Homeಕರ್ನಾಟಕಜೆಲ್ಲಿ ಚಾಕ್ಲೆಟ್ ರೂಪದಲ್ಲಿ ಮಾದಕ ವಸ್ತು: ಮಕ್ಕಳೇ ಇವರ ಟಾರ್ಗೆಟ್?

ಜೆಲ್ಲಿ ಚಾಕ್ಲೆಟ್ ರೂಪದಲ್ಲಿ ಮಾದಕ ವಸ್ತು: ಮಕ್ಕಳೇ ಇವರ ಟಾರ್ಗೆಟ್?

ಮಾದಕವಸ್ತು ಲೇಪಿತ ಜೆಲ್ಲಿ ಚಾಕ್ಲೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಾಮೂಲಿ ಚಾಕ್ಲೆಟ್‌ನಂತೆಯೇ ಕಾಣುವ ಇವುಗಳಿಗೆ ಮಕ್ಕಳು ಬೇಗನೇ ಆಕರ್ಷಿತರಾಗುತ್ತಾರೆ.

- Advertisement -
- Advertisement -

ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಬೆಳಕಿಗೆ ಬರುತ್ತಿದ್ದಂತೆ, ಬೆಂಗಳೂರಿನಲ್ಲಿ ಪ್ರತಿ ದಿನ ಒಂದಲ್ಲ ಒಂದು ಮಾದಕ ವಸ್ತು ಜಾಲ ಪತ್ತೆಯಾಗುತ್ತಿದೆ. ಕೆಜಿಗಟ್ಟಲೇ ಗಾಂಜಾ, ಡ್ರಗ್ಸ್ ದೊರೆಯುತ್ತಿರುವ ವರದಿಗಳಾಗುತ್ತಿವೆ.

ಮಾದಕವಸ್ತು ಲೇಪಿತ ಜೆಲ್ಲಿ ಚಾಕ್ಲೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಾಮೂಲಿ ಚಾಕ್ಲೆಟ್‌ನಂತೆಯೇ ಕಾಣುವ ಇವುಗಳಿಗೆ ಮಕ್ಕಳು ಬೇಗನೇ ಆಕರ್ಷಿತರಾಗುತ್ತಾರೆ. ಈ ಕಾರಣಕ್ಕೆ ಇವರು ಮಕ್ಕಳನ್ನು ಟಾರ್ಗೆಟ್ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಡ್ರಗ್ಸ್ ದಂಧೆ – ಬೆಚ್ಚದಿರಿ: ವಿವರಗಳಷ್ಟೇ, ಯಾರ ಹೆಸರುಗಳೂ ಇಲ್ಲ

ಈ ಬಗ್ಗೆ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಟ್ವೀಟ್ ಮಾಡಿದ್ದಾರೆ. ಪ್ರಕರಣದಲ್ಲಿ ಇಬ್ಬರು ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಿದ್ದು, ಬಂಧಿತರಿಂದ ಎಲ್‌ಎಸ್‌ಡಿ, ಮತ್ತುಬರಿಸುವ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.

ಇದರ ಜೊತೆಗೆ ಹೆಲ್ಮೆಟ್‌ನಲ್ಲಿ ಮಾದಕ ವಸ್ತು ಬ್ರೌನ್ ಶುಗರ್ ಸಾಗಾಟ ಮಾಡುತ್ತಿದ್ದ ವಿಕ್ರಂ ಖಿಲೇರಿ ಎಂಬಾತನನ್ನು ಸಿಟಿ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 90 ಗ್ರಾಂ ಬ್ರೌನ ಶುಗರ್‌, ಹಣ ವಶಪಡಿಸಿಕೊಂಡಿದ್ದು, ಬೈಕ್ ಜಪ್ತಿ ಮಾಡಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

