Homeಕರ್ನಾಟಕಬೆಳ್ತಂಗಡಿ | ಆಭರಣ ಮಳಿಗೆ ವ್ಯವಸ್ಥಾಪಕನಿಂದ ಮೂವರು ವಿದ್ಯಾರ್ಥಿಗಳಿಗೆ ಹಲ್ಲೆ : ಪ್ರಕರಣ ದಾಖಲು

ಬೆಳ್ತಂಗಡಿ | ಆಭರಣ ಮಳಿಗೆ ವ್ಯವಸ್ಥಾಪಕನಿಂದ ಮೂವರು ವಿದ್ಯಾರ್ಥಿಗಳಿಗೆ ಹಲ್ಲೆ : ಪ್ರಕರಣ ದಾಖಲು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪಟ್ಟಣದಲ್ಲಿ ಸೋಮವಾರ (ಡಿ.16) ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಂ ವಿದ್ಯಾರ್ಥಿಗಳಿಗೆ ಆಭರಣ ಮಳಿಗೆಯ ವ್ಯವಸ್ಥಾಪಕ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.

ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ ವ್ಯವಸ್ಥಾಪಕ ಅಶೋಕ್ ಬಂಗೇರ ಹಾಗೂ ಸಿಬ್ಬಂದಿ ಮೂವರು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೇಣೂರು ಸಮೀಪದ ಮೂವರು ವಿದ್ಯಾರ್ಥಿಗಳು ಶಾಲೆಗೆ ರಜೆ ಹಾಕಿ, ಬೆಳ್ತಂಗಡಿ ಪೇಟೆಯಲ್ಲಿ ಪ್ರತಿ ಸೋಮವಾರ ನಡೆಯುವ ಸಂತೆಗೆ ಹೋಗಿದ್ದರು. ಅಲ್ಲಿ ಸುತ್ತಾಡಿದ ಬಳಿಕ ಬೆಳ್ತಂಗಡಿ ಸಂತೆಕಟ್ಟೆ ಬಳಿ ಇರುವ ಪೃಥ್ವಿ ಆಭರಣ ಮಳಿಗೆಯ ಪಕ್ಕದಲ್ಲಿ ಕುಳಿತು ಮೊಬೈಲ್‌ನಲ್ಲಿ ಆಟವಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿಗಳ ಹೆಸರನ್ನು ಕೇಳಿ ಮುಸ್ಲಿಂ ವಿದ್ಯಾರ್ಥಿಗಳು ಎಂದು ಗೊತ್ತಾದಾಗ, ಅವರನ್ನು ನಿಂದಿಸಿ, ಕೋಣೆಯಲ್ಲಿ ಕೂಡಿ ಹಾಕಿ ಎರಡು ಗಂಟೆಗಳ ಕಾಲ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಹಲ್ಲೆ ನಡೆಸಿದ್ದನ್ನು ಪ್ರಶ್ನಿಸಲು ಹೋಗಿದ್ದ ವಿದ್ಯಾರ್ಥಿಗಳ ಪೋಷಕರೊಂದಿಗೆ ಆಭರಣ ಮಳಿಗೆಯ ವ್ಯವಸ್ಥಾಪಕ ಸಹಿತ ಇತರೆ ಸಿಬ್ಬಂದಿ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ.

ಘಟನೆಯ ವೇಳೆ ಮೂವರು ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಹಲ್ಲೆಯಿಂದ ತಪ್ಪಿಸಿಕೊಂಡು ನಾಪತ್ತೆಯಾಗಿದ್ದನು. ಆ ಬಳಿಕ ರಾತ್ರಿ ಹುಡುಕಾಡಿದಾಗ ಪೋಷಕರ ಕೈಗೆ ಸೇರಿದ್ದಾನೆ. ಸದ್ಯ ಹಲ್ಲೆಯಿಂದ ಗಾಯಗೊಂಡಿರುವ ಮೂವರು ವಿದ್ಯಾರ್ಥಿಗಳು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವುದಾಗಿ ಈದಿನ.ಕಾಂ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳೆಯ ಹಿಜಾಬ್ ಎಳೆದ ಆರೋಪ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬೆಂಗಳೂರಿನ ವಕೀಲರಿಂದ ದೂರು

ಬೆಂಗಳೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಿಳೆಯೊಬ್ಬರ ಹಿಜಾಬ್ ಅನ್ನು ಹಿಡಿದ ಎಳೆದ ವಿಚಾರಕ್ಕೆ ಸಂಬಂಧ ಪಟ್ಟಂತೆ ಅವರ ವಿರುದ್ಧ ಬೆಂಗಳೂರು ಮೂಲದ ವಕೀಲರೊಬ್ಬರು ಮಂಗಳವಾರ ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್...

