Homeಮುಖಪುಟಝಾನ್ಸಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : 10 ನವಜಾತ ಶಿಶುಗಳು ಸಜೀವ ದಹನ,16 ಗಂಭೀರ

ಝಾನ್ಸಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ : 10 ನವಜಾತ ಶಿಶುಗಳು ಸಜೀವ ದಹನ,16 ಗಂಭೀರ

- Advertisement -
- Advertisement -

ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶುಕ್ರವಾರ (ನ.15) ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 10 ನವಜಾತ ಶಿಶುಗಳು ಸಜೀವ ದಹನವಾಗಿದ್ದು, 16 ಶಿಶುಗಳು ಗಂಭೀರ ಸ್ಥಿತಿಯಲ್ಲಿವೆ ಎಂದು ವರದಿಯಾಗಿದೆ.

ರಾತ್ರಿ 10.45ರ ಸುಮಾರಿಗೆ ನವಜಾತ ಶಿಶುಗಳ ತೀವ್ರ ನಿಗಾ ಘಟಕ (ಎನ್‌ಐಸಿಯು) ದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದುರಂತದ ವೇಳೆ 37 ಶಿಶುಗಳನ್ನು ರಕ್ಷಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಅವಿನಾಶ್ ಕುಮಾರ್ ಹೇಳಿದ್ದಾರೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಈ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇಂದು (ನ.16) ಮುಂಜಾನೆ ಮಾಧ್ಯಮಗಳ ಜೊತೆ ಮಾತನಾಡಿರುವ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಸುಧಾ ಸಿಂಗ್, “ಗಾಯಗೊಂಡಿರುವ 16 ಮಕ್ಕಳ ಜೀವ ಉಳಿಸುವ ಪ್ರಯತ್ನ ನಡೆಯುತ್ತಿದೆ. ಎಲ್ಲಾ ತಜ್ಞ ವೈದ್ಯರು ಅತ್ಯಗತ್ಯ ವೈದ್ಯಕೀಯ ಸೌಲಭ್ಯಗಳೊಂದಿಗೆ ಮಕ್ಕಳ ಶುಶ್ರೂಷೆಯಲ್ಲಿ ತೊಡಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಕಿ ಅವಘಡದಲ್ಲಿ ಮಕ್ಕಳನ್ನು ಕಳೆದುಕೊಂಡಿರುವ ಪೋಷಕರಿಗೆ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಸಾಂತ್ವನ ಹೇಳಿದ್ದಾರೆ. ಮೃತ ಮಕ್ಕಳ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣೆಗಾಗಿ ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರು ಕೂಡ ಮಕ್ಕಳ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ದುರಂತದಲ್ಲಿ ಸಾವನ್ನಪ್ಪಿದ ನವಜಾತ ಶಿಶುಗಳ ಪೋಷಕರಿಗೆ ತಲಾ 5 ಲಕ್ಷ ರೂಪಾಯಿ ಹಾಗೂ ಗಾಯಗೊಂಡ ಮಕ್ಕಳ ಕುಟುಂಬಕ್ಕೆ ತಲಾ 50 ಸಾವಿರ ರೂ. ಪರಿಹಾರವನ್ನು ಸಿಎಂ ಪರಿಹಾರ ನಿಧಿಯಿಂದ ಘೋಷಣೆ ಮಾಡಲಾಗಿದೆ.

ಘಟನೆ ಕುರಿತು 12 ಗಂಟೆಗಳ ಒಳಗೆ ವರದಿ ಸಲ್ಲಿಸುವಂತೆ ಝಾನ್ಸಿಯ ವಿಭಾಗೀಯ ಆಯುಕ್ತ ಮತ್ತು ಡಿಐಜಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : ಮಣಿಪುರದಲ್ಲಿ ತೀವ್ರಗೊಂಡ ಹಿಂಸಾಚಾರ | ಆರು ಮಂದಿಯ ಅಪಹರಣ : ಮೂವರ ಶವ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಉದ್ವಿಗ್ನತೆ: ಯುದ್ಧ ಪೀಡಿತ ಸ್ಥಳಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸ್ಥಳಾಂತರಿಸಲು ತುರ್ತು ಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ, ಇಸ್ರೇಲ್, ಯುಎಇ, ಇರಾನ್ ಮತ್ತು ಕತಾರ್ ಸೇರಿದಂತೆ ಪೀಡಿತ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ವಾಸಿಸುವ ಕನ್ನಡಿಗರ ಸುರಕ್ಷತೆ ಮತ್ತು ಸ್ಥಳಾಂತರಿಸುವಿಕೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ...

