Homeಮುಖಪುಟಹೇಮಂತ್ ಸೊರೆನ್ ಬಂಧನ: ಸೇಡಿನ ರಾಜಕೀಯ ಎಂದ ಪ್ರತಿಪಕ್ಷಗಳ ನಾಯಕರು

ಹೇಮಂತ್ ಸೊರೆನ್ ಬಂಧನ: ಸೇಡಿನ ರಾಜಕೀಯ ಎಂದ ಪ್ರತಿಪಕ್ಷಗಳ ನಾಯಕರು

- Advertisement -
- Advertisement -

ಜಾರ್ಖಾಂಡ್‌ ಸಿಎಂ ಹೇಮಂತ್ ಸೊರೆನ್ ಅವರನ್ನು ನಿನ್ನೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು  ಬಂಧಿಸಿದ್ದಾರೆ. ಭೂ ಹಗರಣ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ನಾಯಕ ಮತ್ತು ಜಾರ್ಖಾಂಡ್‌ ಸಿಎಂ ಹೇಮಂತ್ ಸೊರೆನ್ ಅವರನ್ನು 7 ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಳಿಕ ಅವರನ್ನು ಬಂಧಿಸಿದ್ದರು. ಈ ಬಂಧನವು ಮೋದಿ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ರಾಜಕೀಯ ಜಟಾಪಟಿಗೆ ಕಾರಣವಾಗಿದ್ದು, ಸುರೇನ್‌ ಬಂಧನವನ್ನು ವಿರೋಧ ಪಕ್ಷದ ನಾಯಕರು ರಾಜಕೀಯ ಸೇಡಿನ ಕ್ರಮ ಎಂದು ಬಣ್ಣಿಸಿದ್ದಾರೆ.

ಜೆಎಂಎಂ ಶಾಸಕರು ಇಡಿ ಕ್ರಮವನ್ನು ಖಂಡಿಸಿದ್ದು, ದಾಳಿಗಳು ಮತ್ತು ಮುಖ್ಯಮಂತ್ರಿಯ ಬಂಧನವು ಉನ್ನತವಾದ ರಾಜಕೀಯ ಪಿತೂರಿಯಿಂದ ಕೂಡಿದೆ ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋರೆನ್ ವಿರುದ್ಧದ ಕ್ರಮವು ಸಂಯುಕ್ತ ವ್ಯವಸ್ಥೆಯನ್ನು ತೊಡೆದು ಹಾಕುವುದರ ಭಾಗವಾಗಿದೆ ಎಂದು ಹೇಳಿದ್ದಾರೆ. ಪಿಎಂಎಲ್‌ಎ ನಿಬಂಧನೆಗಳನ್ನು ವಿಧಿಸುವ ಮೂಲಕ ವಿರೋಧ ಪಕ್ಷದ ನಾಯಕರನ್ನು ಬೆದರಿಸುವುದು ಬಿಜೆಪಿಯ ಟೂಲ್ ಕಿಟ್‌ನ ಭಾಗವಾಗಿದೆ. ಷಡ್ಯಂತ್ರದ ಭಾಗವಾಗಿ ಪ್ರತಿಪಕ್ಷದ ಸರ್ಕಾರಗಳನ್ನು ಒಂದೊಂದಾಗಿ ಅಸ್ಥಿರಗೊಳಿಸುವ ಬಿಜೆಪಿಯ ಕೆಲಸ ಮುಂದುವರೆದಿದೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ಸಂಸ್ಥೆಗಳಾದ ಇಡಿ, ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಮತ್ತು ಆದಾಯ ತೆರಿಗೆ (ಐಟಿ) ಇಲಾಖೆಗಳು ಸರ್ಕಾರಿ ಸಂಸ್ಥೆಗಳಾಗಿ ಉಳಿದಿಲ್ಲ. ಬಿಜೆಪಿ ವಿರೋಧಿಗಳನ್ನು ತೊಡೆದುಹಾಕುವ ಕೋಶವಾಗಿ ಮಾರ್ಪಟ್ಟಿವೆ. ಸ್ವತಃ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿ ಅಧಿಕಾರದ ವ್ಯಾಮೋಹದಲ್ಲಿ ಪ್ರಜಾಪ್ರಭುತ್ವವನ್ನು ನಾಶಮಾಡುವ ಅಭಿಯಾನವನ್ನು ನಡೆಸುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