ಕೇರಳ| ನಿರ್ಗಮಿತ ದಲಿತ ಪಂಚಾಯತ್ ಅಧ್ಯಕ್ಷರ ವಿರುದ್ಧ ‘ಶುದ್ಧೀಕರಣ ಆಚರಣೆ’; ವರದಿ ಕೇಳಿದ ಎಸ್‌ಸಿ/ಎಸ್‌ಟಿ ಆಯೋಗ

ಕೋಝಿಕ್ಕೋಡ್‌ನ ಪೆರಂಬ್ರಾದ ಚಂಗರೋತ್ ಪಂಚಾಯತ್ ಕಚೇರಿಯ ಮುಂದೆ ದಲಿತ ಸಮುದಾಯಕ್ಕೆ ಸೇರಿದ ನಿರ್ಗಮಿತ ಅಧ್ಯಕ್ಷ ಉನ್ನಿ ವೆಂಗೇರಿ ಅವರನ್ನು ಅವಮಾನಿಸಲು "ಶುದ್ಧೀಕರಣ ಆಚರಣೆ" ನಡೆಸಲಾಗಿದೆ ಎಂಬ ಆರೋಪದ ಮೇಲೆ ಕೇರಳ ರಾಜ್ಯ ಪರಿಶಿಷ್ಟ...

ಮೆಸ್ಸಿ ಕಾರ್ಯಕ್ರಮದಲ್ಲಿ ಅವ್ಯವಸ್ಥೆ: ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ರಾಜೀನಾಮೆ

ಡಿಸೆಂಬರ್ 13ರಂದು ಫುಟ್ಬಾಲ್ ಆಟಗಾರ ಲಿಯೋನೆಲ್ ಮೆಸ್ಸಿ ಭೇಟಿ ನೀಡಿದ ಸಂದರ್ಭದಲ್ಲಿ ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅವ್ಯವಸ್ಥೆ ಉಂಟಾದ ಹಿನ್ನೆಲೆ, ಪಶ್ಚಿಮ ಬಂಗಾಳದ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಅವರು ತನ್ನ...

ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ‘ನಾವು ಮರೆತಿಲ್ಲ..’; ಎಂದ ಜಾಮಿಯಾ ವಿದ್ಯಾರ್ಥಿಗಳು

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದರು....

ವಿಬಿ-ಜಿ ರಾಮ್ ಜಿ ಬಿಲ್ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ‘ರಾಮ್ ಕಾ ನಾಮ್ ಬದ್ನಾಮ್ ನ ಕರೋ’ ಎಂದು ಟೀಕಿಸಿದ ಶಶಿ ತರೂರ್ 

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಲೋಕಸಭೆಯಲ್ಲಿ ವಿಬಿ-ಜಿ ರಾಮ್ ಜಿ ಮಸೂದೆಯನ್ನು ವಿರೋಧಿಸುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ, 1971 ರ ಜನಪ್ರಿಯ ಬಾಲಿವುಡ್...

ಸ್ಪೀಕರ್ ತನಿಖಾ ಸಮಿತಿ ರಚಿಸಿರುವುದನ್ನು ಪ್ರಶ್ನಿಸಿ ನ್ಯಾ. ಯಶವಂತ್ ವರ್ಮಾ ಅರ್ಜಿ : ಲೋಕಸಭೆ, ರಾಜ್ಯಸಭೆಗೆ ಸುಪ್ರೀಂ ಕೋರ್ಟ್ ನೋಟಿಸ್

ತನ್ನ ವಿರುದ್ಧ ವಾಗ್ದಂಡನೆ (ಮಹಾಭಿಯೋಗ) ವಿಧಿಸುವುದಕ್ಕಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ತ್ರಿಸದಸ್ಯ ಸಮಿತಿ ರಚಿಸಿರುವ ಲೋಕಸಭಾ ಸ್ಪೀಕರ್‌ ನಿರ್ಧಾರ ರದ್ದುಗೊಳಿಸುವಂತೆ ಕೋರಿ ಅಲಾಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರು ಸುಪ್ರೀಂ ಕೋರ್ಟ್‌ಗೆ...

ಪ್ರಯಾಣಿಕರಿಗೆ 200, 500 ರೂಪಾಯಿ ಮುಖಬೆಲೆಯ ಭಾರತೀಯ ನೋಟು ಕೊಂಡೊಯ್ಯಲು ಅನುಮತಿಸಿದ ನೇಪಾಳ

ಗಡಿಯಾಚೆಗಿನ ಪ್ರಯಾಣ ಮತ್ತು ವ್ಯಾಪಾರವನ್ನು ಸರಾಗಗೊಳಿಸುವ ಸಲುವಾಗಿ, ನೇಪಾಳ ಸರ್ಕಾರವು ರೂ.200 ಮತ್ತು ರೂ.500 ಮೌಲ್ಯದ ಭಾರತೀಯ ಕರೆನ್ಸಿ ನೋಟುಗಳನ್ನು ಹೊಂದುವ ಮೇಲಿದ್ದ ನಿರ್ಬಂಧಗಳನ್ನು ತೆಗೆದುಹಾಕಿದೆ. ಸೋಮವಾರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವು,...

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...