Homeಕರ್ನಾಟಕಜಾರ್ಖಂಡ್ ಮೂಲದ ರೋಹಿತ್ ಸಿಂಗ್ ಆತ್ಮಹತ್ಯೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಜಾರ್ಖಂಡ್ ಮೂಲದ ರೋಹಿತ್ ಸಿಂಗ್ ಆತ್ಮಹತ್ಯೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

- Advertisement -
- Advertisement -

ನಿವೃತ್ತ ಐಎಎಸ್ ಅಧಿಕಾರಿ ಪುತ್ರ ದೊಮ್ಮಲೂರಿನ ಅಪಾರ್ಟ್‌ಮೆಂಟ್‌ ಒಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕೊಳೆತ ಸ್ಥಿತಿಯಲ್ಲಿ ರೋಹಿತ್ ಸಿಂಗ್ ಅವರ ಶವ ಪತ್ತೆಯಾಗಿದೆ. ಜಾರ್ಖಂಡ್ ಮೂಲದ ನಿವೃತ್ತ ಐಎಎಸ್ ಅಧಿಕಾರಿ ಹರೇಂದ್ರ ಸಿಂಗ್ ಅವರ ಪುತ್ರ 27 ವರ್ಷದ ರೋಹಿತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಇಂದಿರಾನಗರ ಪೊಲೀಸರು, ರೋಹಿತ್ ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಹರೇಂದ್ರ ಸಿಂಗ್ ಅವರು ಜಾರ್ಖಂಡ್ ಮುಖ್ಯಮಂತ್ರಿ ಸಲಹೆಗಾರರಾಗಿದ್ದರು. ಅವರ ಪುತ್ರನೇ ರೋಹಿತ್ ಸಿಂಗ್.

ಅವಿವಾಹಿತರಾಗಿದ್ದ ರೋಹಿತ್ ಸಿಂಗ್, ಕೆಲವು ವರ್ಷಗಳಿಂದ ದೊಮ್ಮಲೂರಿನ ಸಾಯಿಕೃಷ್ಣ  ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸ್ತವ್ಯ ಹೂಡಿದ್ದರು. ಎಂಜಿ ರಸ್ತೆಯಲ್ಲಿರುವ ಕೋಟಕ್ ಮಹೇಂದ್ರ ಬ್ಯಾಂಕ್‌ನಲ್ಲಿ ಡೆಪ್ಯೂಟಿ ಮ್ಯಾನೇಜರ್ ಆಗಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಜಾಗತಿಕ ಮಾದ್ಯಮಗಳಲ್ಲಿ ಸುದ್ದಿಯಾದ ಪ್ರಧಾನಿಯ ದ್ವೇಷ ಭಾಷಣ: ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಟೀಕೆಗೆ ಗುರಿಯಾದ...

0
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜಸ್ಥಾನದ ಬನ್ಸ್ವಾರಾದಲ್ಲಿ ಮುಸ್ಲಿಮರ ವಿರುದ್ಧ ಮಾಡಿದ್ದ ದ್ವೇಷ ಭಾಷಣ ಜಾಗತಿಕ ಮಾದ್ಯಮಗಳಲ್ಲಿ ಭಾರೀ ಸುದ್ದಿಯಾಗಿದ್ದು, ಮೋದಿ ಮತ್ತೆ ಅಂತರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದ್ದಾರೆ. 'ಕೊಳಕು ಭಾಷಣ’ ಆದರೆ...