Homeಮುಖಪುಟಜೆಇಇ-ನೀಟ್: ಪರೀಕ್ಷೆ ಮುಂದೂಡುವಂತೆ 6 ರಾಜ್ಯಗಳಿಂದ ಸುಪ್ರೀಂ ಕೋರ್ಟ್‌‌ಗೆ ಅರ್ಜಿ

ಜೆಇಇ-ನೀಟ್: ಪರೀಕ್ಷೆ ಮುಂದೂಡುವಂತೆ 6 ರಾಜ್ಯಗಳಿಂದ ಸುಪ್ರೀಂ ಕೋರ್ಟ್‌‌ಗೆ ಅರ್ಜಿ

NEET ಮತ್ತು JEE ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ನವ ದೆಹಲಿಯ ಶಾಸ್ತ್ರಿ ಭವನದ ಬಳಿ ಪ್ರತಿಭಟನೆಗೂ ಮುಂದಾಗಿದ್ದಾರೆ.

- Advertisement -
- Advertisement -

ಜೆಇಇ, ನೀಟ್ ಪರೀಕ್ಷೆಗಳನ್ನು ಮುಂದೂಡಬೇಕು ಎಂಬ ಕೂಗು ದೇಶದಾದ್ಯಂತ ಕೇಳಿಬರುತ್ತಿರುವುದರ ಭಾಗವಾಗಿ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಛತ್ತೀಸ್ಗಡ, ಜಾರ್ಖಂಡ್, ಪಂಜಾಬ್, ರಾಜಸ್ಥಾನ ಸೇರಿದಂತೆ 6 ರಾಜ್ಯಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿವೆ.

ಕೊರೋನಾ ಸಂಕಷ್ಟದ ಸಮಯದಲ್ಲಿ ವೈದ್ಯಕೀಯ ಶಿಕ್ಷಣ ಕೋರ್ಸ್ ಪ್ರವೇಶ ಪರೀಕ್ಷೆ ನೀಟ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳ ಪ್ರವೇಶ ಪರೀಕ್ಷೆ ಜೆಇಇಯನ್ನು ಮುಂದೂಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಸೇರಿ ಹಲವು ಮಂದಿ ಆಗ್ರಹಿಸುತ್ತಲೇ ಇದ್ದಾರೆ.

ಆದರೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಾತ್ರ ಪರೀಕ್ಷೆ ನಡೆಸಿಯೇ ತೀರುತ್ತೇವೆ ಎಂದು ತಿಳಿಸಿದೆ.

ಇದನ್ನೂ ಓದಿ: ಲಾಕ್‌ಡೌನ್ ವಿಧಿಸಿದ್ದು ನೀವು, ಈಗ ನೀವೇ ನೆರವು ನೀಡಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಕಳೆ ವಾರ ವಿರೋಧ ಪಕ್ಷಗಳ ನಾಯಕರ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ಸೇರಿದಂತೆ ಅನೇಕರು, ಜೆಇಇ, ನೀಟ್ ಪರೀಕ್ಷೆಗೆ ಆಕ್ಷೇಪ ವ್ಯಕ್ತಪಡಿಸಿ, ಇದನ್ನು ವಿರೋಧಿಸಿ ಸುಪ್ರೀಂ ಮೊರೆ ಹೋಗುವುದಾಗಿ ತೀರ್ಮಾನಿಸಿದ್ದರು.

ಅದರಂತೆ ಪರೀಕ್ಷೆಗಳನ್ನು ನಡೆಸುವ ಕೇಂದ್ರದ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ನಿರ್ದೇಶಿಸಲು ಕೋರಿ ಇಂದು ಸುಪ್ರೀಂ ಕೋರ್ಟ್ನಲ್ಲಿ ಮನವಿ ಸಲ್ಲಿಸಿವೆ.

ಈ ನಡುವೆ NEET ಮತ್ತು JEE ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ಕಾ ರ್ಯಕರ್ತರು ಇಂದು ನವ ದೆಹಲಿಯ ಶಾಸ್ತ್ರಿ ಭವನದ ಬಳಿ ಪ್ರತಿಭಟನೆಗೂ ಮುಂದಾಗಿದ್ದಾರೆ.

ಈ ವೇಳೆ ಮಾತನಾಡಿರುವ ಕಾಂಗ್ರೆಸ್ ಮುಖಂಡ ಅನಿಲ್ ಕುಮಾರ್, “ದೇಶದಲ್ಲಿ ಕೊರೊನಾ ವೈರಸ್  ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವಾಗ NEET ಮತ್ತು JEE ಪರೀಕ್ಷೆಗಳನ್ನು ನಡೆಸುತ್ತಿರುವುದು ಸರಿಯಲ್ಲ. ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ವಿರೋಧದ ಹೊರತಾಗಿಯೂ ಕೇಂದ್ರ ಸರ್ಕಾರ ಮತ್ತು ಶಿಕ್ಷಣ ಸಚಿವಾಲಯವು 25 ಲಕ್ಷ ವಿದ್ಯಾರ್ಥಿಗಳ ಜೀವಕ್ಕೆ ಅಪಾಯವನ್ನುಂಟುಮಾಡುತ್ತಿದೆ” ಎಂದು ಹೇಳಿದರು.

ಈ ವೇಳೆ ಅನೇಕ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ಜೆಇಇ-ನೀಟ್ ಪರೀಕ್ಷೆ ಮುಂದೂಡಿ: ಗ್ರೇಟಾ ಥನ್‌ಬರ್ಗ್ ಸೇರಿ ಹಲವರ ಒತ್ತಾಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...