HomeUncategorizedಜಾರ್ಖಂಡ್ | ಸಿಎಂ ವಿರುದ್ಧ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೆ ಪಕ್ಷದೊಳಗೆಯೆ 5 ಕೋಟಿ ರೂ. ನೀಡಲು ಮುಂದಾದ...

ಜಾರ್ಖಂಡ್ | ಸಿಎಂ ವಿರುದ್ಧ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೆ ಪಕ್ಷದೊಳಗೆಯೆ 5 ಕೋಟಿ ರೂ. ನೀಡಲು ಮುಂದಾದ ಬಿಜೆಪಿ!

- Advertisement -
- Advertisement -

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ವಿರುದ್ಧ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದಾದರೂ ಬಿಜೆಪಿ ಅಭ್ಯರ್ಥಿಗೆ 5 ಕೋಟಿ ರೂ.ಗಳನ್ನು ನೀಡುವುದಾಗಿ ಪಕ್ಷವೆ “ಆಮಿಷ” ಒಡ್ಡುತ್ತಿದೆ ಎಂದು ಆಡಳಿತರೂಢ ಜೆಎಂಎಂ ನಾಯಕರೊಬ್ಬರು ಹೇಳಿದ್ದಾರೆ.

ಜೆಎಂಎಂ ನಾಯಕ ಮನೋಜ್ ಪಾಂಡೆ ಭಾನುವಾರ ಸುದ್ದಿ ಸಂಸ್ಥೆ ಎಎನ್‌ಐ ಜೊತೆಗೆ ಮಾತನಾಡುತ್ತಾ, ಸಿಎಂ ಹೇಮಂತ್ ಸೊರೆನ್ ಅವರ ಕ್ಷೇತ್ರವಾದ ಬರ್ಹೈತ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಯಾವುದೇ ಅಭ್ಯರ್ಥಿಯನ್ನು ಹುಡುಕಲು ಸಾಧ್ಯವಾಗುತ್ತಿಲ್ಲ” ಎಂದು ಹೇಳಿದ್ದಾರೆ. ಜಾರ್ಖಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅವರು ಅದಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ, ಆದರೆ ಇನ್ನೂ ಸರಿಯಾದ ಅಭ್ಯರ್ಥಿಯನ್ನು ಹುಡುಕಲು ಸಾಧ್ಯವಾಗುತ್ತಿಲ್ಲ. ಈಗ ಅವರು ಅಭ್ಯರ್ಥಿಯನ್ನು ಸೆಳೆಯಲು ಪಕ್ಷದೊಳಗೆ 5 ಕೋಟಿ ರೂಪಾಯಿಗಳ ಪ್ಯಾಕೇಜ್ ಘೋಷಿಸಿದ್ದಾರೆ ಎಂಬ ಮಾಹಿತಿ ನಮಗೆ ಬಂದಿದೆ” ಎಂದು ಅವರು ಹೇಳಿದ್ದಾರೆ.

ಈಗ ಅವರು ಹಣ ನೀಡಿ ಅಭ್ಯರ್ಥಿಯನ್ನು ನಿಲ್ಲಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಯಾರಾದರೂ ರಾಜಕೀಯವಾಗಿ ಹುತಾತ್ಮರಾಗಲು ಬಯಸುತ್ತಾರೆಯೆ ಎಂದು ಅವರು ಕೇಳಿದ್ದಾರೆ.

ಬಿಜೆಪಿ ಹೀಗೇಕೆ ಮಾಡುತ್ತಿದೆ ಎಂಬ ಉತ್ತರಿಸಿದ ಪಾಂಡೆ, ಕ್ಷೇತ್ರದಲ್ಲಿ ಬಿಜೆಪಿಗೆ 100-150 ಮತಗಳು ಸಿಗುವುದಿಲ್ಲ ಎಂದು ಅವರಿಗೆ ತಿಳಿದಿದೆ. ಆದ್ದರಿಂದ ಯಾವುದೇ ಅಭ್ಯರ್ಥಿ ಸಿಎಂ ಸೋರೆನ್ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

