Homeಕರ್ನಾಟಕಜೆಡಿಎಸ್ 'ಜಾತ್ಯತೀತ' ಪದವನ್ನು ಕೈಬಿಟ್ಟು ರಾಜಕಾರಣ ಮಾಡಲಿ: ಸಚಿವ ಪ್ರಿಯಾಂಕ್ ಖರ್ಗೆ

ಜೆಡಿಎಸ್ ‘ಜಾತ್ಯತೀತ’ ಪದವನ್ನು ಕೈಬಿಟ್ಟು ರಾಜಕಾರಣ ಮಾಡಲಿ: ಸಚಿವ ಪ್ರಿಯಾಂಕ್ ಖರ್ಗೆ

- Advertisement -
- Advertisement -

ಜೆಡಿಎಸ್ ತನ್ನ ಹೆಸರಿನಲ್ಲಿರುವ ಜಾತ್ಯತೀತ ಪದವನ್ನು ಕೈಬಿಟ್ಟು ರಾಜಕಾರಣ ಮಾಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಅವರು, “ಗೋಸುಂಬೆ ಬಣ್ಣವನ್ನು ಮಾತ್ರ ಬದಲಿಸುತ್ತದೆ. ಆದರೆ ಜೆಡಿಎಸ್ ಬಣ್ಣವನ್ನು ಮಾತ್ರವಲ್ಲ, ಸಿದ್ಧಾಂತವನ್ನು, ಮಾತುಗಳನ್ನೂ ಬದಲಿಸುವ ಮೂಲಕ ತನ್ನ ನಿಜ ಬಣ್ಣವನ್ನು ಅನಾವರಣಗೊಳಿಸಿದೆ” ಎಂದಿದ್ದಾರೆ.

“ಸಂಘವೆಂದರೆ ‘ಸದಾನಂದ’ದ ಪರಿವಾರ ಎಂದು ಆರೋಪಿಸಿದ್ದವರು, ಇಂದು ಸಂಘದ ಸಹವಾಸದಲ್ಲೇ ಸದಾ ಆನಂದವಿದೆ ಎನ್ನುತ್ತಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಕುಟುಕಿದ್ದಾರೆ.

ಶುಕ್ರವಾರ (ಅ.3) ಬೆಂಗಳೂರಿನ ಜೆಡಿಎಸ್ ಕಚೇರಿ ಜೆ.ಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ದೇವೇಗೌಡರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಐದು ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಮುಂದಿನ ವಿಧಾನಸಭೆ ಚುನಾವಣೆಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರೆಯುತ್ತದೆ ಎಂದು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಮೋದಿ ಅವರೊಂದಿಗಿನ ಒಡನಾಟದಲ್ಲಿ ಯಾವುದೇ ಬದಲಾವಣೆ ಇಲ್ಲ. ನನ್ನ ಬಗ್ಗೆ ಪ್ರಧಾನಿಯವರು ಒಂದೇ ಒಂದು ಮಾತನ್ನೂ ಲಘುವಾಗಿ ಆಡಿಲ್ಲ. ಎರಡೂ ಪಕ್ಷಗಳ ನಡುವಿನ ಸಂಬಂಧ ಚೆನ್ನಾಗಿದೆ ಎಂದಿದ್ದಾರೆ.

ಗುಜರಾತ್| ದೇವಸ್ಥಾನಕ್ಕೆ ತೆರಳುತ್ತಿದ್ದ ದಲಿತ ವ್ಯಕ್ತಿಯನ್ನು ಥಳಿಸಿದ ಪ್ರಬಲ ಜಾತಿ ವ್ಯಕ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...