Homeಕರ್ನಾಟಕಜೆಡಿಎಸ್ ಕೇವಲ ದೇವೇಗೌಡ-ಕುಮಾರಸ್ವಾಮಿಯವರ ಪಕ್ಷವಲ್ಲ: ಹೆಚ್.ಡಿ ದೇವೇಗೌಡ

ಜೆಡಿಎಸ್ ಕೇವಲ ದೇವೇಗೌಡ-ಕುಮಾರಸ್ವಾಮಿಯವರ ಪಕ್ಷವಲ್ಲ: ಹೆಚ್.ಡಿ ದೇವೇಗೌಡ

ಜೆಡಿಎಸ್‌ ಅನ್ನು ಬಿಜೆಪಿಯ ಬಿ ಟೀಂ ಎಂದು ನಮ್ಮ ವಿರುದ್ಧ ಟೀಕೆ ಮಾಡುವವರು ನಮ್ಮ ಮನೆಯ ಬಾಗಿಲಿಗೆ ಬಂದಿದ್ದು ಏಕೆ?

- Advertisement -
- Advertisement -

ಇತ್ತೀಚೆಗೆ ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಡುವೆ ನಡೆಯುತ್ತಿರುವ ಜಟಾಪಟಿ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಜೆಡಿಎಸ್ ಕೇವಲ ದೇವೇಗೌಡ-ಕುಮಾರಸ್ವಾಮಿಯವರ ಪಕ್ಷವಲ್ಲ. ಇನ್ನು ಅನೇಕ ನಾಯಕರು ನಮ್ಮ ಪಕ್ಷದಲ್ಲಿದ್ದಾರೆ’ ಎಂದು ತಿಳಿಸಿದ್ದಾರೆ.

ಇಂದು ಬೆಂಗಳೂರಿನ ಜೆ.ಪಿ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು “ರಾಜಕಾರಣದಲ್ಲಿ ಸೋಲು ಗೆಲುವು ಮಾಲೂಲಿ. ಹಾಗೆಂದು ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡುವುದು ಸರಿಯಲ್ಲ. ಯಾರು ಏನೇ ಮಾಡಿದರೂ ಸಹ ತೆನೆ ಹೊತ್ತ ಮಹಿಳೆಯನ್ನು ಅಲುಗಾಡಿಸಲು ಸಾಧ್ಯವಿಲ್ಲ. ದೇವೇಗೌಡ ಕುಮಾರಸ್ವಾಮಿಯ ಹೊರತಾಗಿಯೂ ಪಕ್ಷದಲ್ಲಿ ಸಾಕಷ್ಟು ನಾಯಕರಿದ್ದಾರೆ. ಪಕ್ಷ ಯಾರೊಬ್ಬರನ್ನೂ ನೆಚ್ಚಿಕೊಂಡಿಲ್ಲ” ಎಂದು ಕಿಡಿಕಾರಿದ್ದಾರೆ.

ಜೆಡಿಎಸ್​ಗೆ ಯಾರಿಂದ ಏನೂ ಮಾಡೋಕೆ ಆಗಲ್ಲ. ಜೆಡಿಎಸ್ ನಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಮಾತ್ರ ಅಲ್ಲ. ಪಕ್ಷ ಮುನ್ನಡೆಸಲು ಇನ್ನು ಅನೇಕ ನಾಯಕರು ಇದ್ದಾರೆ. ಹಾಲು, ಅಕ್ಕಿ ಭಾಗ್ಯದ ಮೇಲೆ ಭಾಗ್ಯ ಕೊಟ್ರಿ ಏನಾಯ್ತು? ಹಾಗಾದ್ರೆ 130 ಸೀಟು ಇದ್ದದ್ದೂ 78ಕ್ಕೆ ಏಕೆ ಬಂತು? ಹಾಸನದಲ್ಲಿ ಈಗ ಕಾಂಗ್ರೆಸ್ ಏನಾಗಿದೆ? ಒಂದು ನಗರಸಭೆ ಚುನಾವಣೆ ಗೆಲ್ಲೋಕೆ ಆಗಲಿಲ್ಲ, ಇದು ಆನಂದವಾ ನಿಮಗೆ? ಎಂದು ಸಿದ್ದರಾಮಯ್ಯ ವಿರುದ್ಧ ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಬಿ ಟೀಂ ಎಂದು ನಮ್ಮ ವಿರುದ್ಧ ಟೀಕೆ ಮಾಡುವ ಯಾರು ಯಾರು ನಮ್ಮ ಮನೆ ಬಾಗಿಲಿಗೆ ಬಂದ್ರು ಅಂತಾ ಗೊತ್ತಿದೆ. ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್ ಮುನಿಯಪ್ಪ, ಗುಲಾಂ ನಬಿ ಜಾದ್ ಎಲ್ಲಾರು ಬಂದಿದ್ರು. ಈಗ ಮಾತನಾಡುವಾಗ ಕಿಂಚಿತ್ತಾದ್ರೂ ವಾಸ್ತವ ಘಟನೆ ಬಗ್ಗೆ ಮಾತಾಡಬೇಕು ಎಂದು ದೇವೇಗೌಡರು ತಿಳಿಸಿದ್ದಾರೆ.

ನಮ್ಮ ಪಕ್ಷವನ್ನು ಬೇರೆ ಯಾವುದೇ ಪಕ್ಷದೊಂದಿಗೆ ವಿಲೀನ ಮಾಡುವುದಾಗಲಿ, ಬೇರೆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಲಿ ಯಾವುದೇ ತೀರ್ಮಾನವಾಗಿಲ್ಲ. ನಮ್ಮ ಜೆಡಿಎಸ್‌ ಪಕ್ಷವನ್ನು ಉಳಿಸುತ್ತೇವೆ, ಬೆಳೆಸುತ್ತೇವೆ. ಪ್ರಾದೇಶಿಕ ಪಕ್ಷ ಕೇವಲ ಕರ್ನಾಟಕಕ್ಕಲ್ಲ, ಇಡೀ ದೇಶಕ್ಕೆ ಅನಿವಾರ್ಯವಾಗಿದೆ ಎಂದರು.


ಇದನ್ನೂ ಓದಿ: ಕೊರೆಯುವ ಚಳಿಯಲ್ಲಿ ತಿಂಗಳು ಪೂರೈಸಿದ ರೈತರ ಹೋರಾಟ: ಕರಗದ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...