Homeಮುಖಪುಟಜಾರ್ಖಂಡ್: ವಿಶ್ವಾಸಮತ ಯಾಚನೆಯಲ್ಲಿ ಹೇಮಂತ್ ಸೊರೇನ್ ಭಾಗಿ; ಕೋರ್ಟ್ ಅನುಮತಿ

ಜಾರ್ಖಂಡ್: ವಿಶ್ವಾಸಮತ ಯಾಚನೆಯಲ್ಲಿ ಹೇಮಂತ್ ಸೊರೇನ್ ಭಾಗಿ; ಕೋರ್ಟ್ ಅನುಮತಿ

- Advertisement -
- Advertisement -

ಜಾರ್ಖಂಡ್ ರಾಜ್ಯದ ನೂತನ ಮುಖ್ಯಮಂತ್ರಿ ಚಂಪೈ ಸೊರೇನ್ ನೇತೃತ್ವದಲ್ಲಿ ಹೊಸದಾಗಿ ರಚನೆಯಾದ ಮಹಾಘಟಬಂಧನ್ (ಮಹಾ ಮೈತ್ರಿ) ಫೆಬ್ರವರಿ 5 ರಂದು ವಿಶ್ವಾಸಮತ ಪರೀಕ್ಷೆಯನ್ನು ಎದುರಿಸಲಿದೆ ಎಂದು ಕಾಂಗ್ರೆಸ್ ನಾಯಕ ಗುಲಾಮ್ ಅಹ್ಮದ್ ಮಿರ್ ಹೇಳಿದ್ದಾರೆ.

ಇಡಿ ಬಂಧನದಲ್ಲಿರುವ ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೆನ್‌ಗೆ ಫೆಬ್ರವರಿ 5 ರಂದು ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಯಲ್ಲಿ ಭಾಗವಹಿಸಲು ರಾಂಚಿಯ ವಿಶೇಷ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬುಧವಾರ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಸೊರೇನ್ ಅವರು ಹೊಸ ಸರ್ಕಾರ ಕೋರಿರುವ ವಿಶ್ವಾಸ ಮತದಲ್ಲಿ ಭಾಗವಹಿಸಲು ಅನುಮತಿ ಕೋರಿ ವಿಶೇಷ ಪಿಎಂಎಲ್ಎ (ಹಣ ಲಾಂಡರಿಂಗ್ ತಡೆ ಕಾಯ್ದೆ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ಮಾತನಾಡಿದ ಜಾರ್ಖಂಡ್‌ನ ಕಾಂಗ್ರೆಸ್ ಉಸ್ತುವಾರಿ ಮೀರ್, ವಿಶ್ವಾಸ ಮತ ಪರೀಕ್ಷೆ ಮುಗಿಯುವವರೆಗೆ ನಮ್ಮ ಶಾಸಕರು ‘ಸುರಕ್ಷಿತ ಸ್ಥಳದಲ್ಲಿ’ ಬಿಡಾರ ಹೂಡುತ್ತಾರೆ ಎಂದು ಹೇಳಿದರು.

ಚಂಪೈ ಸೊರೇನ್ ಪ್ರಮಾಣ ವಚನ ಸ್ವೀಕಾರದ ನಂತರ ಹೈದರಾಬಾದ್‌ಗೆ ತೆರಳಿರುವ ಆಡಳಿತಾರೂಢ ಮೈತ್ರಿಕೂಟದ ಹಲವು ಶಾಸಕರು, ಪ್ರಸ್ತುತ ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಗೆ ಮುನ್ನ ತೆಲಂಗಾಣ ರಾಜಧಾನಿಯ ಖಾಸಗಿ ರೆಸಾರ್ಟ್‌ನಲ್ಲಿ ತಂಗಿದ್ದಾರೆ.

