Homeಮುಖಪುಟಜಾರ್ಖಂಡ್‌: ವಾಮಾಚಾರದ ಆರೋಪ, ಮಹಿಳೆಗೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿದ ಗ್ರಾಮಸ್ಥರು

ಜಾರ್ಖಂಡ್‌: ವಾಮಾಚಾರದ ಆರೋಪ, ಮಹಿಳೆಗೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿದ ಗ್ರಾಮಸ್ಥರು

- Advertisement -
- Advertisement -

ವಾಮಾಚಾರ ಮಾಡುತ್ತಿದ್ದ ಆರೋಪದಲ್ಲಿ 55 ವರ್ಷದ ಮಹಿಳೆಯೊಬ್ಬರಿಗೆ ಬಿದಿರಿನ ಕೋಲುಗಳಿಂದ ಮನಬಂದಂತೆ ಥಳಿಸಿ, ಚಿತ್ರಹಿಂಸೆ ಕೊಟ್ಟು ವಿಷ ಕುಡಿಸಿ ಹತ್ಯೆಗೈದ ಹೃದಯ ವಿದ್ರಾವಕ ಘಟನೆ ಜಾರ್ಖಂಡ್‌ನಲ್ಲಿ ಗುರುವಾರ (ಜೂ.9) ಸಂಜೆ ನಡೆದಿದ್ದು, ಪ್ರಕರಣದಲ್ಲಿ 24 ಜನರನ್ನು ಬಂಧಿಸಲಾಗಿದೆ.

ಜಾರ್ಖಂಡ್‌ನ ಲೋಹರ್ದಗಾದ ಗಣೇಶಪುರ ಗ್ರಾಮದಲ್ಲಿ ಹೊಲೊ ದೇವಿ ಎಂದು ಗುರುತಿಸಲಾದ ಮಹಿಳೆಗೆ ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿದ ಗ್ರಾಮಸ್ಥರು ಆಕೆಯ ಮೃತದೇಹವನ್ನು ಗೋಣಿಚೀಲದಲ್ಲಿ ಹಾಕಿ ಗ್ರಾಮದ ಸಮೀಪವಿರುವ ಧಾರ್ಧರಿಯಾ ಜಲಪಾತಕ್ಕೆ ಎಸೆದು, ವಿಕೃತಿ ಮೆರೆದಿದ್ದರು.

ಮಹಿಳೆಯ ಕುಟುಂಬಸ್ಥರಿಂದ ಮಾಹಿತಿ ಪಡೆದ ಪೊಲೀಸರು ಗ್ರಾಮಕ್ಕೆ ಆಗಮಿಸಿ ಜಲಪಾತದ ತಳದಿಂದ ಮೃತದೇಹವನ್ನು ಹೊರತೆಗೆದಿದ್ದಾರೆ. ತಕ್ಷಣ ಕಾರ್ಯರೂಪಕ್ಕೆ ಬಂದ ಪೊಲೀಸರು ಸೆರೆಂಗ್‌ಡಾಗ್ ಪೊಲೀಸ್ ಠಾಣೆಯಲ್ಲಿ ಹೆಸರಿಸಲಾದ 27 ಮಂದಿ ಮತ್ತು 20 ಕ್ಕೂ ಹೆಚ್ಚು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಮೂರೂವರೆ ವರ್ಷದಲ್ಲಿ 752 ಕೋಮು ಪ್ರಕರಣಗಳನ್ನು ಕಂಡ ’ಸೌಹಾರ್ದ ಕರ್ನಾಟಕ’

“ಇದುವರೆಗೆ ಪ್ರಕರಣದಲ್ಲಿ ನಾವು 24 ಆರೋಪಿಗಳನ್ನು ಬಂಧಿಸಿದ್ದೇವೆ, ಇತರರ ಹುಡುಕಾಟ ಇನ್ನೂ ಮುಂದುವರೆದಿದೆ” ಎಂದು ಲೋಹರ್ಡಗಾ ಎಸ್‌ಪಿ ಆರ್.ರಾಮ್‌ಕುಮಾರ್ ಹೇಳಿದ್ದಾರೆ.

