Homeಮುಖಪುಟಜಾರ್ಖಂಡ್‌: ಕಾಂಗ್ರೆಸ್‌ OBC ವಿಭಾಗದ ಪ್ರಧಾನ ಕಾರ್ಯದರ್ಶಿ ಮೇಲೆ ಗುಂಡಿನ ದಾಳಿ

ಜಾರ್ಖಂಡ್‌: ಕಾಂಗ್ರೆಸ್‌ OBC ವಿಭಾಗದ ಪ್ರಧಾನ ಕಾರ್ಯದರ್ಶಿ ಮೇಲೆ ಗುಂಡಿನ ದಾಳಿ

- Advertisement -
- Advertisement -

ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯಲ್ಲಿ ಜಾರ್ಖಂಡ್ ಪ್ರದೇಶ ಕಾಂಗ್ರೆಸ್ ಸಮಿತಿಯ ಒಬಿಸಿ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಅವರ ಮೇಲೆ ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ಜಾರ್ಖಂಡ್ ಪ್ರದೇಶ ಕಾಂಗ್ರೆಸ್ ಸಮಿತಿಯ ಒಬಿಸಿ ವಿಭಾಗದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಅವರು ಶುಕ್ರವಾರ ಸಂಜೆ ಕೊರ್ರಾ ಪ್ರದೇಶದ ಕ್ಯಾನರಿ ಹಿಲ್ ರಸ್ತೆಯಲ್ಲಿನ ತಾವು ಇತ್ತೀಚೆಗೆ ಖರೀದಿಸಿದ ಭೂಮಿಯಲ್ಲಿ ನಡೆಯುತ್ತಿದ್ದ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಲು ಹೋದಾಗ ಈ ಘಟನೆ ನಡೆದಿದೆ.

ಅಶೋಕ್ ಸಾವೊ ನೇತೃತ್ವದ ತಂಡ ಮೊದಲು ಜಮೀನು ವಿವಾದಕ್ಕೆ ಸಂಬಂಧಿಸಿ ಪ್ರಕಾಶ್ ಅವರ ಜೊತೆ ವಾಗ್ವಾದ ನಡೆಸಿದ್ದು, ಬಳಿಕ  ಅವರ ಮೇಲೆ ಗುಂಡು ಹಾರಿಸಿದೆ ಎಂದು ಡಿಎಸ್ಪಿ ರಾಜೀವ್ ಕುಮಾರ್ ಹೇಳಿದ್ದಾರೆ.

ಪ್ರಕಾಶ್ ಅವರನ್ನು ರಾಂಚಿಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಅವರ ಆರೋಗ್ಯದ ಮೇಲೆ ವೈದ್ಯರ ವಿಶೇಷ ತಂಡ ನಿಗಾ ಇಟ್ಟಿದೆ ಎಂದು ವರದಿ ತಿಳಿಸಿದೆ.

ಘಟನೆ ಬೆನ್ನಲ್ಲೇ ಪೊಲೀಸರು ಅಶೋಕ್ ಸಾವೊನನ್ನು ಬಂಧಿಸಿದ್ದಾರೆ. ಆದರೆ ಆತನ ಐವರು ಸಹಚರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರೆ. ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಉಳಿದ ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ.

ಇದನ್ನು ಓದಿ: ಮೊಹಮ್ಮದ್ ಫೈಜಲ್‌ರ ಸಂಸದ ಸ್ಥಾನ ಮರುಸ್ಥಾಪಿಸಿದ ಲೋಕಸಭೆ ಸೆಕ್ರೆಟರಿಯೇಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...