Homeಮುಖಪುಟ'ಜೆಡಿಎಸ್ ವರಿಷ್ಠರು ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ..'; ಎಂಎಲ್‌ಸಿ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ

‘ಜೆಡಿಎಸ್ ವರಿಷ್ಠರು ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದಾರೆ..’; ಎಂಎಲ್‌ಸಿ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ

- Advertisement -
- Advertisement -

‘ಜನತಾದಳದ ವರಿಷ್ಠರಾದ ಹೆಚ್.​ಡಿ. ದೇವೇಗೌಡ, ರಾಜ್ಯಾಧ್ಯಕ್ಷ ಹೆಚ್.​ಡಿ. ಕುಮಾರಸ್ವಾಮಿ ಅವರು ನಮ್ಮ ನಡುವಿನ ಕೆಲವು ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲಿಲ್ಲ; ಅವರು ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣೆಸುತ್ತಿದ್ದಾರೆ’ ಎಂದು ಜೆಡಿಎಸ್ ಹಿರಿಯ ಮುಖಂಡ ಮರಿತಿಬ್ಬೇಗೌಡ ಆರೋಪ ಮಾಡಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರ ಹುಬ್ಬಳ್ಳಿ ನಿವಾಸದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ  ನೀಡಿದ ಅವರು, ಜೆಡಿಎಸ್ ವರಿಷ್ಠರಾದ ದೇವೇಗೌಡ ಮತ್ತು ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ, ಜೆಡಿಎಸ್ ತೊರೆಯುವ ಸೂಚನೆಯನ್ನೂ ನೀಡಿದ್ದಾರೆ.

ರಾಜೀನಾಮೆ ಅಂಗೀಕಾರವಾದ ನಂತರ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಬವಾರದು ಎಂದು ಆಗಾಗ ನಮ್ಮ ಪಕ್ಷದ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಆದರೆ, ನಮ್ಮ ಸಲಹೆಗಳು ವರಿಷ್ಠರಿಗೆ ಹಿಡಿಸಲಿಲ್ಲ. ದಕ್ಷಿಣ ಪಧವೀಧರ ಕ್ಷೇತ್ರದ ಚುನಾವಣೆಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ಕೊಡಬೇಕು ಎಂದು ಕೇಳಿದ್ದೆವು. ಆ ಸಂದರ್ಭದಲ್ಲಿ ಅವರು ರಾಜಕಾರಣದಲ್ಲೇ ಇಲ್ಲದ ವ್ಯಕ್ತಿಗೆ ಟಿಕೆಟ್ ಕೊಟ್ಟರು. ಪಕ್ಷದ ಕಾರ್ಯಕರ್ತರಿಗೆ ಕೊಟ್ಟರೆ ಗೆಲ್ಲಿಸುವ ಜವಾಬ್ದಾರಿ ನಮ್ಮದು ಎಂದು ಹೇಳಿದ್ದೆವು. ಆದರೆ, ಅವರು ಟಿಕೆಟ್ ಕೊಡಲಿಲ್ಲ’ ಎಂದು ಬೇಸರ ಹೊರಹಾಕಿದರು.

‘ವಯಕ್ತಿಕ ಕಾರಣದಿಂದ ನಾನು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನಾನು ಜನತಾ ದಳದಿಂದ ಎರಡು ಬಾರಿ ಟಿಕೆಟ್ ಪಡೆದಿದ್ದೆ. ಎರಡು ಬಾರಿ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಗೆದ್ದಿದ್ದೇನೆ. ಈ ಅವಧಿಯಲ್ಲಿ ಮೂರು ವರ್ಷಗಳ ಕಾಲ ವಿಧಾನ ಪರಿಷತ್ ಉಪ ಸಭಾಪತಿ ಆಗಿದ್ದೆ. ನನ್ನ ರಾಜಕೀಯ ಜೀವನ ಪ್ರಾರಂಭವಾಗಿದ್ದು 1985ರಿಂದ ಜನತಾ ದಳದ ಮೂಲಕ; ಕೆಲವು ಸಲ ನನಗೆ ವಿಧಾನ ಪರಿಷತ್ ಹಾಗೂ ವಿಧಾನಸಭೆ ಟಿಕೆಟ್ ಪಕ್ಷದಿಂದ ಸಿಗಲಿಲ್ಲ’ ಎಂದರು.