“ಬಿಜೆಪಿ ಅಭ್ಯರ್ಥಿ ಕೇವಲ 250 ಮತಗಳನ್ನು ಪಡೆಯುತ್ತಾನೆ ಎಂದು ಎಂದರೆ ಅದು ಎಷ್ಟು ಅವಮಾನಕರ ವಿಷಯ. ಅದಕ್ಕಾಗಿಯೇ ಅವರು ಯಾವುದೇ ಅಭ್ಯರ್ಥಿಯನ್ನು ಕ್ಷೇತ್ರದಲ್ಲಿ ಸೊರೆನ್ ವಿರುದ್ಧ ನಿಲ್ಲಿಸುವುದಿಲ್ಲ. ಅಥವಾ ಹಣದ ದುರಾಸೆಗೆ ಯಾರಾದರೂ ನಾಮಪತ್ರ ಸಲ್ಲಿಸಿದರೂ ಸಲ್ಲಿಸುತ್ತಾರೆ” ಎಂದು ಅವರು ಹೇಳಿದ್ದಾರೆ.

ಗುರುವಾರ ಬರ್ಹೈತ್ ಕ್ಷೇತ್ರದಿಂದ ಸಿಎಂ ಸೋರೆನ್ ನಾಮಪತ್ರ ಸಲ್ಲಿಸಿದರೆ, ಅವರ ಪತ್ನಿ ಕಲ್ಪನಾ ಸೊರೆನ್ ಗಂಡೇ ವಿಧಾನಸಭಾ ಸ್ಥಾನಕ್ಕೆ ದಾಖಲೆಗಳನ್ನು ಸಲ್ಲಿಸಿದ್ದಾರೆ. ಬರ್ಹೈತ್ ಸಂತಾಲ್ ಪರಗಾನಾ ಪ್ರದೇಶದ ಅಡಿಯಲ್ಲಿ ಬರುತ್ತದೆ. ಇದನ್ನು ಜೆಎಂಎಂ ಭದ್ರಕೋಟೆ ಎಂದೆ ಪರಿಗಣಿಸಲಾಗಿದೆ.

2019 ರ ವಿಧಾನಸಭಾ ಚುನಾವಣೆಯಲ್ಲಿ, ಸೊರೆನ್ ಸಂತಾಲ್ ಪ್ರದೇಶದಲ್ಲಿ ಬರ್ಹೈತ್ ಮತ್ತು ದುಮ್ಕಾ ಎಂಬ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಈ ಎರಡೂ ಸ್ಥಾನಗಳಲ್ಲಿ ಅವರು ಗೆದ್ದಿದ್ದರು.

ಅವರು ಬಿಜೆಪಿಯ ಸೈಮನ್ ಮಾಲ್ಟೊ ಅವರನ್ನು 25,740 ಮತಗಳಿಂದ ಸೋಲಿಸುವ ಮೂಲಕ ಬರ್ಹೈತ್ ಕ್ಷೇತ್ರವನ್ನು ಮತ್ತು ಲೋಯಿಸ್ ಮರಾಂಡಿ ದುಮ್ಕಾ ಕ್ಷೇತ್ರದಲ್ಲಿ 13,188 ಮತಗಳ ಅಂತರದಿಂದ ಸೋಲಿಸಿದ್ದರು. ನಂತರ ಸೊರೆನ್ ಅವರು ದುಮ್ಕಾ ಸ್ಥಾನವನ್ನು ತೆರವು ಮಾಡಿದ್ದರು.

81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಗೆ ನವೆಂಬರ್ 13 ಮತ್ತು 20 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 20 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ದಾನದ ಹೆಸರಿನಲ್ಲಿ ‘ಧಾರ್ಮಿಕ ನಂಬಿಕೆ’ಯನ್ನು ಪ್ರಭಾವಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ – ಉಪ ರಾಷ್ಟ್ರಪತಿ ಜಗದೀಪ್ ಧನಕರ್

ದಾನದ ಹೆಸರಿನಲ್ಲಿ ‘ಧಾರ್ಮಿಕ ನಂಬಿಕೆ’ಯನ್ನು ಪ್ರಭಾವಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ – ಉಪ ರಾಷ್ಟ್ರಪತಿ ಜಗದೀಪ್ ಧನಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....