Homeಮುಖಪುಟಜಾರ್ಖಂಡ್| ಪೊಲೀಸರೊಂದಿಗೆ ಘರ್ಷಣೆ ಆರೋಪ : ಬಿಜೆಪಿ ನಾಯಕರು ಸೇರಿ 12 ಸಾವಿರಕ್ಕೂ ಅಧಿಕ ಮಂದಿ...

ಜಾರ್ಖಂಡ್| ಪೊಲೀಸರೊಂದಿಗೆ ಘರ್ಷಣೆ ಆರೋಪ : ಬಿಜೆಪಿ ನಾಯಕರು ಸೇರಿ 12 ಸಾವಿರಕ್ಕೂ ಅಧಿಕ ಮಂದಿ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿ ನಡೆದ ಭಾರತೀಯ ಜನತಾ ಯುವಮೋರ್ಚ (ಬಿಜೆವೈಎಂ) ರ್‍ಯಾಲಿಯಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಘರ್ಷಣೆಯಲ್ಲಿ ಭಾಗಿಯಾದ ಆರೋಪದಲ್ಲಿ ಗುರುತಿಸಲಾದ 51 ವ್ಯಕ್ತಿಗಳು ಸೇರಿದಂತೆ 12,000ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಬಿಜೆಪಿ ಜಾರ್ಖಂಡ್ ಘಟಕದ ಅಧ್ಯಕ್ಷ ಬಾಬುಲಾಲ್ ಮರಾಂಡಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಮರ್ ಕುಮಾರ್ ಬೌರಿ, ಕೇಂದ್ರ ಸಚಿವ ಸಂಜಯ್ ಸೇಠ್ ಮತ್ತು ಕೇಂದ್ರದ ಮಾಜಿ ಸಚಿವ ಅರ್ಜುನ್ ಮುಂಡಾ ಸೇರಿದಂತೆ ಕೆಲವು ಪ್ರಮುಖ ಬಿಜೆಪಿ ನಾಯಕರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ ಎಂದು ತಿಳಿದು ಬಂದಿದೆ.

ರಾಂಚಿಯ ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಚಂದನ್ ಕುಮಾರ್ ಸಿನ್ಹಾ , “ಮ್ಯಾಜಿಸ್ಟ್ರೇಟ್ ಹೇಳಿಕೆಯ ಮೇರೆಗೆ ರಾಂಚಿಯ ಲಾಲ್‌ಪುರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅಂತಹವರ ವಿರುದ್ಧ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

51 ಗುರುತಿಸಿದ ವ್ಯಕ್ತಿಗಳು ಸೇರಿದಂತೆ 12,000 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಲಾಲ್‌ಪುರ ಪೊಲೀಸ್ ಠಾಣೆ ಪ್ರಭಾರಿ ರೂಪೇಶ್ ಕುಮಾರ್ ಸಿಂಗ್ ಹೇಳಿದ್ದಾರೆ.

ಈ ನಡುವೆ, ಶುಕ್ರವಾರದ ರ್‍ಯಾಲಿಯಲ್ಲಿ ಭಾರತೀಯ ಜನತಾ ಯುವ ಮೋರ್ಚಾ ಕಾರ್ಯಕರ್ತರ ಮೇಲೆ ಪೊಲೀಸ್ ಕ್ರಮವನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಶನಿವಾರ ಎಲ್ಲ ಜಿಲ್ಲಾ ಕೇಂದ್ರಗಳು ಮತ್ತು ಪೊಲೀಸ್ ಠಾಣೆಗಳ ಎದುರು ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಹೇಮಂತ್ ಸೊರೇನ್ ಸರ್ಕಾರದಿಂದ “ಅನ್ಯಾಯ” ಮತ್ತು “ಚುನಾವಣಾ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲತೆ” ವಿರುದ್ಧ ರಾಂಚಿಯಲ್ಲಿ ನಡೆದ ಪ್ರತಿಭಟನಾ ರ್‍ಯಾಲಿಯಲ್ಲಿ ಬ್ಯಾರಿಕೇಡ್‌ಗಳನ್ನು ಮುರಿದ ಕಾರಣಕ್ಕೆ ಪೊಲೀಸರು ಮತ್ತು ಬಿಜೆಪಿ ಯುವ ಘಟಕದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಬಿಜೆವೈಎಂ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಜಲಫಿರಂಗಿಗಳನ್ನು ಬಳಸಿದರು ಮತ್ತು ರಬ್ಬರ್ ಗುಂಡುಗಳನ್ನು ಹಾರಿಸಿದ್ದಾರೆ.

ಜಿಲ್ಲಾಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023 ರ ಸೆಕ್ಷನ್ 163 ಅನ್ನು ಜಾರಿಗೊಳಿಸಿದೆ. ರಾಂಚಿಯ ಮೊರಬಾಡಿ ಮೈದಾನದಲ್ಲಿ ಶುಕ್ರವಾರ ಬೆಳಿಗ್ಗೆ 11 ರಿಂದ ಸಾರ್ವಜನಿಕ ಸಭೆಗಳು, ರ್ಯಾಲಿಗಳು, ಧರಣಿಗಳು, ಪ್ರದರ್ಶನಗಳು ಮತ್ತು ಸಭೆಗಳನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ : ಮೇಲಾಧಿಕಾರಿಗಳು, ಪತ್ರಕರ್ತನಿಂದ ಕಿರುಕುಳ ಆರೋಪ : ದಲಿತ ಪೊಲೀಸ್ ಕಾನ್‌ಸ್ಟೇಬಲ್ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...