Homeಮುಖಪುಟಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

ಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

- Advertisement -
- Advertisement -

2024ರ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಬಿಜೆಪಿ ತನ್ನ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಿದೆ. ಆದರೆ ಅದರಲ್ಲಿ ಇರುವ ಪ್ರಧಾನ ವಿಚಾರ ಏನೆಂದರೆ ಪ್ರತಿ ಮೂರನೇ ಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರ. ಸುಮಾರು 76 ಪುಟಗಳ ಪ್ರಣಾಳಿಕೆಯಲ್ಲಿ ಮೋದಿ ಅವರ ಚಿತ್ರ 23 ಬಾರಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಜಾರ್ಖಂಡ್ ಬಿಜೆಪಿ ಪ್ರಣಾಳಿಕೆ

ಇದಕ್ಕೆ ವ್ಯತಿರಿಕ್ತವಾಗಿ, ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿಗಳಾದ ಬಾಬುಲಾಲ್ ಮರಾಂಡಿ ಮತ್ತು ಅರ್ಜುನ್ ಮುಂಡಾ ಸೇರಿದಂತೆ ಪಕ್ಷದ ಪ್ರಮುಖ ಆದಿವಾಸಿ ನಾಯಕರ ಚಿತ್ರ ಬಹುತೇಕ ಕಾಣಿಸಿಕೊಂಡಿಲ್ಲ ಎಂದು ವರದಿ ಉಲ್ಲೇಖಿಸಿದೆ. ಜೊತೆಗೆ, ಪ್ರಣಾಳಿಕೆಯಲ್ಲಿ ಮಹಿಳಾ ನಾಯಕರ ಪ್ರಾತಿನಿಧ್ಯದ ಕೊರತೆಯಿದ್ದು, ವಿಶೇಷವಾಗಿ ಆದಿವಾಸಿ ಮಹಿಳೆಯರಿಗೆ, ಮಹಿಳಾ ಸಬಲೀಕರಣಕ್ಕೆ ಪಕ್ಷಕ್ಕೆ ಇರುವ ಬದ್ಧತೆಯ ಬಗ್ಗೆ ಪ್ರಶ್ನೆಗಳು ಮುನ್ನಲೆಗೆ ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರಣಾಳಿಕೆಯ ಹಲವಾರು ಪುಟಗಳು ಮೋದಿಯವರ ಫೋಟೋಗಳಿಗೆ ಮಾತ್ರ ಸಂಪೂರ್ಣವಾಗಿ ಮೀಸಲಾಗಿದ್ದು, ಆದಿವಾಸಿ ನಾಯಕ ಮರಾಂಡಿ ಅವರ ಕೇವಲ ಎರಡು, ಅದೂ ಕೂಡಾ ಚಿಕ್ಕದಾದ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಣಾಳಿಕೆಯಲ್ಲಿ ಮೋದಿ ಕೇಂದ್ರ ಸ್ಥಾನದಲ್ಲಿರುವ ಛಾಯಾಚಿತ್ರದ ಹಿನ್ನೆಲೆಯಲ್ಲಿ ಮಾತ್ರ ಅರ್ಜುನ್ ಮುಂಡಾ ಅವರ ಚಿತ್ರ ಕಾಣಿಸಿಕೊಂಡಿದೆ. ಜಾರ್ಖಂಡ್ ಬಿಜೆಪಿ ಪ್ರಣಾಳಿಕೆ

ಬಿರ್ಸಾ ಮುಂಡಾ (1875-1900), ತೆಲಂಗಾ ಖರಿಯಾ (1806-1880), ಮತ್ತು ವೀರ್ ಬುಧು ಭಗತ್ (1792-1832) ನಂತಹ ಆದಿವಾಸಿ ಐಕಾನ್‌ಗಳಿಗೆ ಮೋದಿ ಗೌರವ ಸಲ್ಲಿಸುತ್ತಿರುವ ಚಿತ್ರಗಳು ಪ್ರಣಾಳಿಕೆಯಲ್ಲಿ ಕಂಡುಬರುತ್ತದೆ. ಮತ್ತೊಂದು ಚಿತ್ರದಲ್ಲಿ, ಮಹಿಳೆಯರ ಗುಂಪಿನ ನಡುವೆ ಮೋದಿಯನ್ನು ತೋರಿಸಲಾಗಿದೆ.

ಉಳಿದಂತೆ, ಪ್ರಧಾನ ಮಂತ್ರಿ ಕಿಸಾನ್ ಮಂಧನ್ ಯೋಜನೆಯಿಂದ ಪ್ರಯೋಜನಗಳನ್ನು ವಿತರಿಸುತ್ತಿರುವ ಮೋದಿ ಚಿತ್ರವಿದೆ. ಮತ್ತೊಂದು ಫೋಟೋದಲ್ಲಿ ಅವರು ಕುಂಬಾರರೊಬ್ಬರಿಂದ ಸಂವಹನ ನಡೆಸುತ್ತಿರುವುದು ಮತ್ತು ಇನ್ನೊಂದು ಚಿತ್ರ ಅವರು ಮಕ್ಕಳೊಂದಿಗೆ ತಮಾಷೆಯಾಗಿ ತೊಡಗಿಸಿಕೊಂಡಿರುವಂತೆ ತೋರಿಸಲಾಗಿದೆ.

