Homeಮುಖಪುಟಜಾರ್ಖಂಡ್ ಚುನಾವಣೆ | ಮೊದಲ 35 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಜೆಎಂಎಂ

ಜಾರ್ಖಂಡ್ ಚುನಾವಣೆ | ಮೊದಲ 35 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಜೆಎಂಎಂ

- Advertisement -
- Advertisement -

ಮುಂಬರುವ ವಿಧಾನಸಭಾ ಚುನಾವಣೆಗೆ ಜಾರ್ಖಂಡ್ ಮುಕ್ತಿ ಮೋರ್ಚಾ ತನ್ನ 35 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಬರ್ಹೈತ್‌ ಕ್ಷೇತ್ರದಿಂದ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಗಂಡೇ ಕ್ಷೇತ್ರದಿಂದ ಅವರ ಪತ್ನಿ ಕಲ್ಪನಾ ಸೊರೆನ್ ಅವರನ್ನು ಕಣಕ್ಕಿಳಿಸಿದೆ. ನವೆಂಬರ್ 13 ಮತ್ತು 20 ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

ಸಾಹಿಬ್‌ಗಂಜ್ ಜಿಲ್ಲೆಯ ಬರ್ಹೈತ್ (ಎಸ್‌ಟಿ) ಕ್ಷೇತ್ರದ ಹಾಲಿ ಶಾಸಕರಾಗಿರುವ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು 2019 ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಹತ್ತಿರದ ಬಿಜೆಪಿ ಪ್ರತಿಸ್ಪರ್ಧಿ ಸೈಮನ್ ಮಾಲ್ಟೊ ಅವರಿಗಿಂತ 25,740 ಮತಗಳಿಂದ ಗೆದ್ದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅವರ ಪತ್ನಿ ಕಲ್ಪನಾ ಸೊರೆನ್ ಅವರು ತಮ್ಮ ಸಮೀಪದ ಬಿಜೆಪಿ ಪ್ರತಿಸ್ಪರ್ಧಿ ದಿಲೀಪ್ ಕುಮಾರ್ ವರ್ಮಾ ವಿರುದ್ಧ 27,149 ಮತಗಳಿಂದ ಗಂಡೇ ಉಪಚುನಾವಣೆಯಲ್ಲಿ ಜಯಗಳಿಸಿದ್ದರು. ಜೆಎಂಎಂ ಶಾಸಕ ಸರ್ಫರಾಜ್ ಅಹ್ಮದ್ ರಾಜೀನಾಮೆ ನೀಡಿದ ನಂತರ ಈ ಸ್ಥಾನ ತೆರವಾಗಿತ್ತು.  ಜಾರ್ಖಂಡ್

ಜೆಎಂಎಂ ಬಿಡುಗಡೆ ಮಾಡಿರುವ 35 ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಅವರ ಸಹೋದರ ಬಸಂತ್ ಸೊರೆನ್, ರಾಜ್ಯದ ಸ್ಪೀಕರ್ ರವೀಂದ್ರನಾಥ್ ಮಹತೋ, ಸಚಿವರಾದ ಮಿಥಿಲೇಶ್ ಠಾಕೂರ್, ಸೋನು ಸುದಿವ್ಯಾ ಗಿರಿದಿಹ್ ಮತ್ತು ಬೇಬಿ ದೇವಿ ಅವರ ಹೆಸರಿದೆ. ಬಸಂತ್ ಸೊರೆನ್ ಈ ಹಿಂದೆ ಜೆಎಂಎಂ ಭದ್ರಕೋಟೆಯಾದ ದುಮ್ಕಾದಲ್ಲಿ ಬಿಜೆಪಿಯ ಮಾಜಿ ಸಚಿವ ಲೋಯಿಸ್ ಮರಾಂಡಿ ಅವರನ್ನು 6,842 ಮತಗಳಿಂದ ಸೋಲಿಸಿದ್ದರು.

ಅಸೆಂಬ್ಲಿ ಸ್ಪೀಕರ್ ಮಹ್ತೋ ಅವರು ಕಳೆದ ಚುನಾವಣೆಯಲ್ಲಿ ಬಿಜೆಪಿಯ ಸತ್ಯಾನಂದ್ ಝಾ ಅವರನ್ನು ಸೋಲಿಸಿ 3,520 ಮತಗಳ ಅಂತರದಿಂದ ಜಮ್ತಾರಾದ ನಾಲಾ ಕ್ಷೇತ್ರವನ್ನು ಗೆದ್ದಿದ್ದರು. ಮಹತೋ ಈ ಹಿಂದೆ 2005 ಮತ್ತು 2014ರಲ್ಲಿ ಕೂಡಾ ಈ ಕ್ಷೇತ್ರವನ್ನು ಗೆದ್ದಿದ್ದರು.

ಜೆಎಂಎಂ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಇತ್ತೀಚೆಗಷ್ಟೆ ಬಿಜೆಪಿ ತೊರೆದು ಪಕ್ಷ ಸೇರಿದ ಶಾಸಕ ಕೇದರ್ ಹಜಾರಾ ಅವರ ಹೆಸರು ಕೂಡಾ ಇವೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳು ಒಟ್ಟಾಗಿ ಸ್ಪರ್ಧಿಸಲಿದ್ದು, ಕಾಂಗ್ರೆಸ್ ಮತ್ತು ಜೆಎಂಎಂ 81 ಸ್ಥಾನಗಳಲ್ಲಿ 70 ಸ್ಥಾನಗಳಿಗೆ ಸ್ಪರ್ಧಿಸಲಿದ್ದು, ಉಳಿದ 11 ಸ್ಥಾನಗಳಲ್ಲಿ ಆರ್‌ಜೆಡಿ ಮತ್ತು ಎಡ ಪಕ್ಷಗಳು ಸ್ಪರ್ಧಿಸಲಿವೆ. ಆರ್‌ಜೆಡಿ ಮಂಗಳವಾರ ಆರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ವಿರೋಧ ಪಕ್ಷದಲ್ಲಿ ಬಿಜೆಪಿ 68 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಎಜೆಎಸ್‌ಯು ಪಕ್ಷ 10, ಜೆಡಿಯು 2 ಮತ್ತು ಎಲ್‌ಜೆಪಿ (ರಾಮ್ ವಿಲಾಸ್) 1 ರಲ್ಲಿ ಸ್ಪರ್ಧಿಸಲಿದೆ.

ಮೊದಲ ಹಂತದ ಮತದಾನ ನವೆಂಬರ್ 13 ರಂದು ನಡೆಯಲಿದೆ. ರಾಜ್ಯದ 43 ವಿಧಾನಸಭಾ ಕ್ಷೇತ್ರಗಳಿಗೆ ಶುಕ್ರವಾರ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಅಕ್ಟೋಬರ್ 25 ಸಲ್ಲಿಕೆಗೆ ಕೊನೆಯ ದಿನವಾಗಿದೆ. ರಾಜ್ಯದಲ್ಲಿ ಒಟ್ಟು 2.60 ಕೋಟಿ ಮತದಾರರಿದ್ದು, 11.84 ಲಕ್ಷ ಮತದಾರರು ಮೊದಲ ಬಾರಿ ಮತ ಚಲಾವಣೆ ಮಾಡಲಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕ ಸಾರಿಗೆ ವ್ಯವಸ್ಥೆ ’ಜನಸ್ನೇಹಿ’ಯಾಗುವುದು ಯಾವಾಗ?

ಸಾರ್ವಜನಿಕ ಸಾರಿಗೆ ವ್ಯವಸ್ಥೆ ’ಜನಸ್ನೇಹಿ’ಯಾಗುವುದು ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...