Homeಮುಖಪುಟಬಿಜೆಪಿ, ಕಾಂಗ್ರೆಸ್ ಟಿಕೆಟ್ ವಂಚಿತ 27 ಮಂದಿಗೆ ಟಿಕೆಟ್ ಕೊಟ್ಟ ಜೆಡಿಎಸ್: ಪಟ್ಟಿ ಇಲ್ಲಿದೆ

ಬಿಜೆಪಿ, ಕಾಂಗ್ರೆಸ್ ಟಿಕೆಟ್ ವಂಚಿತ 27 ಮಂದಿಗೆ ಟಿಕೆಟ್ ಕೊಟ್ಟ ಜೆಡಿಎಸ್: ಪಟ್ಟಿ ಇಲ್ಲಿದೆ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಗಿದಿದೆ. ಪ್ರಮುಖ ಪಕ್ಷಗಳ ಟಿಕೆಟ್‌ಗಾಗಿ ದೊಡ್ಡ ಕೋಲಾಹಲವೇ ಏರ್ಪಟ್ಟಿತ್ತು. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ತೀವ್ರ ಪೈಪೋಟಿ ನಡೆದಿದ್ದು, 27 ಜನ ಟಿಕೆಟ್ ವಂಚಿತರು ಜೆಡಿಎಸ್ ಪಕ್ಷ ಸೇರಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಮಂಗಳೂರು ಉತ್ತರ, ಚಿತ್ರದುರ್ಗ, ಮೂಡಿಗೆರೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿಯೇ ಈ ವಲಸೆ ನಡೆದಿದೆ. ಆ ಪಟ್ಟಿ ಇಲ್ಲಿದೆ.

ಬಿಜೆಪಿ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷ ಬಿಟ್ಟು ಜೆಡಿಎಸ್ ಸೇರಿ ಟಿಕೆಟ್ ಪಡೆದವರು

  1. ಶಿವಮೊಗ್ಗ: ಬಿಜೆಪಿ ಪಕ್ಷದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದ ಆಯನೂರು ಮಂಜುನಾಥ್‌ರವರು ಶಿವಮೊಗ್ಗದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿ ಟಿಕೆಟ್ ಸಿಗದಿದ್ದರಿಂದ ಅವರು ಜೆಡಿಎಸ್ ಸೇರಿ ಟಿಕೆಟ್ ಪಡೆದಿದ್ದಾರೆ.

2. ಮೂಡಿಗೆರೆ: ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ಹಾಲಿ ಬಿಜೆಪಿ ಶಾಸಕರಾಗಿದ್ದ ಎಂ.ಪಿ ಕುಮಾರಸ್ವಾಮಿಯವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತು. ಅವರು ಜೆಡಿಎಸ್ ಸೇರಿ ಅಭ್ಯರ್ಥಿಯಾಗಿದ್ದಾರೆ.

3. ಜೇವರ್ಗಿ: ಮಾಜಿ ಶಾಸಸ ದೊಡಪ್ಪಗೌಡ ಶಿವಲಿಂಗಪ್ಪನವರಿಗೆ ಬಿಜೆಪಿ ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್ ಸೇರಿದ್ದಾರೆ.

4. ಕೊಪ್ಪಳ: ಚಂದ್ರ ಶೇಖರ್‌ರವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್‌ಗೆ ಬಂದು ಟಿಕೆಟ್ ಗಿಟ್ಟಿಸಿದ್ದಾರೆ.

5. ಅರಸೀಕರೆ: ಎನ್ ಆರ್ ಸಂತೋಷ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಸಿಗದುದ್ದರಿಂದ ಅವರು ಜೆಡಿಎಸ್‌ಗೆ ಬಂದು ಟಿಕೆಟ್ ಗಿಟ್ಟಿಸಿದ್ದಾರೆ.