‘ಹಾಲಿ ಮುಖ್ಯಮಂತ್ರಿಯೊಬ್ಬರು ಕೆಳಗಿಳಿದು ಪಕ್ಷದ ಸಹೋದ್ಯೋಗಿಗೆ ಅಧಿಕಾರ ಹಸ್ತಾಂತರಿಸುವುದು ಅನಿರೀಕ್ಷಿತ ಬೆಳವಣಿಗೆ. ಇಡೀ ಮೈತ್ರಿ ಕೂಟವು ಅವಿರೋಧವಾಗಿ ಹೇಮಂತ್ ಸೊರೇನ್ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿದೆ. ಔಪಚಾರಿಕವಾಗಿ ಮುಂದಿನ ಮುಖ್ಯಮಂತ್ರಿಯಾಗಿ ಅವರ ಹೆಸರನ್ನು ರಾಜ್ಯಪಾಲರಿಗೆ ಪ್ರಸ್ತಾಪಿಸಿದೆ. ನಿನ್ನೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಅವಕಾಶ ನೀಡಿದ್ದಕ್ಕಾಗಿ ನಾವು ರಾಜ್ಯಪಾಲರಿಗೆ ಕೃತಜ್ಞರಾಗಿರುತ್ತೇವೆ. ಫೆಬ್ರವರಿ 5 ರಂದು ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಗೆ ಮೈತ್ರಿಕೂಟವನ್ನು ಆಹ್ವಾನಿಸಲಾಗುವುದು. ಅಲ್ಲಿಯವರೆಗೆ ನಮ್ಮ ಎಲ್ಲ ಶಾಸಕರು ಸಂರಕ್ಷಿತ ಸ್ಥಳದಲ್ಲಿಯೇ ಇರುತ್ತಾರೆ’ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಆಪಾದಿತ ಭೂ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಿಎಂ ಹೇಮಂತ್ ಸೊರೇನ್ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಅಶಾಂತಿಯ ನಡುವೆ, ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕ ಚಂಪೈ ಸೊರೇನ್ ಅವರು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸೊರೇನ್ ಜೊತೆಗೆ ಕಾಂಗ್ರೆಸ್‌ನ ಅಲಂಗೀರ್ ಆಲಂ ಮತ್ತು ಆರ್‌ಜೆಡಿಯ ಸತ್ಯಾನಂದ್ ಭೋಕ್ತಾ ಕೂಡ ಜಾರ್ಖಂಡ್ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ 29, ಅದರ ಮಿತ್ರ ಪಕ್ಷ ಕಾಂಗ್ರೆಸ್ 17 ಸ್ಥಾನಗಳನ್ನು ಹೊಂದಿದ್ದರೆ. ಆರ್‌ಜೆಡಿ ಮತ್ತು ಸಿಪಿಐ (ಎಂಎಲ್) ತಲಾ 1 ಸ್ಥಾನಗಳನ್ನು ಹೊಂದಿವೆ.

ಜೆಎಂಎಂ ನಾಯಕ ಹೇಮಂತ್ ಸೊರೇನ್ ಅವರ ನಿಷ್ಠಾವಂತ ಚಂಪೈ ಸೊರೇನ್ ಮತ್ತು 43 ಶಾಸಕರು ಗುರುವಾರ ರಾಜಭವನದಲ್ಲಿ ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು.

ರಾಜ್ಯದ ಸಾರಿಗೆ ಸಚಿವರಾಗಿರುವ ಚಂಪೈ ಅವರು ಏಳು ಬಾರಿ ಶಾಸಕರಾಗಿದ್ದಾರೆ ಮತ್ತು ಅವರು ಜಾರ್ಖಂಡ್‌ನ ಸೆರೈಕೆಲ್ಲಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಜೆಎಂಎಂ ಸೇರುವ ಮುನ್ನ ಸ್ವತಂತ್ರ ಶಾಸಕರಾಗಿದ್ದರು.

ಹೇಮಂತ್ ಸೊರೇನ್‌ಗೆ ಕೋರ್ಟ್ ಅನುಮತಿ:

ಕಳೆದ ಬುಧವಾರ ಬಂಧಿತರಾಗಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಫೆಬ್ರವರಿ 5 ರಂದು ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಯಲ್ಲಿ ಭಾಗವಹಿಸಲು ರಾಂಚಿಯ ವಿಶೇಷ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸೊರೇನ್ ಅವರು ಹೊಸ ಸರ್ಕಾರ ಕೋರಿರುವ ವಿಶ್ವಾಸ ಮತದಲ್ಲಿ ಭಾಗವಹಿಸಲು ಅನುಮತಿ ಕೋರಿ ವಿಶೇಷ ಪಿಎಂಎಲ್ಎ (ಹಣ ಲಾಂಡರಿಂಗ್ ತಡೆ ಕಾಯ್ದೆ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಶುಕ್ರವಾರ ನ್ಯಾಯಾಲಯ ಅವರನ್ನು ಐದು ದಿನಗಳ ಕಾಲ ಇಡಿ ವಶಕ್ಕೆ ಒಪ್ಪಿಸಿದೆ. ತಾನು ವಿಧಾನಸಭೆಯ ಸದಸ್ಯರಾಗಿದ್ದು, ವಿಶೇಷ ಅಧಿವೇಶನದಲ್ಲಿ ಭಾಗವಹಿಸುವ ಹಕ್ಕಿದೆ ಎಂದು ಸೊರೇನ್ ನ್ಯಾಯಾಲಯದ ಮುಂದೆ ಮನವಿ ಮಾಡಿದರು.