ಈ ವರ್ಷದ ಜನವರಿಯಿಂದ ಗ್ರಾಮದಲ್ಲಿ ಐವರು ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಇದಕ್ಕೆ ಮಹಿಳೆ ವಾಮಾಚಾರ ಮಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದರು. ಆದರೆ, ಇದು ಮೂಢನಂಬಿಕೆಗೆ ಸಂಬಂಧಿಸಿದೆ ಎಂದು ಮೃತ ಮಹಿಳೆಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಮೃತ ಮಹಿಳೆಯ ಕುಟುಂಬದ ಸದಸ್ಯೆ ಚಂದ್ರಮಣಿ ದೇವಿ ಹೇಳುವಂತೆ, “ಗ್ರಾಮಸ್ಥರು ಬೆಳಿಗ್ಗೆ 6 ಗಂಟೆಗೆ ಕರೆದ ಪಂಚಾಯತಿ  ಕರೆದರು,  ಸಂಜೆಯವರೆಗೂ ನಡೆಯಿತು. ಬಳಿಕ ಗ್ರಾಮಸ್ಥರು ಮಹಿಳೆಗೆ ಮರಣದಂಡನೆ ವಿಧಿಸಿದರು. ಆಕೆಗೆ ಮೊದಲು ಎಲ್ಲರು ಹೊಡೆದರು. ಬಳಿಕ  ಬಿದಿರಿನ ಕೋಲುಗಳಿಂದ ಅರ್ಧ ಸಾಯುವಂತೆ ಮಾಡಿ, ನಂತರ ವಿಷ ಕುಡಿಸಿ ಆಕೆಯನ್ನು ಹೊಡೆದು ಕೊಂದರು. ನೀರಿಗಾಗಿ ಕೂಗಾಡುತ್ತಿದ್ದರೂ ಗ್ರಾಮಸ್ಥರು ನೀರು ಕೊಡಲು ಬಿಡಲಿಲ್ಲ’ ಎಂದು ನೋವು ತೋಡಿಕೊಂಡಿದ್ದಾರೆ. ಅವರು ಸತ್ತಿದ್ದಾರೆ ಎಂದು ಗ್ರಾಮಸ್ಥರಿಗೆ ಖಾತ್ರಿಯಾದ ನಂತರ, ಮೃತದೇಹವನ್ನು ಗೋಣಿಚೀಲದಲ್ಲಿ ಹಾಕಿ ಗ್ರಾಮದ ಸಮೀಪವಿರುವ ಧಾರ್ಧರಿಯಾ ಜಲಪಾತದ ಮೇಲಿನಿಂದ ಆಕೆಯನ್ನು ಎಸೆದರು ಎಂದು ಘಟನೆಯನ್ನು ವಿವರಿಸಿದ್ದಾರೆ.

ಬುಧವಾರ ನಡೆದ ಮತ್ತೊಂದು ಘಟನೆಯಲ್ಲಿ, ಜಾರ್ಖಂಡ್‌ನ ಗುಮ್ಲಾದಲ್ಲಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಇಬ್ಬರು ಬುಡಕಟ್ಟು ಯುವಕರಿಗೆ ಗ್ರಾಮಸ್ಥರುನ ಬೆಂಕಿ ಹಚ್ಚಿದ್ದಾರೆ. ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಲಾಯಿತಾದರೂ ಒಬ್ಬರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ರಾಜ್ಯದ 11 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾಯಾಂಗದ ವಿರುದ್ಧ ಟೀಕೆ ಆರೋಪ: ಸಿಜೆಪಿ ವಕ್ತಾರ ಸೌರವ್ ದಾಸ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಪಿಐಎಲ್

ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...