Homeಮುಖಪುಟಜಾರ್ಖಂಡ್: ನ್ಯಾಯಾಂಗ ಬಂಧನಕ್ಕೆ ಹೇಮಂತ್, ಸರ್ಕಾರ ರಚಿಸುವಂತೆ ಚಂಪೈಗೆ ರಾಜ್ಯಪಾಲರಿಂದ ಆಹ್ವಾನ

ಜಾರ್ಖಂಡ್: ನ್ಯಾಯಾಂಗ ಬಂಧನಕ್ಕೆ ಹೇಮಂತ್, ಸರ್ಕಾರ ರಚಿಸುವಂತೆ ಚಂಪೈಗೆ ರಾಜ್ಯಪಾಲರಿಂದ ಆಹ್ವಾನ

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯದಿಂದ (ಇಡಿ) ಬುಧವಾರ ತಡರಾತ್ರಿ ಬಂಧಿಸಲ್ಪಟ್ಟ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಒಂದು ದಿನದ ಅವಧಿಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, 10 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೇಂದ್ರ ತನಿಖಾ ಸಂಸ್ಥೆಯ ಕೋರಿಕೆಯ ಕುರಿತು ತೀರ್ಪು ಶುಕ್ರವಾರ ಮಧ್ಯಾಹ್ನ ಹೊರಬೀಳುವ ನಿರೀಕ್ಷೆ ಇದೆ. ಮತ್ತೊಂದು ಕಡೆ, ಹೊಸ ಜಾರ್ಖಂಡ್ ಸರ್ಕಾರ ರಚಿಸಲು ರಾಜ್ಯಪಾಲರು ತಮ್ಮನ್ನು ಆಹ್ವಾನಿಸಿದ್ದಾರೆ ಎಂದು ಸಾರಿಗೆ ಸಚಿವ ಚಂಪೈ ಸೊರೇನ್ ಹೇಳಿದ್ದಾರೆ.

₹600 ಕೋಟಿ ಭೂ ಹಗರಣದಲ್ಲಿ ಹೇಮಂತ್ ಸೊರೇನ್ ನೇರವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಆರೋಪಿಸಿದ್ದು, ರಾಂಚಿ ವಿಶೇಷ ನ್ಯಾಯಾಲಯದ ಮುಂದೆ ಇಂದು ಬೆಳಗ್ಗೆ ಹಾಜರುಪಡಿಸಿದ್ದರು. ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಸೊರೇನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಂಡ ಕಾರಣ ಅಂತಿಮ ಆದೇಶವನ್ನು ನೀಡುವಲ್ಲಿ ವಿಳಂಬವಾಗಿದೆ.

ಸೊರೇನ್ ಅವರನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವ ಕೆಲವೇ ಗಂಟೆಗಳ ಮೊದಲು, ಜಾರಿ ನಿರ್ದೇಶನಾಲಯವು ತನ್ನ ಬಂಧನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ತನ್ನ ಅರ್ಜಿಯಲ್ಲಿ, ಸಂಸ್ಥೆಯು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದೆ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ದುರುಪಯೋಗಪಡಿಸಿಕೊಂಡಿದೆ ಎಂದು ಹೇಳಿದರು.

ತನ್ನ ಬಂಧನವು ‘ಕಾನೂನುಬಾಹಿರ ಮತ್ತು ಕಾನೂನು ವ್ಯಾಪ್ತಿ ಮೀರಿದೆ’ ಎಂದು ಹೇಳಿದ್ದಾರೆ. ಸೊರೇನ್ ಅವರು ಈಗಾಗಲೇ ತನಿಖಾ ಸಂಸ್ಥೆಯ ಹಿರಿಯ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

‘ಇಡಿ ಕೇಂದ್ರ ಸರ್ಕಾರದ (ಆದೇಶ) ಅಡಿಯಲ್ಲಿ ನಿರ್ಲಜ್ಜವಾಗಿ ವರ್ತಿಸುತ್ತಿದೆ ಮತ್ತು ಅರ್ಜಿದಾರರ ನೇತೃತ್ವದ ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಬೇಟೆಯಾಡುತ್ತಿದೆ…” ಎಂದು ಅವರು ದೂರಿದರು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಅರ್ಜಿಯ ವಿಚಾರಣೆಗೆ ಸಮ್ಮತಿಸಿದೆ.

ಸರ್ಕಾರ ರಚನೆಗೆ ಚಂಪೈ ಸೊರೇನ್‌ಗೆ ಆಹ್ವಾನ:

ಜಾರ್ಖಂಡ್ ಗವರ್ನರ್ ಸಿಪಿ ರಾಧಾಕೃಷ್ಣನ್ ಅವರು ರಾಜ್ಯದ ಸಾರಿಗೆ ಸಚಿವ ಚಂಪೈ ಸೊರೇನ್ ಅವರನ್ನು ಮುಂದಿನ ಸರ್ಕಾರ ರಚಿಸಲು ಗುರುವಾರ ಸಂಜೆ ಆಹ್ವಾನಿಸಿದ್ದಾರೆ. ಆದರೆ, ರಾಧಾಕೃಷ್ಣನ್ ಅವರು ಸೋರೆನ್ ಅವರ ಪ್ರಮಾಣವಚನಕ್ಕೆ ಸಮಯ ಮತ್ತು ದಿನಾಂಕವನ್ನು ನಿಗದಿಪಡಿಸಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್‌ಜೆಡಿ ಮೈತ್ರಿಕೂಟದ 43 ಶಾಸಕರ ಬೆಂಬಲವನ್ನು ಹೊಂದಿರುವ ಚಂಪೈ ಸೊರೇನ್ ಅವರು ಇಂದು ಸಂಜೆ ರಾಂಚಿಯ ಅವರ ನಿವಾಸದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಹೊಸ ಸರ್ಕಾರ ರಚನೆಗೆ ತಮ್ಮನ್ನು ಕರೆಯುವಂತೆ ಒತ್ತಾಯಿಸಿದರು.

ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕ ಹೇಮಂತ್ ಸೊರೇನ್ ಅವರನ್ನು ನಿನ್ನೆ ಸಂಜೆ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧಿಸಿದ ನಂತರ, ಚಂಪೈ ಸೊರೇನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ.

ಇದನ್ನೂ ಓದಿ; ಬಿಜೆಪಿಗೆ ಸಹಾಯ ಮಾಡಲು ಕಾಂಗ್ರೆಸ್ -ಸಿಪಿಐ(ಎಂ) ಮೈತ್ರಿ ಮಾಡಿಕೊಂಡಿವೆ: ಮಮತಾ ಬ್ಯಾನರ್ಜಿ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ದೆಹಲಿ ಜನರು ನಮಗೆ 56% ಮತ ನೀಡಿದ್ದಾರೆ, ಅವರು ಪಾಕಿಸ್ತಾನಿಗಳೇ..?’; ಅಮಿತ್‌ ಶಾ ವಿರುದ್ಧ...

0
'ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದ ಕಾರಣ ಅವರು ಅಹಂಕಾರಿಯಾಗಿದ್ದಾರೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್...