CPI(ML)ನ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಅವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಸೋರೆನ್ ಅವರ ಬಂಧನವು ಮೋದಿ ಆಡಳಿತದಿಂದ ಪ್ರತಿಪಕ್ಷಗಳ ವಿರುದ್ಧ ನಡೆಯುತ್ತಿರುವ ಯುದ್ಧದ ಭೀಕರತೆಯನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ, ತಮ್ಮ ಪಕ್ಷವು ಜಾರ್ಖಂಡ್‌ನ ಹೊಸ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಅವರನ್ನು ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

ಶಿವಸೇನೆಯ ಉದ್ಧವ್ ಠಾಕ್ರೆ ಬಣದ ರಾಜ್ಯಸಭಾ ಸಂಸದ ಪ್ರಿಯಾಂಕಾ ಚತುರ್ವೇದಿ ಅವರು ಈ ಕುರಿತು ಪ್ರತಿಕ್ರಿಯಸಿದ್ದು, ಇಡಿ, ಸಿಬಿಐ ಮತ್ತು ಐಟಿ ಇಲಾಖೆಯು ಬಿಜೆಪಿಯ ಆಸ್ಥಾನಗಳಾಗಿ ಮಾರ್ಪಟ್ಟಿದೆ ಎಂದು ಬರೆದಿದ್ದಾರೆ.

ಜಾರ್ಖಂಡ್ ಮುಖ್ಯಮಂತ್ರಿ ಬಂಧನದ ಕುರಿತು ಚರ್ಚಿಸಲು INDIA ಮೈತ್ರಿಕೂಟದ ನಾಯಕರು ಬುಧವಾರ ಸಂಜೆ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಸಭೆ ನಡೆಸಿದ್ದಾರೆ. ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಡಿಎಂಕೆ ನಾಯಕ ಟಿ.ಆರ್.ಬಾಲು ಸೇರಿ ಪ್ರತಿಪಕ್ಷಗಳ ಹಲವು ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು.

ಹೇಮಂತ್ ಸೊರೆನ್ ಅವರ ಬಂಧನದ ಬಳಿಕ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಪಕ್ಷದ ಹಿರಿಯ ನಾಯಕ ಮತ್ತು ರಾಜ್ಯದ ಸಾರಿಗೆ ಸಚಿವ ಚಂಪೈ ಸೊರೆನ್ ಅವರನ್ನು ಜೆಎಂಎಂನ ಶಾಸಕಾಂಗ ಪಕ್ಷದ ನಾಯಕ ಎಂದು ಘೋಷಿಸಲಾಗಿದೆ. ಈ ಮೊದಲು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲು ಕೇಂದ್ರ ಸರ್ಕಾರಕ್ಕೆ ತನ್ನ ಬಂಧನವು ಅವಕಾಶ ನೀಡುತ್ತದೆ ಎಂದು ಹೇಮಂತ್ ಸೊರೆನ್ ಆತಂಕ ವ್ಯಕ್ತಪಡಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಬುಧವಾರ ಜಾರ್ಖಂಡ್ ಪೊಲೀಸರು ಹೇಮಂತ್‌ ಸೋರೆನ್ ನೀಡಿದ ದೂರಿನ ಆಧಾರದ ಮೇಲೆ  ಹಿರಿಯ ಇಡಿ ಅಧಿಕಾರಿಗಳ ವಿರುದ್ಧ ಎಸ್ಸಿ, ಎಸ್ಟಿ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇಡಿ ಅಧಿಕಾರಿಗಳು ವಿಚಾರಣೆಯ ನೆಪದಲ್ಲಿ ನನಗೆ ಕಿರುಕುಳ ಕೊಡುತ್ತಿದ್ದಾರೆ. ಇಡಿ ಕ್ರಮವು ನಮ್ಮ ಸಮುದಾಯಕ್ಕೆ ಅಪಮಾನವನ್ನುಂಟು ಮಾಡಿದೆ ಎಂದು ಹೇಮಂತ್ ಸೊರೇನ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.

ಇದನ್ನು ಓದಿ: ಹೇಮಂತ್ ಸೊರೆನ್ ಅರೆಸ್ಟ್‌: ಜಾರ್ಖಾಂಡ್‌ಗೆ ನೂತನ ಸಿಎಂ

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...