ಅಮೆರಿಕ-ಇಸ್ರೇಲ್-ಇರಾನ್ ಉದ್ವಿಗ್ನತೆ: ಖಮೇನಿ ಹತ್ಯೆಯ ನಂತರ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಭುಗಿಲೆದ್ದ ಪ್ರತಿಭಟನೆಗಳು

ಶ್ರೀನಗರ: ಅಮೆರಿಕ-ಇಸ್ರೇಲ್ ಬಾಂಬ್ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ ನಂತರ ಶ್ರೀನಗರ ನಗರದ ಕೆಲವು ಭಾಗಗಳಲ್ಲಿ ಭಾನುವಾರ ಸ್ವಯಂಪ್ರೇರಿತ ಪ್ರತಿಭಟನೆಗಳು ನಡೆದವು. ಜಮ್ಮು ಮತ್ತು ಕಾಶ್ಮೀರದ...

ದೇವನಹಳ್ಳಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಖಾಸಗಿ ವಸತಿ ಶಾಲೆಯ ಮಾಲೀಕ, ಪ್ರಾಂಶುಪಾಲೆಯ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಖಾಸಗಿ ವಸತಿ ಶಾಲೆಯಲ್ಲಿ ಒಬ್ಬಳು ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ಮತ್ತೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ಮಾಲೀಕ ಹಾಗೂ ಪ್ರಾಂಶುಪಾಲೆಯಾಗಿರುವ ಆತನ...

‘ನಾಗರಿಕರ ಹತ್ಯೆ, ಹೊಸ ಯುದ್ದವನ್ನು ಅಮೆರಿಕ ಜನತೆ ಬಯಸುವುದಿಲ್ಲ’ : ಇರಾನ್‌ ಮೇಲಿನ ದಾಳಿಯನ್ನು ಖಂಡಿಸಿದ ನ್ಯೂಯಾರ್ಕ್ ಮೇಯರ್‌ ಝೊಹ್ರಾನ್ ಮಮ್ದಾನಿ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಮಿಲಿಟರಿ ನಡೆಸಿದ ದಾಳಿಗಳನ್ನು ನ್ಯೂಯಾರ್ಕ್ ನಗರದ ಮೇಯರ್ ಝೊಹ್ರಾನ್ ಮಮ್ದಾನಿ ಖಂಡಿಸಿದ್ದು, "ಅಕ್ರಮ ಆಕ್ರಮಣಕಾರಿ ಯುದ್ಧದಲ್ಲಿ ದುರಂತದ ಉಲ್ಬಣ" ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಇರಾನ್‌ನ ಶಾಲೆಗಳ ಮೇಲೆ ಇಸ್ರೇಲ್ ದಾಳಿ : ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನರು ಸಾವು

ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಮಿನಾಬ್ ನಗರದ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಶನಿವಾರ (ಫೆ.28) ಇಸ್ರೇಲ್ ನಡೆಸಿದ ದಾಳಿಯಲ್ಲಿ 108 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ. ಮಿನಾಬ್‌ನಲ್ಲಿರುವ ಶಜರೆಹ್...

ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಸಾವು : ದೃಢಪಡಿಸಿದ ಇರಾನ್

ಇಸ್ರೇಲ್- ಅಮೆರಿಕ ಶನಿವಾರ (ಫೆ.28) ಇರಾನ್‌ ಮೇಲೆ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಆಯಾತುಲ್ಲಾ ಅಲಿ ಖಮೇನಿ ಸಾವಿಗೀಡಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ದೃಢಪಡಿಸಿರುವುದಾಗಿ Al Jazeera...

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...