HomeUncategorizedಬಿಜೆಪಿ ಜೊತೆಗಿನ ಮೈತ್ರಿಯಿಂದ ಜೆಡಿಎಸ್‌ಗೆ ಸಂಕಷ್ಟ: ಮತ್ತೊಂದು ವಿಕೆಟ್ ಪತನ

ಬಿಜೆಪಿ ಜೊತೆಗಿನ ಮೈತ್ರಿಯಿಂದ ಜೆಡಿಎಸ್‌ಗೆ ಸಂಕಷ್ಟ: ಮತ್ತೊಂದು ವಿಕೆಟ್ ಪತನ

- Advertisement -
- Advertisement -

2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಬಿಜೆಪಿ-ಜೆಡಿಎಸ್ ಒಂದಾಗಿವೆ. ಇದೀಗ ಜೆಡಿಎಸ್ ಪಕ್ಷ ಬಿಜೆಪಿ ನೇತೃತ್ವದಲ್ಲಿ ಎನ್‌ಡಿಎನ ಭಾಗವಾಗಿದೆ. ಆದರೆ, ಮೈತ್ರಿ ಬೆನ್ನಲ್ಲಿಯೇ ಜೆಡಿಎಸ್‌ನಲ್ಲಿ ಭಿನ್ನಮತ ಸೃಷ್ಟಿಯಾಗಿದ್ದು, ಒಂದಿಷ್ಟು ಶಾಸಕರು ಹಾಗೂ ಹಲವು ಮುಸ್ಲಿಂ ಮುಖಂಡರು ಬಿಜೆಪಿ ಜೊತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್​ ನಾಯಕರು ಒಬ್ಬೊಬ್ಬರಾಗಿಯೇ ಪಕ್ಷ ತೊರೆಯುತ್ತಿದ್ದಾರೆ. ಇದೀಗ ತುಮಕೂರಿನಲ್ಲಿ‌ ಜೆಡಿಎಸ್​ನ ಮತ್ತೊಂದು ವಿಕೆಟ್​ ಪತನವಾಗಿದೆ. ಅಲ್ಪಸಂಖ್ಯಾತ ಸಮುದಾಯದ ಮುಖಂಡ ಹಾಗೂ ಮಾಜಿ ಶಾಸಕ ಶಫಿ ಅಹಮದ್ ಜೆಡಿಎಸ್​ಗೆ ರಾಜೀನಾಮೆ ನೀಡಿದ್ದಾರೆ.

ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ಹಾಗೂ ರಾಜ್ಯಾ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಶಫೀ ಅಹಮದ್ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹಾಗೂ ಜಿಲ್ಲಾ ಅಧ್ಯಕ್ಷರಿಗೆ ರವಾನಿಸಿದ್ದಾರೆ. ಅಲ್ಲದೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ, ಹೆಚ್​ಡಿ ದೇವೇಗೌಡ ಅವರಿಗೆ ವಾಟ್ಸಪ್ ಮಾಡಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಹಮದ್ ಕಾಂಗ್ರೆಸ್​ಗೆ ಗುಡ್ ಬೈ ಹೇಳಿ ಜೆಡಿಎಸ್ ಸೇರಿದ್ದರು. ಇದೀಗ ಜೆಡಿಎಸ್​ ತೊರೆದು ವಾಪಸ್ ಕಾಂಗ್ರೆಸ್​ನತ್ತ ಮುಖ ಮಾಡಿದ್ದಾರೆ. ಆದ್ರೆ, ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ಅವರು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಇತ್ತೀಚೆಗೆ ಜೆಡಿಎಸ್​ನ ಅಲ್ಪಸಂಖ್ಯಾತ ನಾಯಕರು ಸಭೆ ಮಾಡಿದ್ದು, ಸಾಮೂಹಿಕವಾಗಿ ಜೆಡಿಎಸ್​ ತೊರೆಯಲು ತೀರ್ಮಾನಿಸಿದ್ದಾರೆ. ಆದರೆ  ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಇಬ್ರಾಹಿಂ ಸಹ ಜೆಡಿಎಸ್​ಗೆ ಗುಡ್​ಬೈ ಹೇಳುವ ಸಾಧ್ಯತೆಗಳು ಹೆಚ್ಚಿವೆ. ಏಕೆಂದರೆ ಇಬ್ರಾಹಿಂ ಹಾಗೂ ಬಿಜೆಪಿಯ ಸಿದ್ಧಾಂತಗಳನ್ನು ಮೊದಲಿನಿಂದಲೂ ವಿರೋಧಿಸಿಕೊಂಡು ಬಂದಿದ್ದಿದ್ದಾರೆ. ಇದೀಗ ಜೆಡಿಎಸ್​ ಬಿಜೆಪಿಯೊಂದಿಗೆ ಮೈತ್ರಿ ಮಾಡಿಜೊಂಡಿದೆ. ಇದರಿಂದ ಅವರು ಪಕ್ಷ ತೊರೆದರೂ ಅಚ್ಚರಿಪಡಬೇಕಿಲ್ಲ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿ: ದಳದಲ್ಲಿ ಭಿನ್ನಮತ, ರಾಜೀನಾಮೆಗೆ ಮುಂದಾದ್ರಾ ಮುಸ್ಲಿ ಮುಖಂಡರು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...