ಅಷ್ಟೆ ಅಲ್ಲದೆ ಪ್ರಣಾಳಿಕೆಯ 67 ನೇ ಪುಟದಲ್ಲಿರುವ ದೊಡ್ಡ ಗಾತ್ರದ ಛಾಯಾಚಿತ್ರವು ಕೈಗಳನ್ನು ಮಡಚಿ, ಹಣೆಯ ಮೇಲೆ ಧಾರ್ಮಿಕ ಚಿಹ್ನೆಗಳು ಇರುವ ಚಿತ್ರನ್ನು ಹಾಕಲಾಗಿದ್ದು, ಅದರಲ್ಲಿ ಅವರು ಆರ್‌ಎಸ್‌ಎಸ್ ಕಾರ್ಯಕರ್ತ ಎಂಬ ಗುರುತನ್ನು ಸೂಚಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಹೊರತುಪಡಿಸಿ, ಪಕ್ಷದ ಯಾವುದೇ ಪ್ರಮುಖ ನಾಯಕರು ಪ್ರಣಾಳಿಕೆಯಲ್ಲಿ ಕಾಣಿಸಿಕೊಂಡಿಲ್ಲ

ಅಷ್ಟೆ ಅಲ್ಲದೆ, ಬಿಜೆಪಿ ಜಾರ್ಖಂಡ್ ಪ್ರಣಾಳಿಕೆಯು ಜಾರ್ಖಂಡ್‌ನ ದಲಿತ ಮತ್ತು ಒಬಿಸಿ ನಾಯಕರನ್ನು ಸಹ ಕೈಬಿಟ್ಟಿದೆ. ರಾಜ್ಯದಲ್ಲಿ ದಲಿತ (12%) ಮತ್ತು OBC ಸಮುದಾಯದ ಕಲ್ಯಾಣಕ್ಕಾಗಿ ಪಕ್ಷವು ಯಾವುದೇ ಗಣನೀಯ ಕಾರ್ಯಕ್ರಮವನ್ನು ನೀಡಿಲ್ಲ.

ರಾಜ್ಯದ ಇತರ ಹಿಂದುಳಿದ ಜಾತಿಗಳಿಗೆ ಪಕ್ಷವು OBC ಗಳಿಗೆ 27% ಮೀಸಲಾತಿಗೆ ನೀಡುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಅದಾಗ್ಯೂ, JMM ನೇತೃತ್ವದ ಹೇಮಂತ್ ಸೊರೆನ್ ಸರ್ಕಾರವು ವರ್ಷಗಳ ಹಿಂದೆಯೆ OBC ಮೀಸಲಾತಿಯನ್ನು ಈ ಮಟ್ಟಕ್ಕೆ ಹೆಚ್ಚಿಸಲು ಈಗಾಗಲೇ ನಿರ್ಧರಿಸಿದೆ.

ಇದಲ್ಲದೆ, ಸಂತಾಲ್ ಪರಗಣದಲ್ಲಿ “ಬಾಂಗ್ಲಾದೇಶಿ ನುಸುಳುಕೋರರ” ಬೆದರಿಕೆಯನ್ನು ಒತ್ತಿಹೇಳುವ ಮೂಲಕ ಆದಿವಾಸಿ ಮತದಾರರನ್ನು ಒಟ್ಟುಗೂಡಿಸುವ ಪ್ರಯತ್ನವನ್ನು ಬಿಜೆಪಿ ಮಾಡಿದ್ದರೂ, ರಾಜ್ಯದ ಮುಸ್ಲಿಂ ಅಲ್ಪಸಂಖ್ಯಾತರ ಕಡೆಗೆ ಯಾವುದೇ ಮಹತ್ವದ ಸೂಚನೆಗಳನ್ನು ನೀಡಿಲ್ಲ. ಮುಸ್ಲಿಂ ಅಲ್ಪಸಂಖ್ಯಾತರ (14.5%) ಜೊತೆಗೆ, ಜನಸಂಖ್ಯೆಯ 4.3% ರಷ್ಟಿರುವ ಕ್ರಿಶ್ಚಿಯನ್ ಸಮುದಾಯವನ್ನು ಕೂಡಾ ಬಿಜೆಪಿ ಪ್ರಣಾಳಿಕೆಯಲ್ಲಿ ನಿರ್ಲಕ್ಷಿಸಲಾಗಿದೆ.

ಇದನ್ನೂ ಓದಿ: ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...