Homeಮುಖಪುಟಜಾರ್ಖಂಡ್ | ಪ್ರಚಾರಕ್ಕೆ ತೆರಳಿದ್ದ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್‌ಗೆ ತಡೆ!

ಜಾರ್ಖಂಡ್ | ಪ್ರಚಾರಕ್ಕೆ ತೆರಳಿದ್ದ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್‌ಗೆ ತಡೆ!

- Advertisement -
- Advertisement -

ಜಾರ್ಖಂಡ್‌ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಹಾರಾಟವನ್ನು ತೆಯಲಾಗಿದೆ ಎಂದು ಪಕ್ಷವೂ ಆರೋಪಿಸಿದ್ದು, ”ಚುನಾವಣಾ ಪ್ರಚಾರವನ್ನು ನಿಲ್ಲಿಸಲು ಇದು ಹೊಸ ಮಾರ್ಗವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಜಾರ್ಖಂಡ್

ಟೇಕಾಫ್‌ಗೆ ಏರ್ ಟ್ರಾಫಿಕ್ ಕಂಟ್ರೋಲ್ ಅನುಮತಿ ನೀಡದ ಹಿನ್ನೆಲೆಯಲ್ಲಿ ಶುಕ್ರವಾರ ಜಾರ್ಖಂಡ್‌ನ ಗೊಡ್ಡಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಲಿಕಾಪ್ಟರ್ ಅನ್ನು ತಡೆಯಲಾಗಿದೆ. ಇದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದು, ಅಂತಿಮ ಹಂತದ ವಿಧಾನಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ರಾಹುಲ್ ಗಾಂಧಿ ಅವರ ಚುನಾವಣಾ ಪ್ರಚಾರವನ್ನು ದಿಕ್ಕು ತಪ್ಪಿಸುವ ಉದ್ದೇಶಪೂರ್ವಕ ಪ್ರಯತ್ನ ಇದಾಗಿದೆ ಎಂದು ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಹೆಲಿಕಾಪ್ಟರ್‌ಗೆ ಸುಮಾರು 45 ನಿಮಿಷಗಳವರೆಗೆ ಕ್ಲಿಯರೆನ್ಸ್ ಸಿಗಲಿಲ್ಲ ಮತ್ತು ಇನ್ನೂ ಅವರ ಹೆಲಿಕಾಪ್ಟರ್ ಅಲ್ಲಿಯೆ ಇದೆ ಎಂದು ಟೈಮ್ಸ್ ಆಫ್ ಇಂಡಿಯಾ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಮಾಡಿರುವ ವರದಿಯಲ್ಲಿ ಹೇಳಿದೆ. ಗೊಡ್ಡಾದಿಂದ ಸುಮಾರು 150 ಕಿಮೀ ದೂರದಲ್ಲಿರುವ ಚಕೈಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಕಾರಣ ಇದು ಏರ್‌ ಟ್ರಾಪಿಕ್‌ ಕಂಟ್ರೋಲ್ ಮಾಡುವವರ ಉದ್ದೇಶಪೂರ್ವಕ ಕೃತ್ಯ ಎಂದು ಕಾಂಗ್ರೆಸ್ ಆರೋಪಿಸಿದೆ. ಜಾರ್ಖಂಡ್

“ಪ್ರಧಾನಿ ದಿಯೋಗರ್‌ನಲ್ಲಿದ್ದಾರೆ ಎಂಬ ಕಾರಣಕ್ಕಾಗಿ, ರಾಹುಲ್ ಗಾಂಧಿ ಅವರಿಗೆ ಆ ಪ್ರದೇಶವನ್ನು ದಾಟಲು ಅವಕಾಶ ನೀಡಲಿಲ್ಲ … ಈ ಬಗ್ಗೆ ಪ್ರೋಟೋಕಾಲ್ ಇದೆ ಎಂಬುವುದು ನಮಗೆ ತಿಳಿದಿದೆ. ಆದರೆ ಕಾಂಗ್ರೆಸ್ 70 ವರ್ಷಗಳ ಕಾಲ ದೇಶವನ್ನು ಆಳಿತ್ತು. ಆದರೆ, ಯಾವುದೇ ವಿರೋಧ ಪಕ್ಷದ ನಾಯಕನಿಗೆ ಎಂದಿಗೂ ಹೀಗೆ ಸಂಭವಿಸಿಲ್ಲ… ಇದು ಸ್ವೀಕಾರಾರ್ಹವಲ್ಲ” ಎಂದು ಮಹಾಗಾಮಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದೀಪಿಕಾ ಪಾಂಡೆ ಸಿಂಗ್ ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ಬಿವಿ ಶ್ರೀನಿವಾಸ್ ಅವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, “ಅಷ್ಟಕ್ಕೂ ಜಾರ್ಖಂಡ್‌ನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಹಾರಾಟವನ್ನು ತಡೆಯಲು ಕಾರಣವೇನು?ಚುನಾವಣಾ ಪ್ರಚಾರವನ್ನು ನಿಲ್ಲಿಸಲು ಇದು ಹೊಸ ಮಾರ್ಗವೇ?” ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯ ಕಾರಣಕ್ಕೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಹೆಲಿಕಾಪ್ಟರ್ ಟೇಕ್ ಆಫ್ ಆಗುವುದನ್ನು ಇತ್ತಿಚೆಗೆ ವಿಳಂಬ ಮಾಡಲಾಗಿತ್ತು. ಈ ಬಗ್ಗೆ ಅವರು ರಾಷ್ಟ್ರಪತಿಗಳ ಮಧ್ಯಸ್ಥಿಕೆಯನ್ನು ಕೋರಿದ್ದರು.

ಹೇಮಂತ್ ಸೊರೇನ್ ಅವರ ಪತ್ನಿ ಕಲ್ಪನಾ ಸೊರೆನ್ ಅವರು ಲತೇಹರ್‌ನಲ್ಲಿ ಪ್ರಚಾರಕ್ಕೆ ತೆರಳದಂತೆ ತಡೆಯಲಾಗಿದೆ ಎಂದು ಇತ್ತಿಚೆಗೆ ಆರೋಪಿಸಿದ್ದರು. ವಿರೋಧ ಪಕ್ಷವು ಜನರನ್ನು ತಲುಪುವ ತನ್ನ ಪ್ರಯತ್ನಗಳಿಗೆ ಬಿಜೆಪಿ ಅಡ್ಡಿ ಮಾಡುತ್ತಿವೆ ಎಂದು ಅವರು ಆರೋಪಿಸಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ | 12 ಲಕ್ಷ ಕಬ್ಬು ಕಡಿಯುವವರು ಮತದಾನದಿಂದ ವಂಚಿತರಾಗುವ ಭೀತಿ; ಕೋರ್ಟ್‌ಗೆ ಅರ್ಜಿ

ಮಹಾರಾಷ್ಟ್ರ | 12 ಲಕ್ಷ ಕಬ್ಬು ಕಡಿಯುವವರು ಮತದಾನದಿಂದ ವಂಚಿತರಾಗುವ ಭೀತಿ; ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...