Homeಮುಖಪುಟಜಾರ್ಖಂಡ್‌ನಲ್ಲಿ ಕಲ್ಲು ಹೊಡೆದು ವ್ಯಕ್ತಿಯನ್ನು ಹತ್ಯೆಗೈದ ಪ್ರಕರಣ: 12 ಮಂದಿ ಬಂಧನ

ಜಾರ್ಖಂಡ್‌ನಲ್ಲಿ ಕಲ್ಲು ಹೊಡೆದು ವ್ಯಕ್ತಿಯನ್ನು ಹತ್ಯೆಗೈದ ಪ್ರಕರಣ: 12 ಮಂದಿ ಬಂಧನ

- Advertisement -
- Advertisement -

ಸ್ಥಳೀಯ ಬುಡಕಟ್ಟು ಸಂಪ್ರದಾಯಗಳಿಗೆ ವಿರುದ್ಧವಾಗಿ ಮರಗಳನ್ನು ಕಡಿದು ಅವರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಜಾರ್ಖಂಡ್‌ನ ಸಿಮ್ಡೆಗಾ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಲ್ಲು ತೂರಾಟ ನಡೆಸಿ ಸುಟ್ಟುಹಾಕಿದ್ದ ಗುಂಪೊಂದರ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪವಿತ್ರ ಮರಗಳು ಎಂದು ಕರೆಯಲಾಗುವ ಮರದ ಭಾಗಗಳನ್ನು ಕತ್ತರಿಸಿ ಮಾರಾಟ ಮಾಡುವ ಮೂಲಕ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಎಂದು ಆರೋಪಿಸಿ ಸುಮಾರು 100 ರಿಂದ 150 ಜನರ ಗುಂಪೊಂದು 32 ವರ್ಷದ ಸಂಜು ಪ್ರಧಾನ್ ಅವರನ್ನು ಹತ್ಯೆ ಮಾಡಿದ್ದರು.

ಜನವರಿ 4 ರಂದು ಕೊಲೆಬೀರಾ ಪೊಲೀಸ್ ಠಾಣಾ ವ್ಯಾಪ್ತಿಯ ಬೆಸ್ರಾಜರ ಬಜಾರ್ ಬಳಿ ಅವರ ಮನೆಯಿಂದ ಕೇವಲ 100 ಮೀಟರ್ ದೂರದಲ್ಲಿ ಜನಸಮೂಹವು ಕಲ್ಲಿನಿಂದ ಹೊಡೆದು ಅವರನ್ನು ಹತ್ಯೆಮಾಡಿ ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣದಲ್ಲಿ ಶುಕ್ರವಾರ ಮೂವರನ್ನು ಬಂಧಿಸಲಾಗಿದ್ದು, ಒಟ್ಟು ಆರೋಪಿಗಳ ಸಂಖ್ಯೆ 12ಕ್ಕೆ ಏರಿಕೆಯಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ‘ನನ್ನ ತಂಡಕ್ಕೆ ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ!’: ಟೆಸ್ಟ್‌‌ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ

ಈ ಪ್ರಕರಣದ ಪ್ರಮುಖ ಆರೋಪಿ ಗ್ರಾಮದ ಮುಖ್ಯಸ್ಥ ಸುಬುನ್ ಬುಡ್ ಅವರನ್ನು ಜನವರಿ 9 ರಂದು ಬಂಧಿಸಲಾಗಿತ್ತು.

’ಗ್ರಾಮದ ಮುಖ್ಯಸ್ಥರು ಮೃತ ಸಂಜು ಪ್ರಧಾನ್ ಅವರ ಹತ್ಯೆಗೆ ಮುಂಚೆ ಸಭೆಯನ್ನು ಕರೆದಿದ್ದರು. ಬಳಿಕ ಅವರನ್ನು ಅವರ ಮನೆಯಿಂದ ಹೊರಗೆ ಕರೆದು ಥಳಿಸಲು ಪ್ರಾರಂಭಿಸಿದ್ದರು. ಈ ಜನರ ಗುಂಪು ಮೊದಲು ಮೃತರನ್ನು ದೊಣ್ಣೆ ಮತ್ತು ಕಲ್ಲುಗಳಿಂದ ಹೊಡೆದಿದೆ. ಅವರು ಸತ್ತ ಬಳಿಕ ಬೆಂಕಿಗೆ ಎಸೆದಿದ್ದಾರೆ. ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಸಂಜು ಪ್ರಧಾನ್ ಅವರನ್ನು ರಕ್ಷಿಸಲು ಏನೂ ಮಾಡಲಿಲ್ಲ ಎಂದು ಮೃತನ ಪತ್ನಿ ಆರೋಪಿಸಿದ್ದಾರೆ.

ಪ್ರಕರಣ ಸಂಬಂಧ 13 ಮಂದಿ ಗುರುತಿಸಲ್ಪಟ್ಟ ಮತ್ತು 25 ಮಂದಿ ಅಪರಿಚಿತ ಜನರ ವಿರುದ್ಧ ಕೊಲೆ, ಮಾರಕಾಯುಧಗಳಿಂದ ಗಲಭೆ ಮತ್ತು ಕಾನೂನುಬಾಹಿರ ಸಭೆಗಾಗಿ ಕೇಸ್ ದಾಖಲಿಸಲಾಗಿದೆ. ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಈ ಬಗ್ಗೆ ತನಿಖೆ ನಡೆಸಿ ಮಾಹಿತಿ ನೀಡುವಂತೆ ಸಿಮ್ಡೇಗಾ ಅಧಿಕಾರಿಗಳಿಗೆ ಸೂಚಿಸಿದ್ದಾರೆ.


ಇದನ್ನೂ ಓದಿ: ಜಾರ್ಖಂಡ್‌: ’ಪವಿತ್ರ ಮರ’ ಕಡಿದ ಆರೋಪದಲ್ಲಿ ವ್ಯಕ್ತಿಯನ್ನು ಹತ್ಯೆ ಮಾಡಿದ 150 ಜನರ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...