ಬಂಧಿತ ವಿಕ್ರಂ, ಡ್ರಗ್ಸ್ ಪೊಟ್ಟಣಗಳ ಮೇಲೆ ದೇವರ ಚಿತ್ರ ಅಂಟಿಸಿ, ದೇವರ ಪ್ರಸಾದ ಎಂದು ಬಸ್ ಮತ್ತು ಕೊರಿಯರ್‌ ಕಂಪನಿಗಳ ಮೂಲಕ ಬೇರೆಡೆಗೆ ಡ್ರಗ್ಸ್ ಸಾಗಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗದ ಪುನರಾರಂಭ: ಅನುಮತಿ ನೀಡಿದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಪುನಃ ಅಗ್ರಸ್ಥಾನ ಪಡೆದ ಗೌತಮ್ ಅದಾನಿ; ಶೇ. 13 ರಷ್ಟು ಸಂಪತ್ತು ಹೆಚ್ಚಳ

ಎಂ3ಎಂ ಹುರುನ್ ಇಂಡಿಯಾ ರಿಚ್ ಲಿಸ್ಟ್ 2026 ರ ಪ್ರಕಾರ, ಭಾರತದ ಬಿಲಿಯನೇರ್‌ಗಳ ಸಂಖ್ಯೆಯು ದಾಖಲೆಯ 391 ಕ್ಕೆ ತಲುಪಿದ್ದು, ಮುಖೇಶ್ ಅಂಬಾನಿ ಅವರನ್ನು ಹಿಂದಿಕ್ಕಿರುವ ಗೌತಮ್ ಅದಾನಿ ಮತ್ತು ಅವರ ಕುಟುಂಬವು...

ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: SIR ಕುರಿತು ಮಾಜಿ ಮುಖ್ಯ ಚುನಾವಣಾ ಆಯುಕ್ತರು, ತಜ್ಞರ ಕಳವಳ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗದೊಳಗೆ ದಾಖಲಾಗಿರುವ ಭಿನ್ನಾಭಿಪ್ರಾಯಗಳು ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿವೆ. ದಿ ಇಂಡಿಯನ್ ಎಕ್ಸ್‌ಪ್ರೆಸ್  ನಡೆಸಿದ ತನಿಖಾ ವರದಿ ಪ್ರಕಾರ,...

ಚಲಿಸುವ ರೈಲಿನಲ್ಲಿ ಹಲ್ಲೆ ನಡೆಸಿ ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯ: ಮುಸ್ಲಿಂ ಯುವಕನ ಆರೋಪ

ಮುಂಬೈಯಿಂದ ಉತ್ತರ ಪ್ರದೇಶಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮುಸ್ಲಿಂ ಯುವಕನೊಬ್ಬ ಆರೋಪಿಸಿದ್ದಾನೆ. ದಾಳಿಕೋರರು ತನ್ನ ಶರ್ಟ್ ಹರಿದು, ಥಳಿಸಿ, ಬಲವಂತವಾಗಿ "ಜೈ ಶ್ರೀ ರಾಮ್" ಎಂದು ಜಪಿಸುವಂತೆ...

ಫಾರ್ಮ್ 6 ರಲ್ಲಿನ ಬದಲಾವಣೆಗಳು ಕಾನೂನುಬಾಹಿರ; ಆಯೋಗದೊಳಗಿನ ಭಿನ್ನಾಭಿಪ್ರಾಯ ಗಂಭೀರ: ಮಾಜಿ ಸಿಇಸಿ ಓ.ಪಿ. ರಾವತ್

"ಶಾಸನಬದ್ಧ ಮತದಾರರ ನೋಂದಣಿ ಫಾರ್ಮ್ ನಂ 6 ರಲ್ಲಿ ಮಾಡಲಾದ ಬದಲಾವಣೆಗಳು ಸಂಪೂರ್ಣವಾಗಿ ತಪ್ಪು ಮತ್ತು ಕಾನೂನುಬಾಹಿರ" ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಓ.ಪಿ. ರಾವತ್ ತಿಳಿಸಿದ್ದಾರೆ. "ಚುನಾವಣಾ ಆಯೋಗದೊಳಗಿನ...

