Homeಮುಖಪುಟತಿಹಾರ್‌ ಜೈಲಿನಿಂದ ಬಿಡುಗಡೆಗೊಂಡ ಜೆಸ್ಸಿಕಾ ಲಾಲ್ ಕೊಲೆಗಾರ ’ಮನು ಶರ್ಮ’

ತಿಹಾರ್‌ ಜೈಲಿನಿಂದ ಬಿಡುಗಡೆಗೊಂಡ ಜೆಸ್ಸಿಕಾ ಲಾಲ್ ಕೊಲೆಗಾರ ’ಮನು ಶರ್ಮ’

ದೆಹಲಿ ದಂಡನಾ ಪರಿಶೀಲನಾ ಮಂಡಳಿಯ ಶಿಫಾರಸಿನ ನಂತರ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಈ ನಿರ್ಧಾರಕ್ಕೆ ಸಹಿ ಹಾಕಿದ್ದಾರೆ.

- Advertisement -
- Advertisement -

ದೇಶದಾದ್ಯಂತ ಗಮನ ಸೆಳೆಯಲ್ಪಟ್ಟ ಜೆಸ್ಸಿಕಾ ಲಾಲ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮನು ಶರ್ಮ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ದೆಹಲಿಯ ತಿಹಾರ್ ಜೈಲಿನಿಂದ ಇತರ 18 ಕೈದಿಗಳೊಂದಿಗೆ ಸೋಮವಾರ ಅವರನ್ನು ಕೂಡಾ ಬಿಡುಗಡೆ ಮಾಡಲಾಗಿದೆ.

ದೆಹಲಿ ದಂಡನಾ ಪರಿಶೀಲನಾ ಮಂಡಳಿಯ ಶಿಫಾರಸಿನ ನಂತರ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಈ ನಿರ್ಧಾರಕ್ಕೆ ಸಹಿ ಹಾಕಿದ್ದರು. ಕಳೆದ ತಿಂಗಳು ದೆಹಲಿ ಗೃಹ ಸಚಿವ ಸತ್ಯೇಂದರ್ ಜೈನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಂಡಳಿ ಈ ಶಿಫಾರಸು ಮಾಡಿತ್ತು.

ಕೊರೊನಾ ವೈರಸ್ ಬಿಕ್ಕಟ್ಟಿನಲ್ಲಿ ಜನದಟ್ಟಣೆ ತಡೆಗಟ್ಟಲು ಕಾರಾಗೃಹಗಳು ಕೈಗೊಂಡ ಕ್ರಮಗಳ ಭಾಗವಾಗಿ 17 ವರ್ಷಕ್ಕಿಂತಲೂ ಕಡಿಮೆ ಜೈಲುವಾಸ ಅನುಭವಿಸಿದ ಮನು ಶರ್ಮಾ ಪೆರೋಲ್ ಮೇಲೆ ಬಿಡುಗಡೆಗೊಂಡಿದ್ದಾರೆ.

ಮಾಜಿ ಕೇಂದ್ರ ಸಚಿವ ವಿನೋದ್ ಶರ್ಮ ಅವರ ಪುತ್ರ ಮನು ಶರ್ಮ, 2006 ರ ಏಪ್ರಿಲ್ 30 ರಂದು ದೆಹಲಿಯ ಟಾಮ್‌ರಿಂಡ್ ರೆಸ್ಟೋರೆಂಟ್‌ನಲ್ಲಿ ನಡೆದ ಸಮಾಜವಾದಿ ಪಕ್ಷದ ಬಿನಾ ರಮಣಿಯವರ ಪಾರ್ಟಿಯಲ್ಲಿ ರೂಪದರ್ಶಿ ಜೆಸ್ಸಿಕಾ ಲಾಲ್ ಅವರನ್ನು ಶೂಟ್ ಮಾಡಿ ಕೊಲೆ ಮಾಡಿದ್ದಕ್ಕಾಗಿ ಶಿಕ್ಷೆಗೊಳಗಾಗಿದ್ದರು.