ಇದನ್ನೂ ಓದಿ; ಬಿಜೆಪಿ ಪರ ಪ್ರಚಾರಕ್ಕೆ ತೆರಳಲು ಸಾರ್ವಜನಿಕ ಬೊಕ್ಕಸದ ಕೋಟ್ಯಾಂತರ ರೂ. ಹಣ ಬಳಸಿದ ಅಸ್ಸಾಂ ಸಿಎಂ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ಹಿಂದೂ ಸಮಾಜಕ್ಕಂಟಿದ ‘ಕಳಂಕ’: ಆರ್‌ಎಸ್‌ಎಸ್ ಮುಖಂಡ ದತ್ತಾತ್ರೇಯ ಹೊಸಬಾಳೆ

"ಜಾತಿ ಆಧಾರಿತ ತಾರತಮ್ಯವು ಹಿಂದೂ ಸಮಾಜಕ್ಕಂಟಿದ ಕಳಂಕ, ಕೇವಲ ಕಾನೂನುಗಳಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ಕೊನೆಗೊಳಿಸಲು ಸಾಧ್ಯವಿಲ್ಲ, ಇದಕ್ಕೆ ಪ್ರತಿಯೊಬ್ಬ ವ್ಯಕ್ತಿಯ ನಡವಳಿಕೆಯಲ್ಲಿ ಬದಲಾವಣೆಯಾಗುವ ಅಗತ್ಯವಿದೆ" ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌)...

ಎಸ್‌ಐಆರ್‌ನ ಮೂರು ಹಂತಗಳಲ್ಲಿ 13.98 ಕೋಟಿ ಮತದಾರರು ಹೊರಕ್ಕೆ; 5.43 ಕೋಟಿ ಮತದಾರರಿಗೆ ಅಳಿಸುವಿಕೆಯ ಭೀತಿ: ಕಾಂಗ್ರೆಸ್ 

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ದೇಶದ ಕೋಟ್ಯಂತರ ಮತದಾರರ ಹಕ್ಕಿನ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. SIRನ...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ : ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ (ಸೆ.21) ಆದೇಶಿಸಿದೆ. ಈ ಪ್ರಕರಣದಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮೂರು ತಿಂಗಳೊಳಗೆ ಅನುಪಾಲನಾ ವರದಿಯನ್ನು (compliance report)...

1,400 ಮುಸ್ಲಿಂ ಕುಟುಂಬಗಳ ಬದುಕು ಕಸಿದುಕೊಂಡ ಭೂಮಿಯಲ್ಲಿ ಅದಾನಿ ವಿದ್ಯುತ್ ಯೋಜನೆಗೆ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಅಡಿಪಾಯ

ಗುವಾಹಟಿ: ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,400 ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ತೆರವುಗೊಳಿಸಿ, ಅವರ ಮನೆಗಳನ್ನು ನೆಲಸಮಗೊಳಿಸಿದ ಪ್ರದೇಶದಲ್ಲೇ ಅದಾನಿ ಪವರ್ ಲಿಮಿಟೆಡ್‌ನ 3,200 ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಯೋಜನೆಗೆ...

ಮಧುಗಿರಿ: ಗಣೇಶೋತ್ಸವದಲ್ಲಿ ಕುಣಿದಿದ್ದಕ್ಕೆ 17 ವರ್ಷದ ದಲಿತ ಬಾಲಕನ ಕೊಲೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ ದಲಿತ ಸಮುದಾಯದ17 ವರ್ಷದ ಬಾಲಕ ಸಿಂಹಾದ್ರಿಯನ್ನು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಘಟನೆಯ...

DELHI SIR : ಕರಡು ಪಟ್ಟಿಯಲ್ಲಿ 2024ರಲ್ಲಿ ನಿಧನರಾದ ಅರ್ಥಶಾಸ್ತ್ರಜ್ಞ ಬಿಬೇಕ್ ದೆಬ್ರಾಯ್ ಹೆಸರು!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಬೆಳಕಿಗೆ ಬರುತ್ತಿವೆ. ಇತ್ತೀಚಿನ ವರದಿಗಳ ಪ್ರಕಾರ, 2024ರಲ್ಲಿ ನಿಧನರಾದ ಪದ್ಮ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಬಿಬೆಕ್ ದೆಬ್ರಾಯ್ ಅವರ...

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...