Homeಮುಖಪುಟಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ವಿಲೀನ ವಿವಾದ: ಸ್ಪಷ್ಟನೆ ನೀಡಿದ ಬಿಎಸ್‌ವೈ, ಎಚ್‌ಡಿಕೆ

ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ವಿಲೀನ ವಿವಾದ: ಸ್ಪಷ್ಟನೆ ನೀಡಿದ ಬಿಎಸ್‌ವೈ, ಎಚ್‌ಡಿಕೆ

ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್‌ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

- Advertisement -
- Advertisement -

ರಾಜ್ಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ವಿಲೀನವಾಗಲಿದೆ ಎಂಬ ಊಹಪೋಹಗಳಿಗೆ ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಅಂತಹ ಯಾವುದೇ ಪ್ರಸ್ತಾಪ ತಮ್ಮ ಮುಂದಿಲ್ಲ, ವಿಲೀನ ಇಲ್ಲ ಎಂದು ತಿಳಿಸಿದ್ದಾರೆ.

ಇತ್ತೀಚಿಗಿನ ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿಯವರ ನಡೆ ಆಧರಿಸಿ ಕೆಲ ಮಾಧ್ಯಮಗಳು ರಾಜ್ಯದಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ವಿಲೀನವಾಗಲಿದೆ ಎಂದು ವರದಿ ಮಾಡಿದ್ದವು. ಅದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಯಡಿಯೂರಪ್ಪ, “ವಿಧಾನಪರಿಷತ್‌ನಲ್ಲಿ ಜೆಡಿಎಸ್‌ ನಮಗೆ ಬೆಂಬಲ ಕೊಟ್ಟಿದೆ. ಆದರೆ ವಿಲೀನವಾಗುವ ಯಾವುದೇ ಪ್ರಸ್ತಾಪ ಇಲ್ಲ” ಎಂದಿದ್ದಾರೆ.

ಎಚ್‌.ಡಿ ಕುಮಾರಸ್ವಾಮಿಯವರು ಟ್ವೀಟ್‌ ಮಾಡಿ “ಸ್ವಾಭಿಮಾನಿ ಕನ್ನಡಿಗರ ಪಕ್ಷ ಜೆಡಿಎಸ್ ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಜನರ ಗಟ್ಟಿ ಧ್ವನಿಯಾದ ಜೆಡಿಎಸ್‌ ಅಂತಹ ಅವಿವೇಕತನ ಪ್ರದರ್ಶನ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಮುಂದಿನ ದಿನಗಳಲ್ಲಿ ಬಿಜೆಪಿ ಜೊತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ. ವಿಲೀನದಂಥ ಕಪೋಲಕಲ್ಪಿತ ಸುದ್ದಿಗಳಿಗೆ ಯಾವುದೇ ಪ್ರಾಮುಖ್ಯತೆ ಇಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಜೆಡಿಎಸ್‌ನವರಿಗಿಂತಲೂ ಹೆಚ್ಚು ಬಿಜೆಪಿಗರಿಂದ ಹುಟ್ಟುಹಬ್ಬದ ಅಭಿನಂದನೆ ಪಡೆದುಕೊಂಡ ಎಚ್‌ ಡಿ ಕುಮಾರಸ್ವಾಮಿ! ಏನಿದರ ಮರ್ಮ?

‘ರೈತರ ಸಾಲಮನ್ನಾ’, ‘ಬಡವರ ಬಂಧು’ ಇಂತಹ ಕಾರ್ಯಕ್ರಮಗಳನ್ನು ನೀಡಿದ, ಶಿಸ್ತುಬದ್ಧ ಆಡಳಿತ ನಡೆಸಿದ, ದೇವೇಗೌಡರ ಆಶಯದಂತೆ ನಡೆಯುತ್ತಿರುವ ಜೆಡಿಎಸ್‌ ಮೇಲೆ ಜನರ ವಿಶ್ವಾಸವಿದೆ. ಮತ್ತೊಂದು ಪಕ್ಷದೊಂದಿಗೆ ವಿಲೀನ ಮಾಡಿಕೊಳ್ಳುವ ಮೂಲಕ ಸ್ವಯಂ ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶ ಬಂದಿಲ್ಲ, ಬರುವುದೂ ಇಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇನೆ ಎಚ್‌ಡಿಕೆ  ಹೇಳಿದ್ದಾರೆ.


ಇದನ್ನೂ ಓದಿ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನು ಸೋಲಿಸಲು JDS-BJP ನಡುವೆ ಒಳಒಪ್ಪಂದ ಆಗಿತ್ತು- ಜೆಡಿಎಸ್ ಶಾಸಕ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

0
ದೆಹಲಿ ಎಎಪಿ ನಾಯಕಿ, ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ ವಿಭಿನ್ನ ತಿರುವನ್ನು ಪಡೆದುಕೊಂಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ಶುಕ್ರವಾರ ಎಎಪಿ...