Homeಮುಖಪುಟಜೇವರ್ಗಿ: ಟಿಕೆಟ್ ಸಿಗದಿದ್ದಕ್ಕೆ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ಬಿಜೆಪಿಗೆ ರಾಜೀನಾಮೆ

ಜೇವರ್ಗಿ: ಟಿಕೆಟ್ ಸಿಗದಿದ್ದಕ್ಕೆ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ಬಿಜೆಪಿಗೆ ರಾಜೀನಾಮೆ

- Advertisement -
- Advertisement -

ಜೇವರ್ಗಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಬಯಸಿದ್ದ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳರವರು ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿರವರಿಗೆ ಜೇವರ್ಗಿ ಬಿಜೆಪಿ ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ತಮ್ಮ ಬೆಂಬಲಿಗರು, ಅಭಿಮಾನಿಗಳ ಸಭೆ ನಡೆಸಿದ ದೊಡ್ಡಪ್ಪಗೌಡ ಪಾಟೀಲ ಬಿಜೆಪಿ ತೊರೆಯುವ ನಿರ್ಧಾರ ಘೋಷಿಸಿದ್ದು, ಬೇರೆ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಪ್ರಕಟಿಸಿದ್ದಾರೆ.

2008 ರ ಚುನಾವಣೆಯಲ್ಲಿ ಮಾಜಿ ಸಿಎಂ ಧರ್ಮಸಿಂಗ್‌ರವರನ್ನು ಮಣಿಸಿದ್ದ ದೊಡ್ಡಪ್ಪಗೌಡ ಪಾಟೀಲರು ನಂತರ ಎರಡು ಚುನಾವಣೆಗಳಲ್ಲಿ ಅವರ ಪುತ್ರ ಅಜಯ್ ಸಿಂಗ್ ವಿರುದ್ಧ ಸೋಲು ಕಂಡಿದ್ದರು.

“ನಾನು ನಿತ್ಯ ಕ್ಷೇತ್ರದ ಜನರ ಕೆಲಸ ಮಾಡಿದ್ದೇನೆಯೇ ಹೊರತು ಕಳ್ಳತನ, ಕೆಟ್ಟದ್ದು ಮಾಡಿಲ್ಲ. ಆದರೂ ಅಸೂಯೆಯಿಂದ ಕೆಲವರು ನನಗೆ ಟಿಕೆಟ್ ತಪ್ಪಿಸಿದ್ದಾರೆ. ಈ ಕಾರಣಕ್ಕಾಗಿಯೇ ನಾನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ” ಎಂದರು.

ದೊಡ್ಡಪ್ಪಗೌಡ ಅವರು ತಾಯಿ ಮಲ್ಲಮ್ಮಗೌಡತಿ ಶಿವಲಿಂಗಪ್ಪಗೌಡ ನರಿಬೋಳ ಮಾತನಾಡಿ, “ನನ್ನ ಮಗನನ್ನು ನಿಮ್ಮ ಊಡಿಯಲ್ಲಿ ಹಾಕಿದ್ದೇನೆ. ಬೆಳೆಸುವ ಜವಾಬ್ದಾರಿ ತಾಲ್ಲೂಕಿನ ಜನರ ಮೇಲೆ ಇದೆ. ನಮ್ಮ ಕುಟುಂಬಕ್ಕೆ ಮೋಸ ಮಾಡಿದವರಿಗೆ ನೀವೇ ಉತ್ತರ ಕೊಡಬೇಕು” ಎಂದರು.

ಜೇವರ್ಗಿಯಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನು ಘೋಷಿಸಿಲ್ಲ. ಹಾಗಾಗಿ ದೊಡ್ಡಪ್ಪಗೌಡ ಪಾಟೀಲ್‌ರವರು ಜೆಡಿಎಸ್ ಸೇರುವ ಸಾಧ್ಯತೆ ಇದೆ.

ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಲಕ್ಷ್ಮಣ್ ಸವದಿ ಬಿಜೆಪಿ ತೊರೆದಿದ್ದಾರೆ. ಜಗದೀಶ್ ಶೆಟ್ಟರ್ ಬಂಡಾಯ ಸ್ಪರ್ಧೆ ಸುಳಿವು ನೀಡಿದ್ದಾರೆ. ಗೂಳಿಹಟ್ಟಿ ಶೇಖರ್ ಬಂಡಾಯ ಅಭ್ಯರ್ಥಿಯಾಗುವುದಾಗಿ ಘೋಷಿಸಿದ್ದಾರೆ. ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರಿಗೆ ಟಿಕೆಟ್ ಸಿಗದಿರುವ ಕಾರಣಕ್ಕೆ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಉಡುಪಿ ಟಿಕೆಟ್ ಸಿಗದ ರಘುಪತಿ ಭಟ್ ಕಣ್ಣೀರು ಹಾಕಿದ್ದಾರೆ. ನಿನ್ನೆಯೇ ಈಶ್ವರಪ್ಪ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ತುಮಕೂರು ನಗರದ ಸೊಗಡು ಶಿವಣ್ಣ ಬಿಜೆಪಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಕುಣಿಗಲ್ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮುದ್ದಹನುಮೇಗೌಡ ಮತ್ತು ರಾಜೇಶ್ ಗೌಡ ಕೂಡ ಬಂಡಾಯದ ಬಾವುಟ ಹಾರಿಸಿದ್ದಾರೆ. ಅವರ ಪಟ್ಟಿಗೆ ದೊಡ್ಡಪ್ಪಗೌಡ ಪಾಟೀಲ್ ಸೇರಿಕೊಂಡಿದ್ದಾರೆ.

ಇದನ್ನೂ ಓದಿ; ತುಮಕೂರು: ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ತೊರೆಯಲು ಸೊಗಡು ಶಿವಣ್ಣ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...