that was to traverse through JDS strongholds… pic.twitter.com/8RCPZYEugs
— Nabila Jamal (@nabilajamal_) July 31, 2024
ಪ್ರೀತಂಗೌಡ ಅವರನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ. ಈ ಪ್ರೀತಂಗೌಡ ಯಾರು? ಹಾಸನದ ಬೀದಿ ಬೀದಿಗಳಲ್ಲಿ ಪೆನ್‌ಡ್ರೈವ್ ಸಿಗಲು ಕಾರಣನಾದ ವ್ಯಕ್ತಿ ಆತ. ಆತನ ಜೊತೆ ನಾನು ವೇದಿಕೆ ಹಂಚಿಕೊಳ್ಳಬೇಕಾ? ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜೊತೆ ಪಾದಯಾತ್ರೆಯಲ್ಲಿ ಭಾಗಿಯಾಗಬೇಕಾ? ಎಂದು ಕೇಳಿದ್ದಾರೆ.
ವಾಲ್ಮಿಕಿ ಅಭಿವೃದ್ದಿ ನಿಗಮ ಮತ್ತು ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುವುದಾಗಿ ಘೋಷಿಸಿದ್ದರು. ಆಗಸ್ಟ್ 10ರಂದು ಮೈಸೂರಿನಲ್ಲಿ ಪಾದಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ ಎಂದಿದ್ದರು. ಈ ನಡುವೆ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ ‘ಗಾಡ್ಗೀಳ್ ಸಮಿತಿ ವರದಿ’