‘2000ನೇ ಇಸವಿಯಲ್ಲಿ ನಾನು ​ನಲ್ಲಿ ಕಾಂಗ್ರೆಸ್​ನಿಂದ ಸ್ಪರ್ಧಿಸಿ ವಿಧಾನ ಪರಿಷತ್​ಗೆ ಆಯ್ಕೆಯಾಗಿದ್ದೆ. ಎರಡನೇ ಬಾರಿ ಪಕ್ಷೇತರವಾಗಿ ಗೆದ್ದು ಬಂದಿದ್ದೆ; ಮೂರು ನಾಲ್ಕನೇ ಬಾರಿ ನಾನು ಜನತಾದಳದಿಂದ ಗೆದ್ದು ಬಂದಿದ್ದೇನೆ. ಪಕ್ಷದ ನಿಷ್ಠಾವಂತ ಸದಸ್ಯನಾಗಿ ಕೆಲಸ ಮಾಡಿದ್ದೇನೆ’ ಎಂದರು.

‘ನಾನು ನನಗೆ ಮತ ನೀಡಿದ ಶಿಕ್ಷಕ ಬಂಧುಗಳ ಜೊತೆ ಸಮಾಲೋಚನೆ ಮಾಡಿ ರಾಜೀನಾಮೆ ನಿರ್ಧಾರ ಮಾಡಿದ್ದೇನೆ. ಎಲ್ಲರೂ ಪಕ್ಷ ಬಿಡಿ ಎಂದು ಅಭಿಪ್ರಾಯ ಸೂಚಿಸಿದ್ದಾರೆ. ಹೀಗಾಗಿ ನಾನು ರಾಜೀನಾಮೆ ನೀಡಿದ್ದೇನೆ. ಶೀಘ್ರವೇ ನನ್ನ ಮುಂದಿನ ನಡೆ ತಿಳಿಸಲಾಗುವುದು’ ಎಂದು ಹೇಳುವ ಮೂಲಕ ಅವರು ಜೆಡಿಎಸ್ ತೊರೆಯುವ ಸುಳಿವು ನೀಡಿದ್ದಾರೆ.

ಜೆಡಿಎಸ್ ನಾಯಕರು ಮೊಸಳೆ ಸವಾರಿ ಮಾಡುತ್ತಿದ್ದಾರೆ:

ಸಭಾಪತಿ ಬಸವರಾಜ ಹೊರಟ್ಟಿಯವರ ಬಗ್ಗೆ ಮಾತನಾಡಿ, ‘ಹೊರಟ್ಟಿ ನನ್ನ ರಾಜಕೀಯ ಗುರುಗುಳು; ಇವತ್ತು ನಾನು ಅವರಿಗೆ ರಾಜೀನಾಮೆ ಸಲ್ಲಿಸಿದ್ದೇನೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದೇನೆ. ನಮ್ಮ ಪಕ್ಷದ ನಾಯಕರು ಮೊಸಳೆ ಮೇಲೆ ಸವಾರಿ ಮಾಡುತ್ತಿದ್ದಾರೆ. ಮೊಸಳೆ ಅಂದರೆ ಬಿಜೆಪಿ; ಮೊಸಳೆ ಸವಾರಿ ಅವರಿಗೆ ಒಳ್ಳೆದಲ್ಲ’ ಎಂದು ಹೇಳುವ ಬಿಜೆಪಿ ಜೊತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ರಾಜೀನಾಮೆ ಅಂಗೀಕಾರವಾಗಿದೆ: ಹೊರಟ್ಟಿ

ಮಾಧ್ಯಮಗಳ ಮುಂದೆಯೇ ರಾಜೀನಾಮೆ ಪತ್ರ ಸ್ವೀಕರಿಸಿದ ಸಭಾಪತಿ ಬಸವರಾಜ ಹೊರಟ್ಟಿ, ‘ನಿಮ್ಮ ರಾಜೀನಾಮೆ ಅಂಗೀಕಾರವಾಗಿದೆ’ ಎಂದು ಹೇಳಿದರು. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಹುಬ್ಬಳ್ಳಿಯ ಗೃಹ ಕಚೇರಿಗೆ ಆಗಮಿಸಿದ ಗೌಡರು, ರಾಜೀನಾಮೆ ಪತ್ರ ಸಲ್ಲಿಸಿದರು. ‘ಮರಿತಿಬ್ಬೇಗೌಡ ಸ್ವಹಿತಾಸಕ್ತಿಯಿಂದ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆ ಅಂಗೀಕರಿಸಲಾಗಿದೆ. ಇನ್ನು ಮುಂದೆ ಅವರು ಪರಿಷತ್ತಿನ ಸದಸ್ಯರಲ್ಲ; ಮುಂದಿನ ಕ್ರಮಗಳನ್ನು ಜಾರಿಗೊಳಿಸಲಾಗುತ್ತದೆ’ ಎಂದು ಮಾಧ್ಯಮಗಳಿಗೆ ಬಸವರಾಜ ಹೊರಟ್ಟಿಯವರು ಮಾಹಿತಿ ನೀಡಿದರು.

ಇದನ್ನೂ ಓದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...