6. ವರುಣ: ಭಾರತೀ ಶಂಕರ್

7. ಅರಕಲಗೂಡು: ಎ.ಮಂಜು

8. ಕೂಡ್ಲಿಗಿ: ಕೋಡಿಹಳ್ಳಿ ಭೀಮಪ್ಪ

9. ಹಗರಿಬೊಮ್ಮನಹಳ್ಳಿ: ನೇಮಿರಾಜ್ ನಾಯಕ್

10. ಬೀದರ್: ಸೂರ್ಯಕಾಂತ್ ನಾಗಮಾರಪಲ್ಲಿ

11. ಯಾದಗಿರಿ: ಎ.ಬಿ ಮಲಕರೆಡ್ಡಿ

12. ಶಹಾಪುರ: ಗುರುಲಿಂಗಪ್ಪ ಗೌಡ

13. ಬಸವನ ಬಾಗೇವಾಡಿ: ಸೋಮನಗೌಡ ಪಾಟೀಲ್

14. ಕಾರವಾರ: ಚೈತ್ರ ಕೋಟೇಕಾರ್

ಕಾಂಗ್ರೆಸ್ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷ ಬಿಟ್ಟು ಜೆಡಿಎಸ್ ಸೇರಿ ಟಿಕೆಟ್ ಪಡೆದವರು

  1. ಮಂಗಳೂರು ಉತ್ತರ: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕರಾಗಿದ್ದ ಮೊಹಿದ್ದೀನ್ ಭಾವರವರ ಬದಲು ಇನಾಯತ್ ಉಲ್ಲಾರವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತು. ಇದರಿಂದ ಕುಪಿತಗೊಂಡ ಅವರು ಜೆಡಿಎಸ್ ಸೇರಿ ಅಭ್ಯರ್ಥಿಯಾಗಿದ್ದಾರೆ.

2. ಚಿತ್ರದುರ್ಗ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಘು ಆಚಾರ್ ಟಿಕೆಟ್ ಸಿಗದುದ್ದರಿಂದ ಜೆಡಿಎಸ್ ಸೇರಿ ಅಭ್ಯರ್ಥಿಯಾಗಿದ್ದಾರೆ.

3. ಕಡೂರು: ಮಾಜಿ ಶಾಸಕರಾದ ವೈಎಸ್‌ವಿ ದತ್ತಾರವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದರು. ಆದರೆ ಕಾಂಗ್ರೆಸ್‌ನಲ್ಲಿಯೂ ಟಿಕೆಟ್ ಸಿಗದಿದ್ದರಿಂದ ಅವರು ಮರಳಿ ಜೆಡಿಎಸ್‌ಗೆ ಬಂದು ಅಭ್ಯರ್ಥಿಯಾದರು.

4. ಬಳ್ಳಾರಿ ನಗರ: ಅನಿಲ್ ಲಾಡ್

5. ಬಾಗಲಕೋಟೆ: ಡಾ. ದೇವರಾಜ್ ಪಾಟೀಲ್

6. ಬೆಂಗಳೂರು ದಕ್ಷಿಣ: ರಾಜಗೋಪಾಲ ರೆಡ್ಡಿ

7. ಹಾನಗಲ್: ಮನೋಹರ್ ತಹಸೀಲ್ದಾರ್

8. ಹಳಿಯಾಳ: ಎಸ್.ಎಲ್. ಘೋಟ್ನೇಕರ್

9. ನವಲಗುಂದ: ಕಲ್ಲಪ್ಪ ನಾಗಪ್ಪ ಗಡ್ಡಿ

10. ಸವದತ್ತಿ ಯಲ್ಲಮ್ಮ: ಸೌರವ್ ಆನಂದ್ ಚೋಪ್ರಾ

11. ರಾಯಬಾಗ: ಪ್ರದೀಪ್ ಮಾಳಗಿ

12. ಕುಡಚಿ: ಆನಂದ್ ಮಾಳಗಿ

13. ಹೊಸದುರ್ಗ: ಎಂ.ತಿಪ್ಪೇಸ್ವಾಮಿ

ಇದನ್ನೂ ಓದಿ: ಜೆಡಿಎಸ್ ಅಭ್ಯರ್ಥಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...