‘ಸಲ್ವಾರ್ ತೆಗೆಯಲು ಯತ್ನ, ಎದೆ ಒತ್ತುವುದು ಅತ್ಯಾಚಾರ ಯತ್ನವಲ್ಲವೇ?’: ಪಾಟ್ನಾ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಚಾಟಿ 

ನವದೆಹಲಿ: ಮಹಿಳೆಯ ಸಲ್ವಾರ್ ತೆಗೆಯಲು ಯತ್ನಿಸುವುದು ಮತ್ತು ಆಕೆಯ ಎದೆಯನ್ನು ಒತ್ತುವುದು ಸೇರಿದಂತೆ ಲೈಂಗಿಕ ದೌರ್ಜನ್ಯದ ಆರೋಪಗಳು ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪಾಟ್ನಾ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ...

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಜಾಗೊಳಿಸಿ; ಕೂಡಲೇ ಎಸ್‌ಐಆರ್ ನಿಲ್ಲಿಸಿ: ವಿಪಕ್ಷಗಳ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚುನಾವಣಾ ಆಯೋಗದ ಇಬ್ಬರು ಚುನಾವಣಾ ಆಯುಕ್ತರು ಗಂಭೀರ ಕಳವಳ ವ್ಯಕ್ತಪಡಿಸಿರುವುದು ದೊಡ್ಡ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. "ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್...

‘ಸಹೋದರಿಯರು, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧ’: ಮುಸ್ಲಿಂ ಮಹಿಳೆಯರ ವಿರುದ್ಧ ಮಧ್ಯಪ್ರದೇಶ ಬಿಜೆಪಿ ಶಾಸಕನ ಅತ್ಯಾಚಾರ ಬೆದರಿಕೆ

ಭೋಪಾಲ್: ನವರಾತ್ರಿ ಸಂದರ್ಭದಲ್ಲಿ ನಡೆಯುವ ಗರ್ಬಾ ಕಾರ್ಯಕ್ರಮಗಳಿಗೆ ಮುಸ್ಲಿಂ ಯುವಕರು ಆಗಮಿಸುವುದನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶದ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ನೀಡಿರುವ ಹೇಳಿಕೆ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. “ಮುಸ್ಲಿಂ ಹುಡುಗರು ಮಾತ್ರ...

BWSSB ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಜಲಮಂಡಳಿ ಗುತ್ತಿಗೆ ಕಾರ್ಮಿಕರ ಸರಣಿ ಸಾವಿಗೆ ಆಕ್ರೋಶ, ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅಹೋರಾತ್ರಿ ಸುಗಮವಾಗಿ ನಿರ್ವಹಿಸುವ BWSSB ಜಲಮಂಡಳಿಯ ಸಾವಿರಾರು ಗುತ್ತಿಗೆ ಕಾರ್ಮಿಕರು ತಮ್ಮ ಜೀವಭದ್ರತೆ ಹಾಗೂ ಮೂಲಭೂತ ಹಕ್ಕುಗಳಿಗಾಗಿ ಆಗ್ರಹಿಸಿ ಇಂದು (ಸೆಪ್ಟೆಂಬರ್ 23)...

ಕೋಲ್ಕತ್ತಾ: ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಉಪಾಸನಾ ಚೌಧರಿ ಮನೆ ಮೇಲೆ ಕಲ್ಲುತೂರಾಟ, ಮಾಜಿ ಶಾಸಕ ಹುಮಾಯೂನ್ ಕಬೀರ್ ಮೇಲೂ ಹಲ್ಲೆ!

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮುಕುಂದಪುರದಲ್ಲಿ ಮಂಗಳವಾರ (ಸೆ. 22) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಘರ್ಷಣೆ ನಡೆದಿದೆ. ಘಟನೆಯಲ್ಲಿ ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಹಾಗೂ ವಕ್ತಾರೆ...

SIR ಏಕಪಕ್ಷೀಯ ತೀರ್ಮಾನ ಖಂಡಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರಿ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision – SIR / ವಿಶೇಷ...