Homeಮುಖಪುಟಬಿಹಾರದಲ್ಲಿ ಜೆಡಿಯು ಮುಖಂಡನ ಗುಂಡಿಟ್ಟು ಹತ್ಯೆ: ಭುಗಿಲೆದ್ದ ಪ್ರತಿಭಟನೆ

ಬಿಹಾರದಲ್ಲಿ ಜೆಡಿಯು ಮುಖಂಡನ ಗುಂಡಿಟ್ಟು ಹತ್ಯೆ: ಭುಗಿಲೆದ್ದ ಪ್ರತಿಭಟನೆ

- Advertisement -
- Advertisement -

ಜೆಡಿಯು ಯುವ ಮುಖಂಡನನ್ನು ಅಪರಿಚಿತ ದಾಳಿಕೋರರು ಗುಂಡಿಕ್ಕಿ  ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದ್ದು, ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಬೀದಿಗಿಳಿದು ಪ್ರತಿಭಟನೆಯನ್ನು ನಡೆಸಿದ್ದಾರೆ.

ಸೌರಭ್ ಕುಮಾರ್ ಹತ್ಯೆಗೀಡಾದ ಜೆಡಿಯು ಯುವ ಮುಖಂಡ. ಇವರನ್ನು ಅಪರಿಚಿತ ದಾಳಿಕೋರರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಡರಾತ್ರಿ ಸೌರಭ್ ಕುಮಾರ್ ತನ್ನ ಸ್ನೇಹಿತರು ಮತ್ತು ಕುಟುಂಬದೊಂದಿಗೆ ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದಾಗ ಬೈಕ್‌ನಲ್ಲಿ ಬಂದ ನಾಲ್ವರು ದಾಳಿಕೋರರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣ ಸೌರಭ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.

ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿ ಭರತ್ ಸೋನಿ ಪ್ರತಿಕ್ರಿಯಿಸಿದ್ದು, ಮದುವೆ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದಾಗ ಮೋಟಾರು ಸೈಕಲ್‌ಗಳಲ್ಲಿ ಬಂದ ದಾಳಿಕೋರರು ಕುಮಾರ್ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಮತ್ತೊಬ್ಬ ವ್ಯಕ್ತಿಯೂ ಗಾಯಗೊಂಡಿದ್ದಾರೆ ಮತ್ತು ಅವರ ಸ್ಥಿತಿ ಸ್ಥಿರವಾಗಿದೆ. ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಗುಂಡು ತಗುಲಿದ ಪರಿಣಾಮ ಕುಮಾರ್ ಮೃತಪಟ್ಟಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗುತ್ತಿದೆ. ಈ ಬಗ್ಗೆ ರಾಜಕೀಯ ಮತ್ತು ವ್ಯಾಪಾರ ವಹಿವಾಟುಗಳು ಸೇರಿದಂತೆ ಎಲ್ಲಾ ಕೋನಗಳಲ್ಲಿ ಅನ್ವೇಷಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಘಟನೆಯ ನಂತರ ಕೆರಳಿದ ಜೆಡಿಯು ಬೆಂಬಲಿಗರು ಸ್ಥಳದಲ್ಲಿ ಜಮಾಯಿಸಿ, ಹತ್ಯೆಯ ಬಗ್ಗೆ ಕಠಿಣ ಮತ್ತು ತ್ವರಿತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆಯನ್ನು ನಡೆಸಿದ್ದಾರೆ. ಸೌರಭ್‌ ಮೇಲಿನ ಗುಂಡಿನ ದಾಳಿ ಕುರಿತ ಸುದ್ದಿ ಹರಡುತ್ತಿದ್ದಂತೆ, ಸ್ಥಳೀಯ ನಿವಾಸಿಗಳು ಬೀದಿಗಿಳಿದು ರಸ್ತೆಗಳನ್ನು ತಡೆದು ಪ್ರತಿಭಟಿಸಿದ್ದಾರೆ. ಇದರಿಂದಾಗಿ ಪನ್‌ಪುನ್ ಎನ್‌ಎಚ್ 83ರಲ್ಲಿ ಹಲವಾರು ಗಂಟೆಗಳ ಕಾಲ ಟ್ರಾಫಿಕ್ ಜಾಮ್‌ ಉಂಟಾಗಿದೆ, ಸ್ಥಳೀಯ ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸುವಲ್ಲಿ ಯಶಸ್ವಿಯಾದರು.

ಏಪ್ರಿಲ್ 26 ರಂದು ನಡೆಯಲಿರುವ ಎರಡನೇ ಹಂತದ ಮತದಾನದ ಮೊದಲು ರಾಜ್ಯದಲ್ಲಿ ಐದು ಲೋಕಸಭಾ ಸ್ಥಾನಗಳಿಗೆ ಪ್ರಚಾರ ಮುಗಿದ ಮರುದಿನ ತಡವಾಗಿ ಈ ಘಟನೆ ನಡೆದಿದೆ. ರಾಜ್ಯದಲ್ಲಿ ಕನಿಷ್ಠ 50 ಅಭ್ಯರ್ಥಿಗಳು ಕಣದಲ್ಲಿದ್ದು, ಅವರ ಭವಿಷ್ಯವನ್ನು ನಿರ್ಧರಿಸಲಾಗುವುದು. ಎರಡನೇ ಹಂತ.

ಇದನ್ನು ಓದಿ: ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರ ಸಚಿವ ಅಮಿತ್‌ ಶಾ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲು

0
ಚುನಾವಣೆ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಹಿನ್ನೆಲೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೆಲಂಗಾಣದ ಹೈದರಾಬಾದ್‌ನಲ್ಲಿ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಲಾಗಿದೆ. ಚುನಾವಣಾ...