Homeಮುಖಪುಟಜಾರ್ಖಂಡ್ ಚುನಾವಣೆ | ಎನ್‌ಡಿಎ ಸೀಟು ಹಂಚಿಕೆ ಪೂರ್ಣ - ಬಿಜೆಪಿ ಪ್ರತಿಪಾದನೆ

ಜಾರ್ಖಂಡ್ ಚುನಾವಣೆ | ಎನ್‌ಡಿಎ ಸೀಟು ಹಂಚಿಕೆ ಪೂರ್ಣ – ಬಿಜೆಪಿ ಪ್ರತಿಪಾದನೆ

- Advertisement -
- Advertisement -

ಮುಂಬರುವ ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಸೀಟು ಹಂಚಿಕೆ ಕುರಿತು ಎನ್‌ಡಿಎ ಒಮ್ಮತಕ್ಕೆ ಬಂದಿದೆ ಎಂದು ವರದಿಯಾಗಿದ್ದು, ರಾಂಚಿಯ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಮತ್ತು ಜಾರ್ಖಂಡ್‌ನ ಸಹ ಚುನಾವಣಾ ಉಸ್ತುವಾರಿಯು ಆಗಿರುವ ಹಿಮಂತ ಬಿಸ್ವಾ ಶರ್ಮಾ ಈ ಬಗ್ಗೆ ಘೋಷಿಸಿದ್ದಾರೆ. ಜಾರ್ಖಂಡ್ ಚುನಾವಣೆ

ಎನ್‌ಡಿಎ ನೇತೃತ್ವದ ಮೈತ್ರಿಯಲ್ಲಿ ಎಜೆಎಸ್‌ಯು 10 ಸ್ಥಾನಗಳಲ್ಲಿ, ಜೆಡಿಯು 2 ಸ್ಥಾನ, ಎಲ್‌ಜೆಪಿ 1 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಹಿಮಂತ ಶರ್ಮಾ ಘೋಷಿಸಿದ್ದು, ಉಳಿದ 68 ಸ್ಥಾನಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ ಎಂದು ಅವರು ತಿಳಿಸಿದ್ದಾರೆ. ನಾಮ ಪತ್ರ ಸಲ್ಲಿಸುವ ಅಂತಿಮ ದಿನಾಂಕದ ಮೊದಲು ಪರಿಸ್ಥಿತಿಯನ್ನು ಅವಲಂಬಿಸಿ ಒಂದು ಅಥವಾ ಎರಡು ಸ್ಥಾನಗಳಿಗೆ ಕೊನೆಯ ಕ್ಷಣದ ಬದಲಾವಣೆಗಳೂ ಸಂಭವಿಸಬಹುದು ಎಂದು ಅವರು ಹೇಳಿದ್ದಾರೆ. ಜಾರ್ಖಂಡ್ ಚುನಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಭ್ಯರ್ಥಿಗಳ ಘೋಷಣೆ ಕುರಿತು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ‘‘ಅದರ ಬಗ್ಗೆ ಕೂಡಾ ಶೀಘ್ರದಲ್ಲೆ, ಒಂದು ಅಥವಾ ಎರಡು ದಿನಗಳಲ್ಲಿ ತೀರ್ಮಾನಿಸಲಾಗುವುದು’’ ಎಂದು ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಮತ್ತು ಎಜೆಎಸ್‌ಯು ಮುಖ್ಯಸ್ಥ ಸುದೇಶ್ ಮಹತೋ ಉಪಸ್ಥಿತರಿದ್ದರು.

ಈ ಹಿಂದೆ, ಕೇಂದ್ರ ಸಚಿವ ಮತ್ತು ಜಾರ್ಖಂಡ್ ಚುನಾವಣಾ ಉಸ್ತುವಾರಿ ಶಿವರಾಜ್ ಸಿಂಗ್ ಚೌಹಾಣ್, ಬಿಜೆಪಿ, ಎಜೆಎಸ್‌ಯು, ಜೆಡಿಯು ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ಎನ್‌ಡಿಎ ಮೈತ್ರಿಯ ಅಡಿಯಲ್ಲಿ ಒಟ್ಟಾಗಿ ಚುನಾವಣೆಗಳನ್ನು ಎದುರಿಸಲಿವೆ ಮತ್ತು ಜಂಟಿಯಾಗಿ ಪ್ರಚಾರ ಮಾಡಲಿವೆ ಎಂದು ಖಚಿತಪಡಿಸಿದ್ದಾರೆ.

2024 ರ ಜಾರ್ಖಂಡ್ ವಿಧಾನಸಭಾ ಚುನಾವಣೆಯು ನವೆಂಬರ್ 13 ಮತ್ತು 20 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿಗೆ ಅಗೌರವ; ಐಪಿಎಸ್ ಅಧಿಕಾರಿ ಪಾಂಡಿಯನ್ ವಿರುದ್ಧ ದಲಿತರ ಪ್ರತಿಭಟನೆ

ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿಗೆ ಅಗೌರವ; ಐಪಿಎಸ್ ಅಧಿಕಾರಿ ಪಾಂಡಿಯನ್ ವಿರುದ್ಧ ದಲಿತರ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...