ವಿಚಾರಣಾ ನ್ಯಾಯಾಲಯ ಅವರನ್ನು ಕೊಲೆ ಪ್ರಕರಣದಿಂದ ಖುಲಾಸೆಗೊಳಿಸಿತ್ತಾದರೂ, ರಾಷ್ಟ್ರವ್ಯಾಪಿ ಆಕ್ರೋಶ ಮತ್ತು ಪ್ರತಿಭಟನೆಗಳು ನಡೆದ ನಂತರ ಪ್ರಕರಣವನ್ನು ಕೈಗೆತ್ತಿಕೊಂಡ ಹೈಕೋರ್ಟ್ ವಿಚಾರಣೆ ನಡೆಸಿ ಜೀವಾವಧಿ ಶಿಕ್ಷೆ ವಿಧಿಸಿತು. 2010 ರಲ್ಲಿ ಈ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಕೂಡಾ ದೃಡಪಡಿಸಿತ್ತು.

ಕಳೆದ ಎರಡು ವರ್ಷಗಳಲ್ಲಿ, ಮನು ಶರ್ಮಾ ಅವರು “ಉತ್ತಮ ನಡವಳಿಕೆ” ಯ ಕಾರಣದಿಂದಾಗಿ ತೆರೆದ ಜೈಲಿನಲ್ಲಿದ್ದರು; ಬೆಳಿಗ್ಗೆ 8 ಗಂಟೆಗೆ ಕೆಲಸಕ್ಕಾಗಿ ಜೈಲಿನಿಂದ ಹೊರಟು ಸಂಜೆ 6 ಗಂಟೆಗೆ ಮರಳಲು ಅವರಿಗೆ ಅವಕಾಶ ನೀಡಲಾಗಿತ್ತು. ಮನು ಶರ್ಮಾ ಕೈದಿಗಳ ಪುನರ್ವಸತಿಗಾಗಿ ಲಾಭರಹಿತವಾಗಿ ಕೆಲಸ ಮಾಡಿದ್ದರು ಎನ್ನಲಾಗಿದೆ.

2018 ರಲ್ಲಿ, ಜೆಸ್ಸಿಕಾ ಲಾಲ್ ಅವರ ತಂಗಿ ಸಬ್ರಿನಾ ಲಾಲ್ ಮನು ಶರ್ಮಾ ಅವರನ್ನು ಕ್ಷಮಿಸಿದ್ದೇವೆ ಹಾಗೂ ಅವರು ಬಿಡುಗಡೆಗೊಂಡರೆ ಆಕ್ಷೇಪಿಸುವುದಿಲ್ಲ ಎಂದು ಹೇಳಿದ್ದರು.

ಈ ಅಪರಾಧದ ಆಧಾರವಾಗಿಟ್ಟುಕೊಂಡು ಚಲನಚಿತ್ರ ಬಂದಿದ್ದು, ಹಣ ಮತ್ತು ಪ್ರಭಾವವನ್ನು ಹೊಂದಿರುವವರಿಗೆ ಕಾನೂನನ್ನು ದುರುಪಯೋಗಪಡಿಸಿಕೊಳ್ಳಲು ಹಾಗೂ ಕೊಲೆಯಿಂದ ಪಾರಾಗಲು ಅನುವು ಮಾಡಿಕೊಡುವ ಕಾನೂನಿನಲ್ಲಿನ ಆಳವಾದ ನ್ಯೂನತೆಗಳನ್ನು ಇದು ಇದು ಎತ್ತಿ ತೋರಿಸಿತ್ತು.


ಓದಿ: ಸುಪ್ರೀಂ ಕೋರ್ಟ್‌ನಲ್ಲಿ ಸುಳ್ಳು ವಾಟ್ಸಾಪ್ ಫಾರ್ವಾಡ್ ಸಂದೇಶವನ್ನು ಉಲ್ಲೇಖಿಸಿದ ಕೇಂದ್ರ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...