Homeಮುಖಪುಟನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜೊತೆ ನಾನು ವೇದಿಕೆ ಹಂಚಿಕೊಳ್ಳಬೇಕಾ? ಹೆಚ್‌ಡಿಕೆ

ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜೊತೆ ನಾನು ವೇದಿಕೆ ಹಂಚಿಕೊಳ್ಳಬೇಕಾ? ಹೆಚ್‌ಡಿಕೆ

ಮಿತ್ರ ಪಕ್ಷ ಬಿಜೆಪಿಯ ಪಾದಯಾತ್ರೆಯಿಂದ ಹಿಂದೆ ಸರಿದ ಜೆಡಿಎಸ್

- Advertisement -
- Advertisement -

ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುತ್ತಿಲ್ಲ. ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜೊತೆ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಬೇಕಾ? ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾದಯಾತ್ರೆಗೆ ಬಿಜೆಪಿ ಏಕಪಕ್ಷೀಯ ತೀರ್ಮಾನ ಕೈಗೊಂಡಿದೆ. ಬೆಂಗಳೂರಿನಿಂದ ಮೈಸೂರಿನವರೆಗೆ ನಮ್ಮ ಶಕ್ತಿಯಿದೆ. ಆದರೆ, ನಮ್ಮನ್ನು ಸರಿಯಾಗಿ ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಇದರಿಂದ ನನ್ನ ಮನಸ್ಸಿಗೆ ನೋವಾಗಿದೆ. ಹೀಗಿರುವಾಗ ನಾವ್ಯಾಕೆ ಬೆಂಬಲ ಕೊಡಬೇಕು? ಎಂದಿದ್ದಾರೆ.

ಪ್ರೀತಂಗೌಡ ಅವರನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ. ಈ ಪ್ರೀತಂಗೌಡ ಯಾರು? ಹಾಸನದ ಬೀದಿ ಬೀದಿಗಳಲ್ಲಿ ಪೆನ್‌ಡ್ರೈವ್ ಸಿಗಲು ಕಾರಣನಾದ ವ್ಯಕ್ತಿ ಆತ. ಆತನ ಜೊತೆ ನಾನು ವೇದಿಕೆ ಹಂಚಿಕೊಳ್ಳಬೇಕಾ? ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜೊತೆ ಪಾದಯಾತ್ರೆಯಲ್ಲಿ ಭಾಗಿಯಾಗಬೇಕಾ? ಎಂದು ಕೇಳಿದ್ದಾರೆ.

ವಾಲ್ಮಿಕಿ ಅಭಿವೃದ್ದಿ ನಿಗಮ ಮತ್ತು ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಆಗಸ್ಟ್ 3ರಿಂದ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುವುದಾಗಿ ಘೋಷಿಸಿದ್ದರು. ಆಗಸ್ಟ್ 10ರಂದು ಮೈಸೂರಿನಲ್ಲಿ ಪಾದಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ ಎಂದಿದ್ದರು. ಈ ನಡುವೆ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ : ವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ ‘ಗಾಡ್ಗೀಳ್ ಸಮಿತಿ ವರದಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...