Homeಕರ್ನಾಟಕಅರಸೀಕೆರೆ ನಗರ ಸಭೆ ಜೆಡಿಎಸ್‌ ಸದಸ್ಯರ ಖರೀದಿಗೆ ಬಿಜೆಪಿ ಯತ್ನ: ಹೆಚ್‌.ಡಿ ರೇವಣ್ಣ ಆರೋಪ

ಅರಸೀಕೆರೆ ನಗರ ಸಭೆ ಜೆಡಿಎಸ್‌ ಸದಸ್ಯರ ಖರೀದಿಗೆ ಬಿಜೆಪಿ ಯತ್ನ: ಹೆಚ್‌.ಡಿ ರೇವಣ್ಣ ಆರೋಪ

- Advertisement -
- Advertisement -

ಅರಸೀಕೆರೆ ನಗರಸಭೆ ಸದಸ್ಯರ ಖರೀದಿಗೆ ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಪಕ್ಷದ ಸದಸ್ಯರಿಗೆ ಹಣದ ಆಮಿಷಗಳನ್ನೊಡ್ಡಿ ಬಿಜೆಪಿ ನಾಯಕರು ತಮ್ಮ ಪಕ್ಷಕ್ಕೆ ಸೆಳೆಯಲು ಯತ್ನಿಸುತ್ತಿದ್ದಾರೆ. ಶಾಸಕರಿಂದ ಹಿಡಿದು ಗ್ರಾಮ ಪಂಚಾಯತ್ ಸದಸ್ಯರವರೆಗೆ ಬಿಜೆಪಿ ಕುದುರೆ ವ್ಯಾಪಾರದ ಸಂಪ್ರದಾಯವನ್ನು ನಡೆಸುತ್ತಿದೆ ಎಂದು ಮಾಜಿ ಸಚಿವ ಮತ್ತು ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣನವರು ಇಂದು ಅರೋಪಿಸಿದ್ದಾರೆ.

ಹಾಸನದಲ್ಲಿ ಇಂದು ಅರಸೀಕೆರೆ ಶಾಸಕ ಶಿವಲಿಂಗೇಗೌಡರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನು ನಡೆಸಿದ್ದ ಅವರು ಬಿಜೆಪಿಯ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಬಿಜೆಪಿಗೆ ವಿಧಾನಸಭೆಯಲ್ಲಿ ಇರಲಿ ಅಥವಾ ನಗರಸಭೆಯಲ್ಲೇ ಇರಲಿ ನೇರವಾಗಿ ಅಧಿಕಾರ ಹಿಡಿದು ಗೊತ್ತಿಲ್ಲ. ಚುನಾಯಿತ ಪ್ರತಿನಿಧಿಗಳ ಖರಿದಿಯೇ ಬಿಜೆಪಿಯ ರಾಜಕೀಯ ಸಿದ್ಧಾಂತವಾಗಿದೆ ಎಂದು ಕಿಡಿಕಾರಿದ್ದಾರೆ.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸಂತೋ‍ಷ್‌ ಅವರು ಜೆಡಿಎಸ್‌ ಪಕ್ಷದ ನಗರ ಸಭೆ ಸದಸ್ಯರಿಗೆ 10 ಲಕ್ಷ ಹಣದ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿದ ಹೆಚ್‌.ಡಿ. ರೇವಣ್ಣ, ಸುದ್ದಿಗೊಷ್ಠಿಯಲ್ಲಿ 10 ಲಕ್ಷ ಹಣವನ್ನು ಸಹ ಪ್ರದರ್ಶಿಸಿ ಬಿಜೆಪಿ ವಿರುದ್ಧ ತೀವ್ರ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿಗೆ ಸೇರಲು ನಿರಾಕರಿಸಿದ ಜೆಡಿಎಸ್ ಸದಸ್ಯರಿಗೆ ಕೊಲೆ ಬೆದರಿಕೆ ಹಾಗೂ ರಾಜಕೀಯ ಜೀವನವನ್ನು ಅಂತ್ಯಗೊಳಿಸುವ ಬೆದರಿಕೆಯನ್ನು ಬಿಜೆಪಿ ಹಾಕುತ್ತಿದೆ. ಈ ಕುರಿತು ಸಿಬಿಐ ತನಿಖೆಯಾಗಬೆಕು. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರೇ ಈ ಕುದುರೆ ವ್ಯಾಪಾರಕ್ಕೆ ಹೊಣೆಗಾರರು. ಯಡಿಯೂರಪ್ಪನವರಿಗೆ ನೈತಿಕತೆಯಿದ್ದರೆ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಹೆಚ್‌.ಡಿ.ರೇವಣ್ಣನವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.

ಅರಸೀಕೆರೆ ನಗರಸಭೆಯಲ್ಲಿ ಜೆಡಿಎಸ್ ಬಹುಮತವನ್ನು ಹೊಂದಿದೆ. ಮೀಸಲಾತಿಯ ಆಧಾರದಲ್ಲಿ ಬಿಜೆಪಿಯವರು ಅಧ್ಯಕ್ಷರಾಗಿದ್ದು, ಈಗಾಗಲೇ 7 ಜನ ಜೆಡಿಎಸ್‌ ಸದಸ್ಯರನ್ನು ಬಿಜೆಪಿ ಖರೀದಿಸಿದೆ ಎಂದು ಹೆಚ್‌.ಡಿ.ರೇವಣ್ಣ ಆರೋಪಿಸಿದ್ದಾರೆ.


ಇದನ್ನೂ ಓದಿ : ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಿ.ಜೆ.ಪಿ.ಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಏಕೆಂದರೆ ಅವರದ್ದು, ಮೂಲಬೂತವಾಗಿ ವ್ಯಾಪಾರಿಗಳ ಪಕ್ಷ. ಆದ್ದರಿಂದ ಅವರು ಜನಪ್ರತಿನಿದಿಗಳನ್ನು ಸಹ ಸರಕಿನಂತೆ ಮಾರಾಟದ ವಸ್ತುವನ್ನಾಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ.

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...